Anna Bhagya Scheme: ಅನ್ನಭಾಗ್ಯ ಯೋಜನೆ ಘೋಷಿಸಿದ ಸಿಎಂ ಸಿದ್ಧರಾಮಯ್ಯ: ಜು.1ರಿಂದ ಜಾರಿ

|

Updated on: Jun 02, 2023 | 4:18 PM

ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರಧಾನ್ಯವನ್ನು ಜುಲೈ 1ರಿಂದ ವಿತರಿಸಲು ನಿರ್ಧಾರ ಮಾಡಲಾಗಿದೆ.

Anna Bhagya Scheme: ಅನ್ನಭಾಗ್ಯ ಯೋಜನೆ ಘೋಷಿಸಿದ ಸಿಎಂ ಸಿದ್ಧರಾಮಯ್ಯ: ಜು.1ರಿಂದ ಜಾರಿ
ಅನ್ನಭಾಗ್ಯ ಯೋಜನೆ
Follow us on

ಬೆಂಗಳೂರು: ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ (Anna Bhagya Scheme) ಯೋಜನೆಯಡಿ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರಧಾನ್ಯ ವಿತರಿಸಲಾಗುವುದು. ಜುಲೈ 1ರಿಂದ 10 ಕೆಜಿ ಆಹಾರಧಾನ್ಯ ನೀಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ ಶುಕ್ರವಾರ ಘೋಷಿಸಿದರು. ಸಚಿವ ಸಂಪುಟ ಸಭೆಯ ಬಳಿಕ  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 3ನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದರು. ಸದ್ಯ ಎಲ್ಲರಿಗೂ 10 ಕೆಜಿ ಕೊಡುವಷ್ಟು ಸಂಗ್ರಹ ಇಲ್ಲದ ಕಾರಣ ಜುಲೈ 1 ರಿಂದ ವಿತರಣೆ ಮಾಡಲಾಗುವು ಎಂದು ತಿಳಿಸಿದರು.

ಈ ಹಿಂದೆ ಇದ್ದ ಬಿಜೆಪಿ ಸರ್ಕಾರ 7 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಕೊಡುತ್ತಿತ್ತು. ಚುನಾವಣಾ ಸಂದರ್ಭದಲ್ಲಿ ನಾವು ಅಧಿಕಾರಕ್ಕೆ ಬಂದರೆ ಉಚಿತ 10 ಕೆಜೆ ಅಕ್ಕಿ ನೀಡುವುದಾಗಿ ಭರವಸೆಯನ್ನು ನೀಡಿದ್ದೇವು ಎಂದು ಹೇಳಿದರು. ಅದರಂತೆ ಬಿಪಿಎಲ್​ ಕಾರ್ಡ್​ ಹೊಂದಿರುವ ಪ್ರತಿ ಕುಟುಂಬಗಳಿಗೆ 10 ಕೆಜಿ ಆಹಾರಧಾನ್ಯವನ್ನು ಜುಲೈ 1ರಿಂದ ಒದಗಿಸಲಾಗುತ್ತಿದೆ.

ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್​ಗಳೇನು? ಇಲ್ಲಿದೆ ವಿವರ

ಫ್ರೀ ಅಕ್ಕಿ.. 1400 ಕೋಟಿ ರೂ. ಹೊರೆ ಸಾಧ್ಯತೆ

ಪ್ರತಿಯೊಬ್ಬರಿಗೂ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಅಕ್ಕಿ ಖರೀದಿಗೆ ಅಂದಾಜು 1 ಸಾವಿರದ 400 ಕೋಟಿ ರೂಪಾಯಿ ವ್ಯಯ ಮಾಡಬೇಕಾಗುತ್ತೆ. ಕೇಂದ್ರ ಸರ್ಕಾರ ಕೊಡುತ್ತಿರುವ 5 ಕೆಜಿ ಅಕ್ಕಿಗೆ ಏನಾದ್ರೂ ಕಂಡಿಷನ್ ಹಾಕಿದ್ರೆ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಮಸ್ಯೆ ಮತ್ತಷ್ಟು ಜಟಿಲವಾಗಬಹುದು. ಅಲ್ಲದೇ, ಕೇಂದ್ರ ಸರ್ಕಾರದ 5 ಕೆಜಿ ಹೊರತಾಗಿ 10 ಕೆಜಿ ನೀಡುವಂತೆ ವಿಪಕ್ಷ ಪಟ್ಟು ಹಿಡಿದಿದ್ದು, ಬಿಪಿಎಲ್ ಕುಟುಂಬಗಳ ಮಾಹಿತಿ ಆಧರಿಸಿ ಅಕ್ಕಿ ನೀಡಲು ಕಾಂಗ್ರೆಸ್ ಲೆಕ್ಕಾಚಾರ ಮಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:39 pm, Fri, 2 June 23