SC ST ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟ: ಯಾರ್ಯಾರು ಏನಂದ್ರು?

ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಎಸ್ಸಿ ಸಮುದಾಯಕ್ಕೆ ಶುಕ್ರವಾರ ಭರ್ಜರಿ ಗಿಫ್ಟ್​​ ನೀಡಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿದೆ.

SC ST ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟ: ಯಾರ್ಯಾರು ಏನಂದ್ರು?
ಮೀಸಲಾತಿ ಹೆಚ್ಚಳ ಕೇವಲ ಬಿಜೆಪಿಯ ಕಣ್ಣೊರೆಸುವ ತಂತ್ರ ಎಂಬ ಪ್ರಚಾರ ಮೀಸಲಾತಿ ಹೆಚ್ಚಳ ಕೇವಲ ಬಿಜೆಪಿಯ ಕಣ್ಣೊರೆಸುವ ತಂತ್ರ ಎಂಬ ಪ್ರಚಾರ(ಮುಸಲ್ಮಾನ್ ಮೀಸಲಾತಿಯನ್ನು ಪುನರ್ ಸ್ಥಾಪಿಸುವ ಚಿಂತನೆ)Image Credit source: theleaflet.in
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 24, 2023 | 9:15 PM

ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಎಸ್ಸಿ ಸಮುದಾಯಕ್ಕೆ ಶುಕ್ರವಾರ ಭರ್ಜರಿ ಗಿಫ್ಟ್​​ ನೀಡಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ (reservation) ಪ್ರಕಟಿಸಿದೆ. ಇಂದು ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಎರಡು ಬೃಹತ್ ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ಸರ್ಕಾರ ಮಾಡಿದೆ. ಮೀಸಲಾತಿ ಕುರಿತಾಗಿ ರಾಜಕೀಯ ನಾಯಕರುಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ.

ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಿದ್ದು ಕ್ರಾಂತಿಕಾರಿ‌ ನಿರ್ಧಾರ: ಸಿ.ಟಿ.ರವಿ 

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ಸಂಪುಟ ಸಭೆ ಇಂದು ಕ್ರಾಂತಿಕಾರಿ ನಿಲುವು ತೆಗೆದುಕೊಂಡಿದೆ. ಎಲ್ಲಾ ವರ್ಗಗಳಿಗೂ ನ್ಯಾಯ ಕಲ್ಪಿಸುವ ಕೆಲಸ ಮಾಡಿದ್ದಾರೆ. ಸರ್ಕಾರ ಇಂದು ಒಳ ಮೀಸಲಾತಿ ಜಾರಿಗೆ ತಂದಿದೆ. ಒಳ ಮೀಸಲಾತಿ ಬಗ್ಗೆ ಕಾಂಗ್ರೆಸ್, ಜೆಡಿಎಸ್​ನಿಂದ​ ಮೂಗಿಗೆ ತುಪ್ಪ ಹಚ್ಚುತ್ತಿದ್ದವು. ಮತೀಯ ಆಧಾರದಲ್ಲಿ ನೀಡುತ್ತಿದ್ದ ಮೀಸಲಾತಿಯನ್ನು ಆಂಧ್ರಪ್ರದೇಶದಲ್ಲಿ ಕೋರ್ಟ್​​ ರದ್ದುಗೊಳಿಸಿತ್ತು.

ಇದನ್ನೂ ಓದಿ: Cabinet Decision: ಮುಸ್ಲಿಮರ 2ಬಿ ಮೀಸಲಾತಿ ರದ್ದು, ಒಕ್ಕಲಿಗ, ಲಿಂಗಾಯತರಿಗೆ ಹೆಚ್ಚಳ; ಸಿಎಂ ಬೊಮ್ಮಾಯಿ ಘೋಷಣೆ

ಇಲ್ಲಿ ಯಾರೂ ಕೋರ್ಟ್​​ಗೆ ಹೋಗದಿದ್ದಕ್ಕೆ ಮೀಸಲಾತಿ ಹಾಗೇ ಇತ್ತು. ಡಾ. ಅಂಬೇಡ್ಕರ್ ಮತೀಯ ಆಧಾರದ ಮೀಸಲಾತಿ ಬೇಡ ಅಂದಿದ್ದರು. ಮತೀಯ ಆಧಾರದಲ್ಲಿ ಮೀಸಲಾತಿ ನೀಡುವುದಕ್ಕೆ ವಿರೋಧಿಸಿದ್ದರು. ಆದರೂ 1994ರಲ್ಲಿ ಮತೀಯ ಮೀಸಲಾತಿ ನೀಡಲಾಗಿತ್ತು. ಈಗ EWS​ನಲ್ಲಿ ಮುಸ್ಲಿಮರನ್ನು ಸೇರಿಸಿರುವುದನ್ನು ಸ್ವಾಗತಿಸುತ್ತೇನೆ. ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಿದ್ದು ಕ್ರಾಂತಿಕಾರಿ‌ ನಿರ್ಧಾರ ಎಂದು ಹೇಳಿದರು.

ಆದಷ್ಟು ಬೇಗ ಮೀಸಲಾತಿ ಬಳಕೆಗೆ ಅವಕಾಶ ಮಾಡಿಕೊಡಬೇಕು: ನಿರ್ಮಲಾನಂದನಾಥಶ್ರೀ 

ಟಿವಿ9ಗೆ ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥಶ್ರೀ ಹೇಳಿಕೆ ನೀಡಿದ್ದು, 2ಸಿ ಅಡಿ ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ ನೀಡಿದ್ದನ್ನು ಸ್ವಾಗತಿಸುವೆ. ಜನಸಂಖ್ಯೆಗೆ ಅನುಗುಣವಾಗಿ ಶೇಕಡಾ 12ರಷ್ಟು ಮೀಸಲಾತಿ ಬೇಕಿತ್ತು. ಆದರೆ ಸರ್ಕಾರ 2ಸಿ ಅಡಿ ಶೇಕಡಾ 6ರಷ್ಟು ಮೀಸಲಾತಿ ನೀಡಿದೆ. ಶೇಕಡಾ 2ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದನ್ನು ಸ್ವಾಗತಿಸುತ್ತೇವೆ. ಕಾನೂನು, ಸಂವಿಧಾನದ ಚೌಕಟ್ಟಿನಲ್ಲಿ ಸರ್ಕಾರ ಕ್ರಮಕೈಗೊಂಡಿದೆ. ಆದಷ್ಟು ಬೇಗ ಮೀಸಲಾತಿ ಬಳಕೆಗೆ ಅವಕಾಶ ಮಾಡಿಕೊಡಬೇಕು ಎಂದರು.

ಇದನ್ನೂ ಓದಿ: ಸಾಗರದಲ್ಲಿ ಭದ್ರತೆಯನ್ನು ಬಲಪಡಿಸುವ ಅಗತ್ಯವಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಿಸಿದ ಶಾಸಕ ಅರವಿಂದ ಬೆಲ್ಲದ್

ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದು, ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿರುವುದು ಸಂತಸದ ವಿಚಾರ. ಎಲ್ಲರಿಗೂ ನ್ಯಾಯ ಕೊಡುವ ರೀತಿಯಲ್ಲಿ ಬೊಮ್ಮಾಯಿ ಸರ್ಕಾರ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಪಂಚಮಸಾಲಿ ಹೋರಾಟಕ್ಕೆ ಶ್ರಮಿಸಿದ ಸ್ವಾಮೀಜಿಗೆ ಅಭಿನಂದನೆ. ಸರ್ಕಾರದ ಮೀಸಲಾತಿ ನಿರ್ಧಾರ ಪಂಚಮಸಾಲಿ ಒಪ್ಪಿಕೊಳ್ಳುತ್ತದೆ. ಸಮುದಾಯಕ್ಕೆ ಆಗಿದ್ದ ಅನ್ಯಾಯ ಸರಿಪಡಿಸಲು ಅವಕಾಶವಾಗುತ್ತೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:15 pm, Fri, 24 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ