Anti Conversion Bill 2021: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ
ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು.
ಬೆಳಗಾವಿ: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ಮಂಡಿಸಲಾಯಿತು. ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು.
ಇಂಥ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ ತರ್ತೀರಿ. ಸರ್ಕಾರ ಕಳ್ಳತನದಿಂದ ವಿಧೇಯಕ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪಿಸಿದರು.
ರಾಜ್ಯ ಸರ್ಕಾರವು ಪ್ರಸ್ತಾಪಿಸಿರುವ ಮತಾಂತರ ನಿಷೇಧ ಮಸೂದೆಯಲ್ಲಿ ಈ ಕೆಳಕಂಡ ಅಂಶಗಳಿವೆ… 1) ಬಲವಂತದ ಮತಾಂತರ ಶಿಕ್ಷಾರ್ಹ ಎಂಬ ಪ್ರಕಾರವೇ ವಿಧೇಯಕ ಸಿದ್ಧತಾ ಹಂತದಲ್ಲಿದೆ 2) ಯಾವುದೇ ವ್ಯಕ್ತಿ ಅಥವಾ ಸಮುದಾಯದ ಬಲವಂತದ ಮತಾಂತರ ಮಾಡುವಂತಿಲ್ಲ 3) ವ್ಯಕ್ತಿ ಮತಾಂತರ ಹೊಂದಬೇಕಾದರೆ ಸಕ್ಷಮ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು 4) ಮತಾಂತರ ಪ್ರಕ್ರಿಯೆ ನಡೆಸಬೇಕಾದರೂ ಸಕ್ಷಮ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲು ಅರ್ಜಿ ಸಲ್ಲಿಸಬೇಕು 5) ಅರ್ಜಿ ಸಲ್ಲಿಸಿದ ವ್ಯಕ್ತಿ ತನ್ನ ಇಚ್ಛೆಗೆ ಅನುಗುಣವಾಗಿ ನೀಡಿರುವ ಅರ್ಜಿ ಹಿಂಪಡೆಯಲು ಸ್ವತಂತ್ರ 6) ಮತಾಂತರ ಆಗಲು ಬಯಸುವ ವ್ಯಕ್ತಿಯ ಖಾಸಗಿತನ ಕಾಪಾಡಲು ಮತ್ತು ಧಾರ್ಮಿಕ ಹಕ್ಕನ್ನು ಕಾಪಾಡಲು ಮತಾಂತರ ಪ್ರಕ್ರಿಯೆ ಗೌಪ್ಯವಾಗಿಡುವಂತಿಲ್ಲ 7) ಮತಾಂತರ ಪ್ರಕ್ರಿಯೆಯೊಳಗೆ ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ತೊಡಗುವಂತೆ ಮಾಡಲು ಅವಕಾಶವಿಲ್ಲ 8) ಬಲವಂತದ ಮತಾಂತರ ಮಾಡುವ ಅಥವಾ ಮತಾಂತರಕ್ಕೆ ಪ್ರಚೋದನೆ ನೀಡುವ ವ್ಯಕ್ತಿಯನ್ನು ಬಂಧಿಸಲು ಅವಕಾಶ 9) ಬಂಧಿತನಾಗುವ ವ್ಯಕ್ತಿಗೆ ಜಾಮೀನು ಪಡೆಯಲು ಅವಕಾಶ ಇಲ್ಲದಂತೆ, ಜಾಮೀನುರಹಿತ ಎಂದು ಪರಿಗಣಿಸುವುದು 10) ಮತಾಂತರ ಪ್ರಕ್ರಿಯೆ ಯಾವುದೇ ಧಾರ್ಮಿಕ ಕಟ್ಟಡಗಳು, ಪ್ರಾರ್ಥನಾ ಕೇಂದ್ರಗಳಲ್ಲಿ ಮಾಡುವಂತಿಲ್ಲ 11) ಮತಾಂತರ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆಯುತ್ತಿದ್ದಲ್ಲಿ ನಿಗದಿತ ಪ್ರಕ್ರಿಯೆಯನ್ನು ತಟಸ್ಥ ಪ್ರದೇಶದಲ್ಲಿ ಮಾಡುವುದು ಕಡ್ಡಾಯ
(ಮಂಡನೆಯಾಗಿರುವ ವಿಧೇಯಕದಲ್ಲಿ ಕೆಲ ಅಂಶಗಳು ಬದಲಾವಣೆ ಆಗಿರಬಹುದು)
ಇದನ್ನೂ ಓದಿ: Karnataka Anti Conversion Bill 2021: ಮತಾಂತರ ನಿಷೇಧ ಮಸೂದೆಗೆ ಸಂಪುಟ ಒಪ್ಪಿಗೆ ಇದನ್ನೂ ಓದಿ: New Year 2022 Guidelines: ಹೊಸ ವರ್ಷಾಚರಣೆ, ಕ್ರಿಸಮಸ್ ಆಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Published On - 3:44 pm, Tue, 21 December 21