Gruha Jyothi Scheme: ಇಂದಿನಿಂದ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಆರಂಭ

| Updated By: ವಿವೇಕ ಬಿರಾದಾರ

Updated on: Jun 18, 2023 | 7:26 AM

ಜುಲೈ 1ರಿಂದ ಜುಲೈ 1ರಿಂದ ಜಾರಿಯಾಗಲಿರುವ ಸರ್ಕಾರದ ಎರಡನೇ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Gruha Jyothi Scheme: ಇಂದಿನಿಂದ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಆರಂಭ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಜುಲೈ 1ರಿಂದ ಜುಲೈ 1ರಿಂದ ಜಾರಿಯಾಗಲಿರುವ ಸರ್ಕಾರದ ಎರಡನೇ ಗ್ಯಾರಂಟಿ ಗೃಹಜ್ಯೋತಿ (Gruha Jyothi Scheme) ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಸೇವಾ ಸಿಂಧು ಪೋರ್ಟಲ್​ನಲ್ಲಿ ಕೆಲ ಬದಲಾವಣೆಯಿಂದಾಗಿ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು. ಸದ್ಯ ಎಲ್ಲವೂ ಸರಿಯಾಗಿದ್ದು, ಹಾಗಾಗಿ ಭಾನುವಾರದಿಂದ ಅರ್ಜಿ ಸಲ್ಲಿಸಬಹುದಾಗಿ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹಜ್ಯೋತಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. https://sevasindhugss.karnataka.gov.in ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: Gruha Jyothi Scheme: ಕರ್ನಾಟಕ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್​ ಕಚೇರಿಗಳಲ್ಲಿ ನೋಂದಾಯಿಸಬಹುದು. ಆಧಾರ್ ಕಾರ್ಡ್, ಆರ್​ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಫ್ರೀ ವಿದ್ಯುತ್​ಗಾಗಿ 2.14 ಕೋಟಿ ಅರ್ಜಿದಾರರು ಕೇವಲ 20 ದಿನಗಳಲ್ಲಿ ಅರ್ಜಿ ಸಲ್ಲಿಸೋಕೆ ಸಾಧ್ಯನಾ? ಟೆಕ್ನಿಕಲ್ ಎಕ್ಸ್​ಪರ್ಟ್ಸ್​ ಹೇಳುವುದೇನು

ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿಕೆ

ಇತ್ತೀಚಿಗೆ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದರು. ಆದರೆ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸೇವಾಸಿಂಧು ಆ್ಯಪ್​ ಮೂಲಕ ಅರ್ಜಿ ಸಲ್ಲಿಸಲು ವಿಳಂಬವಾಗಿತ್ತು. ಇದರಿಂದ ಸರ್ಕಾರ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿತ್ತು. ಹೀಗಾಗಿ ಗೃಹಜ್ಯೋತಿ ಯೋಜನೆಗೆ ನೋಂದಣಿ ಇಂದಿನಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:59 pm, Sat, 17 June 23