ವಿಧಾನ ಪರಿಷತ್ ಸಭಾನಾಯಕರನ್ನಾಗಿ ಎನ್ಎಸ್ ಬೋಸರಾಜು ನೇಮಕ: ಸರ್ಕಾರ ಆದೇಶ
ವಿಧಾನ ಪರಿಷತ್ತಿನ ಸಭಾನಾಯಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ಎಸ್ ಬೋಸರಾಜು ಅವರನ್ನು ಸರ್ಕಾರ ಸೋಮವಾರ ನಾಮನಿರ್ದೇಶನ ಮಾಡಿದೆ.
ಬೆಂಗಳೂರು: ವಿಧಾನ ಪರಿಷತ್ತಿನ ಸಭಾನಾಯಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ಎಸ್ ಬೋಸರಾಜು (NS boseraju) ಅವರನ್ನು ಸರ್ಕಾರ ಸೋಮವಾರ ನಾಮನಿರ್ದೇಶನ ಮಾಡಿದೆ. ಈ ಕುರಿತು ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸುವಂತೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಇತ್ತೀತ್ತಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಬಳಿಕ ವಿಧಾನಸಭೆ ಹಾಗೂ ಪರಿಷತ್ ಸದಸ್ಯರಲ್ಲದ ಎನ್ಎಸ್ ಬೋಸರಾಜು ಅವರಿಗೆ ಸಚಿವ ಸ್ಥಾನ ಲಭಿಸಿತ್ತು.
ರಾಹುಲ್ ಗಾಂಧೀ ಅವರೇ ಬೋಸರಾಜ್ ಜೊತೆ ಮಾತುಕತೆ ನಡೆಸಿ, ಸರ್ಕಾರ ಬಂದರೆ ಎಂಎಲ್ಸಿ ಮಾಡಿ ಪ್ರಮುಖ ಹುದ್ದೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆಯೇ ಬೋಸರಾಜ್ಗೆ ಮಂತ್ರಿ ಸ್ಥಾನ ಒಲಿದುಬಂದಿತ್ತು.
ಇದನ್ನೂ ಓದಿ: ವೈಎಸ್ಟಿ ಜೊತೆಗೆ ಪೇಸಿಎಂ, ಪೇ ಸೋನಿಯಾ, ಪೇ ವೇಣುಗೋಪಾಲ್ ಇದೆ: ಬಿಜೆಪಿ ಶಾಸಕ ಯತ್ನಾಳ್
ಎನ್ಎಸ್ ಬೋಸರಾಜು ಅವರು ಕಾಂಗ್ರೆಸ್ ಪಕ್ಷಕ್ಕಾಗಿ ಮೊದಲಿನಿಂದಲ್ಲೂ ಸಾಕಷ್ಟು ದುಡಿದಿದ್ದಾರೆ. ಜೊತೆಗೆ ಹೈಕಮಾಂಡ್ ಜೊತೆ ಒಳ್ಳೆಯ ಸಂಪರ್ಕವನ್ನು ಹೊಂದಿದ್ದೇ ಅವರಿಗೆ ಸಚಿವ ಸ್ಥಾನ ಸಿಗಲು ಕಾರಣ ಎಂಬ ಮಾತುಗಳು ಸಹ ಕೇಳಿಬಂದಿದ್ದವು.
ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ಮೊದಲ ಅಧಿವೇಶನ: ಇದು ದುರ್ದೈವ ಎಂದ ಸಚಿವ ಹೆಚ್ಕೆ ಪಾಟೀಲ್
ಸಚಿವ ಸಂಭವನೀಯರ ಪಟ್ಟಿಯಲ್ಲಿ ಬೋಸರಾಜ್ ಅವರ ಹೆಸರು ಬಂದಾಗ ರಾಯಚೂರಿನ ಕಾಂಗ್ರೆಸ್ನಲ್ಲಿ ಅಮಾಧಾನ ಸ್ಫೋಟಗೊಂಡಿತ್ತು. ಯಾವುದೇ ಕಾರಣಕ್ಕೂ ಬೋಸರಾಜ್ ಅವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆಯಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:17 pm, Mon, 3 July 23