ಹೋರಾಟದಲ್ಲಿ ಭಾಗಿಯಾಗಿದ್ದ ಕೆಲವರಿಂದ ಜಯಮೃತ್ಯುಂಜಯ ಸ್ವಾಮೀಜಿಗೆ ಧಮ್ಕಿ: ಅರವಿಂದ ಬೆಲ್ಲದ್ ಗಂಭೀರ ಆರೋಪ

ಮೀಸಲಾತಿಗಾಗಿ ಹೋರಾಟ ಮಾಡಿದ ಜಯಮೃತ್ಯುಂಜಯ ಸ್ವಾಮೀಜಿಗೆ ಹೋರಾಟದಲ್ಲಿ ಭಾಗವಹಿಸಿದ್ದ ಕೆಲ ನಾಯಕರೇ ಕುಡಿದು ಕರೆ ಮಾಡಿ ಧಮ್ಕಿ ಹಾಕುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ್​ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ.

ಹೋರಾಟದಲ್ಲಿ ಭಾಗಿಯಾಗಿದ್ದ ಕೆಲವರಿಂದ ಜಯಮೃತ್ಯುಂಜಯ ಸ್ವಾಮೀಜಿಗೆ ಧಮ್ಕಿ: ಅರವಿಂದ ಬೆಲ್ಲದ್ ಗಂಭೀರ ಆರೋಪ
ಬಿಜೆಪಿ ಶಾಸಕ ಅರವಿಂದ ಬೆಲ್ಲದ್Image Credit source: deccanherald.com
Follow us
|

Updated on:Apr 03, 2023 | 4:12 PM

ಬೆಂಗಳೂರು: ಮೀಸಲಾತಿಗಾಗಿ ಹೋರಾಟ ಮಾಡಿದ ಜಯಮೃತ್ಯುಂಜಯ ಸ್ವಾಮೀಜಿಗೆ (jay mrityunjay swamiji) ಹೋರಾಟದಲ್ಲಿ ಭಾಗವಹಿಸಿದ್ದ ಕೆಲ ನಾಯಕರೇ ಕುಡಿದು ಕರೆ ಮಾಡಿ ಧಮ್ಕಿ ಹಾಕುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ್​ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವ ಜಯಮೃತ್ಯುಂಜಯ ಸ್ವಾಮೀಜಿ ಈ ಕುರಿತಾಗಿ ನೋವನ್ನು ತೋಡಿಕೊಂಡಿದ್ದಾರೆ. ಯಾರು ಧಮ್ಕಿ ಹಾಕುತ್ತಿದ್ದಾರೆಂದು ನಮ್ಮ ಇಡೀ ಸಮುದಾಯಕ್ಕೆ ಗೊತ್ತಿದೆ. ಮತ್ತೆ ಧಮ್ಕಿ ಹಾಕಿದರೆ ಏನು ಮಾಡಬೇಕು ಅನ್ನೋದು ನಮಗೆ ಗೊತ್ತಿದೆ. ಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿಲ್ಲ. ಇದು ಕಾಂಗ್ರೆಸ್​ನವರು ಮಾಡುತ್ತಿರುವ ಅಪಪ್ರಚಾರ ಎಂದು ಕಿಡಿಕಾರಿದರು.

ವಿನಯ್ ಕುಲಕರ್ಣಿ, ಕಾಶಪ್ಪನವರ್​ ವಿರುದ್ಧ ಪರೋಕ್ಷವಾಗಿ ಆರೋಪ

ರಾಜಕೀಯ ಮಾಡುವುದಕ್ಕೆ ಮೀಸಲಾತಿ ಹೋರಾಟ ಮಾಡೋದಕ್ಕೆ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಪಂಚಮಸಾಲಿ, ಮರಾಠ, ಒಕ್ಕಲಿಗ ಹಿಂದುಳಿದ ಸಮುದಾಯಗಳು ಮೀಸಲಾತಿ ಕೇಳಿದಾಗ ಸಿಎಂ ಬೊಮ್ಮಾಯಿ ತೆಗೆದುಕೊಂಡ ನಿರ್ಧಾರಗಳಿಂದ ಕಾಂಗ್ರೆಸ್ ನಾಯರಕರಿಗೆ ಗರ ಬಡದಿದೆ. ಗೌಡ ಲಿಂಗಾಯತ ಮಲೆ ಗೌಡ್ರು ಸೇರಿದಂತೆ ಹಲವು ಸಮುದಾಯಗಳಿಗೆ ಸಿಎಂ ಗೌರವ ಸಲ್ಲಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಅಗೌರವ ತೋರುತ್ತಿದ್ದಾರೆ.

ಇದನ್ನೂ ಓದಿ: ಮೀಸಲಾತಿ: ಶ್ರೀಗಳಿಗೆ 25 ಬಾರಿ ಕರೆ​ ಮಾಡಿ ಒಪ್ಪಿಕೊಳ್ಳಿ ಎಂದು ಒತ್ತಡ ಹಾಕಿದ್ದಾರೆ: ಡಿಕೆ ಶಿವಕುಮಾರ್ ಸ್ಫೋಟಕ ಆರೋಪ

ಹೋರಾಟದಲ್ಲಿ ಭಾಗವಹಿಸಿದ್ದ ನಾಯಕರೇ ಸ್ವಾಮೀಜಿಗಳಿಗೆ ಕರೆ ಮಾಡಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ. ಹೋರಾಟದಲ್ಲಿದ್ದ ಮೂರು ನಾಲ್ಕು ನಾಯಕರೇ ಈ ರೀತಿ ಮಾಡುತ್ತಿದ್ದಾರೆ ಎಂದು ವಿನಯ್ ಕುಲಕರ್ಣಿ, ಕಾಶಪ್ಪನವರ್ ಹೆಸರು ಹೇಳದೆ ಪರೋಕ್ಷವಾಗಿ ಸಚಿವ ಸಿಸಿ ಪಾಟೀಲ್, ಅರವಿಂದ್​ ಬೆಲ್ಲದ್ ಅವರ ಮೇಲೆ ಆರೋಪ ಮಾಡಿದ್ದಾರೆ.

ಸ್ವಾಮೀಜಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲು ಸಿಎಂ ಸೂಚನೆ

ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಬೆದರಿಕೆ ಕರೆ ಆರೋಪ ಹಿನ್ನೆಲೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್​ಗೆ ಸಿಎಂ ಬೊಮ್ಮಾಯಿ‌ ಸೂಚನೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಸ್ಫೋಟಕ ಆರೋಪ

ಒಕ್ಕಲಿಗರಿಗೆ 2ಸಿ, ಲಿಂಗಾಯತರಿಗೆ 2ಡಿ ಮೀಸಲಾತಿ ಘೋಷಣೆ ವಿಚಾರಕ್ಕೆ ಸಂಬಂಧಿಸಿ ನಿರ್ಮಲಾನಂದನಾಥಶ್ರೀ, ಜಯಮೃತ್ಯುಂಜಯ ಶ್ರೀಗಳಿಗೆ 25 ಬಾರಿ ಕರೆ​ ಮಾಡಿ ಒಪ್ಪಿಕೊಳ್ಳಿ ಅಂತಾ ಒತ್ತಡ ಹಾಕಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಆರೋಪ ಮಾಡಿದ್ದರು. ಸ್ವಾಮೀಜಿಗಳಿಗೆಲ್ಲ ಫೋನ್​ ಮಾಡಿ ಒಪ್ಪಿಕೊಳ್ಳಿ ಅಂದರೆ ಸರೀನಾ ಲಿಂಗಾಯತರು 16%, ಒಕ್ಕಲಿಗರು 12% ಮೀಸಲಾತಿ ಕೇಳಿದ್ದರು. ಅಲ್ಪಸಂಖ್ಯಾತರ ಮೀಸಲಾತಿ ಕಿತ್ತುಕೊಂಡು ಕೊಡುವುದೇನಿತ್ತು? ಎಂದು ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್​ ಕಿಡಿಕಾರಿದ್ದರು.

ಇದನ್ನೂ ಓದಿ: ಸಾತನೂರಿನಲ್ಲಿ ಮುಸ್ಲಿಂ ಯುವಕನ ಬಳಿ 2 ಲಕ್ಷ ನೀಡುವಂತೆ ಪೀಡಿಸಿ ನಂತರ ಕೊಂದಿದ್ದಾರೆ: ಡಿಕೆ ಶಿವಕುಮಾರ್ ಆರೋಪ

ಡಿಕೆ ಶಿವಕುಮಾರ್​ ಆರೋಪಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಬಳಕ ಸ್ಪಷ್ಟನೆ ನೀಡಿದ್ದು, ಡಿಕೆ ಶಿವಕುಮಾರ್ ಅವರಿಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂತ ಕಾಣುತ್ತೆ. ಡಿಕೆ ಶಿವಕುಮಾರ್​ ಅವರು ಕೂಡ ನಮ್ಮ ಹೋರಾಟದ ವೇಳೆ, ಪಾದಯಾತ್ರೆಗೆ ಬಂದು ಬೆಂಬಲ ಕೊಟ್ಟಿದ್ದರು. ದೂರವಾಣಿ ಮೂಲಕವೂ ಹೋರಾಟದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಕೇಂದ್ರ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿ ಅವರು ಯಾವುದೇ ಒತ್ತಡ ಹಾಕಿಲ್ಲ ಎಂದು ಸ್ವಾಮೀಜಿ ಹೇಳಿದ್ದರು.

ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ

ನಮ್ಮ ಹೋರಾಟದಿಂದ ಸಮುದಾಯದ ಜನ ನಿರಾಶೆ ಆಗಬಾರದು. ಈ ಕಾರಣಕ್ಕಾಗಿ ನಾವು 2ಡಿ ಮೀಸಲಾತಿಯನ್ನು ಒಪ್ಪಿಕೊಂಡಿದ್ದೇವೆ. ಹೊಟ್ಟೆ ತುಂಬಾ ಊಟ ಕೊಡಿ ಅಂತ ಸರ್ಕಾರವನ್ನ ಕೇಳಿದ್ವಿ, ಆದರೆ ಸರ್ಕಾರದಿಂದ ಅದು ಸಾಧ್ಯವಾಗಲಿಲ್ಲ, ಹಸಿವು ನೀಗಿಸುವ ಪ್ರಯತ್ನ ಮಾಡಿದ್ದಾರೆ ಎಂದಿದ್ದರು.

ಈ ಹೋರಾಟದಿಂದ ನಾವು ಒಂದು ಮೆಟ್ಟಿಲನ್ನು ಹತ್ತಿದ್ದೇವೆ. ಎರಡೂವರೆ ವರ್ಷದ ಹೋರಾಟದ ಫಲವಾಗಿ ಮೊದಲ ಹಂತದ ಜಯ ಸಿಕ್ಕಿದೆ. ನಮ್ಮ ಹೋರಾಟಕ್ಕೆ ಮಣಿದು ಶೇ.7 ರಷ್ಟು ಮೀಸಲಾತಿ ಸರ್ಕಾರ ನೀಡಿದೆ. ನಾವು ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ. ಸ್ವಲ್ಪ ಮಟ್ಟಿಗಾದರೂ ಮೀಸಲಾತಿ ಪಡೆದುಕೊಂಡಿರುವುದು ಖುಷಿ ಕೊಟ್ಟಿದೆ. ನಿರ್ಮಲಾನಂದನಾಥ ಸ್ವಾಮೀಜಿ, ನಾವು ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ. ಹೋರಾಟಕ್ಕೆ ಜಯ ಸಿಕ್ಕ ಬಳಿಕ ತಾತ್ಕಾಲಿಕವಾಗಿ ಹೋರಾಟ ನಿಲ್ಲಿಸಿದ್ದೇವೆ, ಚುನಾವಣೆ ಬಳಿಕ ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಕುರಿತು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:09 pm, Mon, 3 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!