AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ತಾಕತ್ತಿದ್ದರೆ ನನ್ನನ್ನು ಬಂಧಿಸಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸವಾಲು

ಇತ್ತೀಚೆಗಷ್ಟೇ ಕೇಂದ್ರೀಯ ಏಜೆನ್ಸಿಗಳು ಹಕೀಮ್‌ಗೆ ಸಮನ್ಸ್ ನೀಡಿರುವುದರಿಂದ ಮುಂದಿನ ದಿನಗಳಲ್ಲಿ ಅವರನ್ನು ಬಂಧಿಸಬಹುದು. "ಅವರನ್ನು ಬಂಧಿಸಿದರೆ, ಅವರಿಗೆ ಕಿರುಕುಳ ನೀಡುವುದಕ್ಕಾಗಿ ಅದು ನಕಲಿ ಕೇಸ್ ಎಂದು ನೀವು ಖಚಿತವಾಗಿ ಹೇಳಬಹುದು ಎಂದು ಬ್ಯಾನರ್ಜಿ ಹೇಳಿದರು.

ಬಿಜೆಪಿಗೆ ತಾಕತ್ತಿದ್ದರೆ ನನ್ನನ್ನು ಬಂಧಿಸಲಿ: ಪಶ್ಚಿಮ  ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸವಾಲು
ಮಮತಾ ಬ್ಯಾನರ್ಜಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 29, 2022 | 6:52 PM

Share

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (TMC) ನೇತೃತ್ವದ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳ ನಡುವೆ, ಮುಖ್ಯಮಂತ್ರಿ ಮತ್ತು ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ (Mamata Banerjee), ಬಿಜೆಪಿಗೆ (BJP) ತಾಕತ್ತಿದ್ದರೆ ನನ್ನನ್ನು ಬಂಧಿಸಲಿ ಎಂದು ಸವಾಲು ಹಾಕಿದ್ದಾರೆ. ಹಿರಿಯ ಟಿಎಂಸಿ ನಾಯಕರಾದ ಪಾರ್ಥ ಚಟರ್ಜಿ ಮತ್ತು ಅನುಬ್ರತಾ ಮೊಂಡಲ್ ಅವರು ಕ್ರಮವಾಗಿ ಶಾಲಾ ಉದ್ಯೋಗ ಹಗರಣ ಮತ್ತು ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಬಂದಿವೆ. ಕೋಲ್ಕತ್ತಾದಲ್ಲಿ ತನ್ನ ಪಕ್ಷದ ವಿದ್ಯಾರ್ಥಿ ವಿಭಾಗದ ರ್ಯಾಲಿಯಲ್ಲಿ ಭಾಗವಹಿಸಿದ್ದ ಬ್ಯಾನರ್ಜಿ, ತನ್ನ ವಿರುದ್ಧ ದುರುದ್ದೇಶಪೂರಿತ ಪ್ರಚಾರವನ್ನು ನಡೆಸಲಾಗಿದೆ ಎಂದು ಹೇಳಿದರು. ಕೋಲ್ಕತ್ತಾ ಮೇಯರ್ ಮತ್ತು ರಾಜ್ಯ ಸಚಿವ ಫಿರ್ಹಾದ್ ಹಕೀಮ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಂತಹ ಇತರ ಟಿಎಂಸಿ ಪರಿಣತರ ವಿರುದ್ಧವೂ ಈ ರೀತಿ ಪ್ರಟಾರ ನಡೆಸಲಾಗುತ್ತಿದೆ ಎಂದಿದ್ದಾರೆ. ಬಿಜೆಪಿ ಎಲ್ಲರನ್ನೂ ಕಳ್ಳರೆಂದು ಬಿಂಬಿಸುತ್ತಿದೆ. ಟಿಎಂಸಿಯಲ್ಲಿ ನಾವೆಲ್ಲರೂ ಕಳ್ಳರು ಮತ್ತು ಬಿಜೆಪಿ ಮತ್ತು ಅದರ ನಾಯಕರು ಮಾತ್ರ ಪವಿತ್ರರು ಎಂಬ ರೀತಿಯಲ್ಲಿ ಅವರು ಪ್ರಚಾರ ಮಾಡುತ್ತಿದ್ದಾರೆ. ನಾನು ರಾಜಕೀಯದಲ್ಲಿ ಇರದೇ ಇದ್ದಿದ್ದರೆ ಅವರ ನಾಲಿಗೆಯನ್ನು ಹರಿದು ಹಾಕುತ್ತಿದ್ದೆ ಎಂದು ಆಕೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಭಾರತದಾದ್ಯಂತ ಚುನಾಯಿತ ಬಿಜೆಪಿಯೇತರ ಸರ್ಕಾರಗಳನ್ನು ಪದಚ್ಯುತಗೊಳಿಸಲು ಬಿಜೆಪಿಯು ತನ್ನ “ಅಕ್ರಮ ಹಣ”ದೊಂದಿಗೆ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ಯಂತಹ ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಬಂಗಾಳ ಮುಖ್ಯಮಂತ್ರಿ ಹೇಳಿದ್ದಾರೆ.

ಇತ್ತೀಚೆಗಷ್ಟೇ ಕೇಂದ್ರೀಯ ಏಜೆನ್ಸಿಗಳು ಹಕೀಮ್‌ಗೆ ಸಮನ್ಸ್ ನೀಡಿರುವುದರಿಂದ ಮುಂದಿನ ದಿನಗಳಲ್ಲಿ ಅವರನ್ನು ಬಂಧಿಸಬಹುದು. “ಅವರನ್ನು ಬಂಧಿಸಿದರೆ, ಅವರಿಗೆ ಕಿರುಕುಳ ನೀಡುವುದಕ್ಕಾಗಿ ಅದು ನಕಲಿ ಕೇಸ್ ಎಂದು ನೀವು ಖಚಿತವಾಗಿ ಹೇಳಬಹುದು ಎಂದು ಬ್ಯಾನರ್ಜಿ ಹೇಳಿದರು.

“ಮಹಾರಾಷ್ಟ್ರದ ಮಾದರಿಯಲ್ಲಿ ಚುನಾಯಿತ ರಾಜ್ಯ ಸರ್ಕಾರಗಳನ್ನು ಕಿತ್ತೊಗೆಯಲು ಸಾವಿರಾರು ಕೋಟಿಗಳು” ಎಲ್ಲಿಂದ ಪಡೆಯುತ್ತಿದೆ ಎಂದು ಬಿಜೆಪಿ ಘಟಕ ಉತ್ತರಿಸಬೇಕೆಂದು ಅವರು ಒತ್ತಾಯಿಸಿದರು.

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದಾಗಿ ಬಂಗಾಳದ ಮುಖ್ಯಮಂತ್ರಿ ಪ್ರತಿಜ್ಞೆ ಮಾಡಿದ್ದು, ಬಿಜೆಪಿ ಪಕ್ಷವು ಹವಾಲಾ ಮೂಲಕ ವಿದೇಶದಲ್ಲಿ ಹಣವನ್ನು ಇಡುತ್ತಿದೆ ಎಂದಿದ್ದಾರೆ.

ಶಾಲಾ ಉದ್ಯೋಗ ಹಗರಣದಲ್ಲಿ ಚಟರ್ಜಿಯನ್ನು ಬಂಧಿಸಲಾಗಿದ್ದರೂ, ಇನ್ನೂ ಯಾವುದೂ ಸಾಬೀತಾಗಿಲ್ಲ ಮತ್ತು ಮಾಧ್ಯಮ ವಿಚಾರಣೆ ನಡೆಯುತ್ತಿದೆ ಎಂದು ಬ್ಯಾನರ್ಜಿ ಹೇಳಿದರು. ಬಿಜೆಪಿ ಮಾಧ್ಯಮಗಳು, ನ್ಯಾಯಾಂಗ ಮತ್ತು ರಾಜಕೀಯ ಪಕ್ಷಗಳನ್ನು ಹೆದರಿಸುತ್ತಿದೆ. ಜನರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಪೆಗಾಸಸ್ ಅನ್ನು ಬಳಸುತ್ತಿದೆ.

ಮನರಂಜನಾ ಉದ್ಯಮದ ಶಾಸಕರು ಪಕ್ಷವನ್ನು ಲೂಟಿ ಮಾಡುತ್ತಿದ್ದಾರೆ ಮತ್ತು ನಾಯಕತ್ವವು ಪ್ರಾಮಾಣಿಕ ಕಾರ್ಯಕರ್ತರನ್ನು ಬದಿಗಿಡುತ್ತಿದೆ ಎಂದು ಟಿಎಂಸಿ ಶಾಸಕ ಮತ್ತು ಬಂಗಾಳದ ಸಚಿವ ಶ್ರೀಕಾಂತ ಮಹತೋ ಅವರು ವಿಡಿಯೊದಲ್ಲಿ ಹೇಳಿರುವ ಒಂದು ದಿನದ ನಂತರ ಬ್ಯಾನರ್ಜಿಯವರ ಹೇಳಿಕೆಗಳು ಬಂದಿವೆ. ಅಭಿಷೇಕ್ ಅವರ ಸೂಚನೆಯ ಮೇರೆಗೆ ಪಕ್ಷದ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕಾಗಿ ಮಹತೋ ಅವರಿಗೆ ಶೋಕಾಸ್ ನೋಟಿಸ್ ಕಳುಹಿಸಲಾಗಿದೆ ಎಂದು ಎಎನ್‌ಐ ವರದಿ ತಿಳಿಸಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ