‘ಬಸವರಾಜ ಬೊಮ್ಮಾಯಿ ಮೇಲೆ ಒಂದು ರೂಪಾಯಿ ಭ್ರಷ್ಟಾಚಾರ ಆರೋಪವಿಲ್ಲ; ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ’

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ, ಅದೆಲ್ಲ ಸುಳ್ಳು ಸುದ್ದಿ. 150ಕ್ಕೂ ಹೆಚ್ಚು ಸ್ಥಾನಗಳನ್ನ ಗೆದ್ದು ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಬಸವರಾಜ ಬೊಮ್ಮಾಯಿ ಮೇಲೆ ಒಂದು ರೂಪಾಯಿ ಭ್ರಷ್ಟಾಚಾರ ಆರೋಪವಿಲ್ಲ; ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ’
ಅರುಣ್ ಸಿಂಗ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Dec 27, 2021 | 9:05 PM

ಹುಬ್ಬಳ್ಳಿ: ಕರ್ನಾಟಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸ್ತೇವೆ. ಬೊಮ್ಮಾಯಿ ಅತ್ಯಂತ ಪ್ರಾಮಾಣಿಕತೆಯಿಂದ ಕೆಲಸ ಮಾಡ್ತಿದ್ದಾರೆ. ಅವರ ಮೇಲೆ ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಆರೋಪವಿಲ್ಲ ಎಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ, ಅದೆಲ್ಲ ಸುಳ್ಳು ಸುದ್ದಿ. 150ಕ್ಕೂ ಹೆಚ್ಚು ಸ್ಥಾನಗಳನ್ನ ಗೆದ್ದು ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸ್ತಿಲ್ಲ. ಹುಬ್ಬಳ್ಳಿಯಲ್ಲಿ ನಾಳೆ, ನಾಡಿದ್ದು ಬಿಜೆಪಿ ಕಾರ್ಯಕಾರಿಣಿ ಸಭೆಯಿದೆ. ಸರ್ಕಾರದಿಂದ ಹೊಸ ಕೊವಿಡ್ ಮಾರ್ಗಸೂಚಿ ಬಿಡುಗಡೆ ಹಿನ್ನೆಲೆ ರಾಜ್ಯ ಸರ್ಕಾರದ ನಿಯಮದಂತೆ 300ಕ್ಕಿಂತ ಹೆಚ್ಚು ಸೇರುವಂತಿಲ್ಲ. ಹಾಗಾಗಿ ನಡ್ಡಾ ಸ್ವಾಗತಕ್ಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಅರುಣ್ ಸಿಂಗ್ ತಿಳಿಸಿದ್ದಾರೆ.

ಕೊರೊನಾ ತಡೆಗೆ ಎಲ್ಲಾ ಕ್ರಮ ನಾವು ಮಾಡಿಕೊಂಡಿದ್ದೇವೆ: ಸಿಎಂ ಬೊಮ್ಮಾಯಿ ಇದೊಂದು ಹೃದಯಸ್ಪರ್ಶಿ ಕಾರ್ಯಕ್ರಮ. ಒಂದು ಮನೆಯಲ್ಲಿ ಕುಟುಂಬ ಸದಸ್ಯರು ಅಗಲಿದಾಗ ಆ ನೋವು ಬಹಳ ವರ್ಷಗಳವರೆಗೂ ಕಾಡುತ್ತಿರುತ್ತದೆ. ಈ ರೀತಿ ಮಹಾಮಾರಿಯಿಂದ ಆರೋಗ್ಯವಾಗಿದ್ದವರು ಕೆಲವೇ ದಿನಗಳಲ್ಲಿ‌ ನಿಧನರಾದಗ ನೋವು ಭರಿಸಲು ಆಗುವುದಿಲ್ಲ. ಕೊವಿಡ್ ಸಾಕಷ್ಟು ಕುಟುಂಬವನ್ನು ಅನಾಥ, ತಬ್ಬಲಿಯನ್ನಾಗಿ ಮಾಡಿದೆ. ಹಿಂದೆ ಪ್ಲೇಗ್, ಕಾಲರಾ ಬಗ್ಗೆ ಕೇಳಿದ್ವಿ ಆದರೆ ನಮ್ಮ ಕಾಲದಲ್ಲಿ ಬರುತ್ತೆ ಅಂತ ಊಹಿಸಿರಲಿಲ್ಲ. ಬೇರೆ ರಾಜ್ಯ, ದೇಶ ಹೋಲಿಸಿದರೆ ಅತಿ ಹೆಚ್ಚು ಜನಸಂಖ್ಯೆ ಇರುವ ಭಾರತದಲ್ಲಿ ಕೊರೋನಾ ನಿರ್ವಹಿಸಿರುವುದು ವಿಶ್ವದಾಖಲೆ ಆಗಿದೆ ಎಂದು ಕೊರೊನಾದಿಂದ ಮೃತಪಟ್ಟವರಿಗರ ಪರಿಹಾರ ವಿತರಣೆಯ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಧಿಕಾರಿಗಳು, ಸಂಘಟನೆ, ಸಮಾಜ, ಪ್ರಧಾನಿ ಮೋದಿಯವರ ಸಹಕಾರದಿಂದ ಯಶಸ್ವಿಯಾಗಿ ಕೊರೊನಾ ಎದುರಿಸಿದ್ದೇವೆ. ಇಷ್ಟು ದೊಡ್ಡ ಜನಸಂಖ್ಯೆಗೆ ಪ್ರಚಾರ ಅಪಪ್ರಚಾರದ ನಡುವೆ ವ್ಯಾಕ್ಸಿನ್ ಕೊಡಬೇಕಾ ಬೇಡವಾ ಎಂಬ ಚರ್ಚೆ ಇತ್ತು. ಇಂದು ರಾಜ್ಯದಲ್ಲಿ 4 ಕೋಟಿಗಿಂತ ಹೆಚ್ಚು ಮೊದಲ ಡೋಸ್ ಕೊಟ್ಟಿದ್ದೇವೆ. ರಾಜ್ಯದಲ್ಲಿ ಶೇ.97 ರಷ್ಟು ಮೊದಲ ಡೋಸ್ ವ್ಯಾಕ್ಸಿನೇಷನ್ ಆಗಿದೆ. ಶೇ.76 ರಷ್ಟು ಎರಡನೇ ಡೋಸ್ ಆಗಿದೆ. ಹಳ್ಳಿಯಲ್ಲಿ ಜನರಿಗೆ ಹಿಂಜರಿತವಿದೆ ಅವರಿಗೂ ಮನೆಮನೆಗೆ ಹೋಗಿ ಲಸಿಕೆ ಕೊಡುವ ಕೆಲಸವಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತರ ಮಾತನ್ನ ಗೌರವದಿಂದ ಕೇಳುವ ಸರ್ಕಾರ ಇದು: ಮೈಸೂರಿನ ರೈತ ಸಮಾವೇಶದಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ

ಇದನ್ನೂ ಓದಿ: Bengaluru: ಸಮಗ್ರ ಅಭಿವೃದ್ಧಿಗೆ ರೋಡ್ ಮ್ಯಾಪ್ ಮಾಡಿ ಹಣ ಬಿಡುಗಡೆ ಮಾಡಲಾಗುವುದು: ಬಸವರಾಜ ಬೊಮ್ಮಾಯಿ

Published On - 9:03 pm, Mon, 27 December 21

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ