ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರ ಚುಕ್ಕಾಣಿ ಹಿಡಿದಿದ್ದು, ಇಂದು(ಮೇ.27) ಮುಖ್ಯಮಂತ್ರಿ ಸಿದ್ದರಾಮಯ್ಯ (Siddarmaiah) ನೇತೃತ್ವದಲ್ಲಿ 24 ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಅದರಂತೆ ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಬಿಕೆ ಹರಿಪ್ರಸಾದ್(BK Hariprasad) ರಾಜೀನಾಮೆ ಹೇಳಿಕೆ ವಿಚಾರವಾಗಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ(Veerappa Moily) ‘ಎಂಎಲ್ಸಿ ಬಿ.ಕೆ.ಹರಿಪ್ರಸಾದ್ಗೆ ಹೇಳುವಂಥದ್ದು ಏನೂ ಇಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಪಕ್ಷದಲ್ಲಿ ಯಾರು ಎಷ್ಟೇ ಹಿರಿಯರಾದರೂ ತಲೆ ಬಾಗಲೇಬೇಕು ಎಂದಿದ್ದಾರೆ.
ಗ್ಯಾರಂಟಿ ಜಾರಿ ವಿಚಾರದಲ್ಲಿ ಯಾಕಿಷ್ಟು ಆತುರ?
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಜನರಿಗೆ ನೀಡಿದ್ದ ಗ್ಯಾರಂಟಿ ಯೋಜನೆ ಖಂಡಿತ ಜಾರಿ ಆಗುತ್ತದೆ. ಈ ವಿಚಾರದಲ್ಲಿ ಯಾಕೆ ಇಷ್ಟು ಆತುರ, ಗ್ಯಾರಂಟಿ ಯೋಜನೆಗಳನ್ನು ಕೊಡುವುದು ಪಕ್ಷ ಅಲ್ಲ, ಸರ್ಕಾರ. ಗ್ಯಾರಂಟಿ ಯೋಜನೆಗಳಿಗೆ ಒಂದಷ್ಟು ಮಾನದಂಡ ಇರುತ್ತವೆ, ಮಾನದಂಡಗಳನ್ನು ನಿಗದಿಪಡಿಸಿ ಗ್ಯಾರಂಟಿ ಜಾರಿ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇದ್ದಾರೆ. ಅಧಿಕಾರ ಹಂಚಿಕೆ ಕುರಿತು ಈಗ ಚರ್ಚೆ ಬೇಡ. ರಾಜ್ಯದಲ್ಲಿ ಸುಭದ್ರ ಸರ್ಕಾರ ಇದೆ, ಉತ್ತಮ ಆಡಳಿತ ಕೊಡುತ್ತೆವೆ ಎಂದರು.
ಇದನ್ನೂ ಓದಿ:Karnataka Cabinet expansion: ಡಾ. ಎಂ ಸಿ ಸುಧಾಕರ್ಗೆ ಒಲಿದ ಸಚಿವ ಭಾಗ್ಯ
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟ: ರಾಜೀನಾಮೆಗೆ ಮುಂದಾದ ಬಿಕೆ ಹರಿಪ್ರಸಾದ್
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಅಂತಿಮವಾಗಿ ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡು. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ಶಾಸಕರು ಹೈಕಮಾಂಡ್ ನಡೆಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ಅದರಲ್ಲೂ ಮುಖ್ಯವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಮುನಿಸಿಕೊಂಡಿದ್ದು, ಸಚಿವ ಸ್ಥಾನ ಕೈ ತಪ್ಪಿದಕ್ಕೆ ರಾಜೀನಾಮೆಗೆ ಮುಂದಾಗಿದ್ದರು ಎಂದು ತಿಳಿದುಬಂದಿತ್ತು.
ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. 16 ವಿವಿಧ ರಾಜ್ಯಗಳಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ, ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಬಿಜೆಪಿ ವಿರುದ್ಧ ಸೈದ್ಧಾಂತಿಕವಾಗಿ ತೀವ್ರ ವಾಗ್ದಾಳಿ ನಡೆಸುತ್ತಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಅಲ್ಲದೇ ಸಂಭವನೀಯರ ಪಟ್ಟಿಯಲ್ಲಿ ಬಿಕೆ ಹರಿಪ್ರಸಾದ್ ಅವರ ಹೆಸರು ಇತ್ತು. ಆದ್ರೆ, ಪಟ್ಟಿ ಕೊನೆ ಕ್ಷಣದಲ್ಲಿ ಬದಲಾಗಿದ್ದರಿಂದ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಪಕ್ಷದ ಕೆಲವರ ನಡೆಯಿಂದ ಅಸಮಾಧಾನಗೊಂಡು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ