ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜೋಶಿ ರಾಜೀನಾಮೆ ಅಂಗೀಕರಿಸಿದ ಅಶೋಕ್ ಗೆಹ್ಲೋಟ್

|

Updated on: Feb 18, 2023 | 10:13 AM

ರಾಜಸ್ಥಾನ ವಿಧಾನಸಭೆಯ ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಕಳೆದ ತಿಂಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ರಾಜೀನಾಮೆಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇಂದು ಅಂಗೀಕರಿಸಿದ್ದಾರೆ.

ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜೋಶಿ ರಾಜೀನಾಮೆ ಅಂಗೀಕರಿಸಿದ ಅಶೋಕ್ ಗೆಹ್ಲೋಟ್
ಮಹೇಶ್ ಜೋಶಿ
Follow us on

ಜೈಪುರ: ರಾಜಸ್ಥಾನ (Rajasthan )ವಿಧಾನಸಭೆಯ ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಕಳೆದ ತಿಂಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ರಾಜೀನಾಮೆಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇಂದು ಅಂಗೀಕರಿಸಿದ್ದಾರೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಸಾರ್ವಜನಿಕ ಆರೋಗ್ಯ ಮತ್ತು ಎಂಜಿನಿಯರಿಂಗ್ ಇಲಾಖೆ (ಪಿಎಚ್‌ಇಡಿ) ಖಾತೆಯನ್ನು ಸಹ ಹೊಂದಿರುವ ಕಾರಣ ಜೋಶಿ ಮುಖ್ಯ ಸಚೇತಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

ಇದನ್ನೂ ಓದಿ:Rajasthan Political Crisis: ಅಶೋಕ್ ಗೆಹ್ಲೋಟ್ ಇಂದು ಸೋನಿಯಾ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆ

ಜನವರಿ 23 ರಂದು ಬಜೆಟ್ ಅಧಿವೇಶನ ಪ್ರಾರಂಭವಾಗುವ ಮೊದಲು ಜೋಶಿ ಅವರು ರಾಜೀನಾಮೆ ಸಲ್ಲಿಸಿದ್ದರು.ರಾಜೀನಾಮೆಯನ್ನು ಮುಖ್ಯಮಂತ್ರಿ ಗೆಹ್ಲೋಟ್ ಶುಕ್ರವಾರ ಅಂಗೀಕರಿಸಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

Published On - 10:13 am, Sat, 18 February 23