ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ

ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್​ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು.

ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ
ಅರಸೀಕೆರೆ ಶಾಸಕ ಶಿವಲಿಂಗೇಗೌಡ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 20, 2021 | 3:58 PM

ಬೆಂಗಳೂರು: ‘ನೀವು ಕೂತ್ಕೊ ಅಂದ್ರೆ ಕೈಮುಗಿದು ಕೂತು ಬಿಡ್ತೀನಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್​ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ನಡೆಯುತ್ತಿದದ ಚರ್ಚೆಗೆ ಉತ್ತರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದ್ದು ನಿಂತರು. ಈ ವೇಳೆ ಮಾತನಾಡಲು ನಿಂತ ಶಿವಲಿಂಗೇಗೌಡರಿಗೆ ಕುಳಿತುಕೊಳ್ಳುವಂತೆ ಕುಮಾರ್ ಬಂಗಾರಪ್ಪ ಸೂಚಿಸಿದರು. ಸ್ಪೀಕರ್ ಸ್ಥಾನದಲ್ಲಿದ್ದವರ ಸೂಚನೆಯಿಂದ ಬೇಸರಗೊಂಡ ಶಿವಲಿಂಗೇಗೌಡ ಮೇಲಿನಂತೆ ಪ್ರತಿಕ್ರಿಯಿಸಿದರು. ನಂತರ ಮಾತು ಮುಂದುವರಿಸಲು ಶಿವಲಿಂಗೇಗೌಡರಿಗೆ ಕುಮಾರ್ ಬಂಗಾರಪ್ಪ ಅವಕಾಶ ನೀಡಿದರು.

ನಾವು ಪೆಟ್ರೋಲಿಯಂ ಉತ್ಪನ್ನಗಳಿಗಾಗಿ ವಿದೇಶವನ್ನು ಅವಲಂಬಿಸಿದ್ದೇವೆ. ನಮ್ಮ ದೇಶದಲ್ಲಿ ಕೇವಲ ಶೇ 10ರಷ್ಟು ಮಾತ್ರ ಉತ್ಪಾದನೆಯಾಗುತ್ತಿದೆ. ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ಇಂಧನದ ಮೇಲಿನ ಸೆಸ್​ ಹೆಚ್ಚಾಗಿವೆ. ಮೊದಮೊದಲು ಸಬ್ಸಿಡಿ ಹಣವನ್ನು ನೇರವಾಗಿ ಗ್ರಾಹಕರಿಗೆ ಕೊಡುತ್ತಿದ್ದರು. ಆದರೆ ನಂತರದ ದಿನಗಳಲ್ಲಿ ಆ ಪದ್ಧತಿಯನ್ನೂ ಕೈಬಿಟ್ಟರು ಎಂದು ಟೀಕಿಸಿದರು.

ಜೆಡಿಎಸ್ ಧರಣಿ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ಧರಣಿ ಆರಂಭಿಸಿದರು. ಮೂರು ವಿಚಾರಗಳ ಮೇಲೆ ಚರ್ಚೆಗೆ ನೊಟೀಸ್ ಕೊಟ್ಟಿದ್ದೇವೆ. ಮಾತಿಗೆ ಅವಕಾಶ ಕೊಟ್ಟಿಲ್ಲ ಎಂದು ಪ್ರತಿಭಟನೆ ನಡೆಸಿದರು. ಮಾತನಾಡಲು ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆ ನೀಡಿದ ನಂತರ ಜೆಡಿಎಸ್ ಶಾಸಕರು ಪ್ರತಿಭಟನೆ ಹಿಂಪಡೆದರು.

(Assembly Session JDS MLA Shivalingegowda Expresses Anger Over Speaker Decision Demands time to speak)

ಇದನ್ನೂ ಓದಿ: ರೈತ ಚಳವಳಿ ಸ್ಪಾನ್ಸರ್ಡ್​: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ರೈತರ ಹೋರಾಟ

ಇದನ್ನೂ ಓದಿ: ತೋರಿಕೆಗೆ ಗಾಂಧಿ ಆದರ್ಶವನ್ನಿಟ್ಟುಕೊಂಡಿರುವ ಕಾಂಗ್ರೆಸ್​ನಿಂದ ದೇಶಕ್ಕೆ ದೊಡ್ಡ ಹಾನಿಯಾಗಿದೆ; ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಟೀಕೆ

Published On - 3:57 pm, Mon, 20 September 21

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್