ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತುಗಳಲ್ಲ, ಗುದ್ದಾಡುವ ಹೋರಿಗಳು: ಬಿ.ಶ್ರೀರಾಮುಲು

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ ಸಚಿವರು ಯಾರೋ ಹಿಂದೆ ನಿಂತು ಇದನ್ನೆಲ್ಲಾ ಮಾಡಿಸುತ್ತಿದ್ದಾರೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಗೆ ಬರಲಿದೆ. ರಮೇಶ್ ಕಾಂಗ್ರೆಸ್ ಬಿಟ್ಟು ಬಂದು ಬಿಜೆಪಿ ಸರ್ಕಾರ ರಚನೆಗೆ ಕಾರಣರಾದವರು.

  • TV9 Web Team
  • Published On - 13:13 PM, 7 Mar 2021
ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತುಗಳಲ್ಲ, ಗುದ್ದಾಡುವ ಹೋರಿಗಳು: ಬಿ.ಶ್ರೀರಾಮುಲು
ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು

ಗದಗ: ಆರು ಸಚಿವರು ಕೋರ್ಟ್ ಮೊರೆ ಹೋದ ವಿಚಾರಕ್ಕೆ ಹಾಗೂ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದ ಹಿನ್ನೆಲೆಗೆ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಹಲವು ಆರೋಪಗಳಿವೆ. ಹೀಗಾಗಿ ಮೊದಲು ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಅದಾದ ಬಳಿಕ ಸಚಿವರ ರಾಜೀನಾಮೆ ಬಗ್ಗೆ ವಿಚಾರ ಮಾಡುತ್ತೇವೆ ಎಂದು ಹೇಳಿದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ ಸಚಿವರು ಯಾರೋ ಹಿಂದೆ ನಿಂತು ಇದನ್ನೆಲ್ಲಾ ಮಾಡಿಸುತ್ತಿದ್ದಾರೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಗೆ ಬರಲಿದೆ. ರಮೇಶ್ ಕಾಂಗ್ರೆಸ್ ಬಿಟ್ಟು ಬಂದು ಬಿಜೆಪಿ ಸರ್ಕಾರ ರಚನೆಗೆ ಕಾರಣರಾದವರು. ಹೀಗಾಗಿ ಅವರನ್ನು ತೇಜೋವಧೆ ಮಾಡಲಾಗುತ್ತಿದೆ. ಅವರ ರಾಜಕಾರಣಕ್ಕೆ ಕಳಂಕ ತರಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್ ಕಾಂಗ್ರೆಸ್ನ ಜೋಡೆತ್ತು ಅಂತಾರೆ. ಆದರೆ ಅವರು ಬಯಲಿನಲ್ಲಿ ಹೊಡೆದಾಡುವ ಎತ್ತುಗಳ ರೀತಿ. ಅವರಿಬ್ಬರು ಅಧಿವೇಶನವನ್ನು ನಡೆಸಲು ಬಿಡುತ್ತಿಲ್ಲ. ಹೊಡೆದಾಡುವ ಹೋರಿಗಳನ್ನು ಎದುರಿಸುವ ಶಕ್ತಿ ಬಿಜೆಪಿಗೆ ಇದೆ. ಅಭಿವೃದ್ಧಿಯ ಮೂಲಕ ಅವರನ್ನು ನಾವು ಎದುರಿಸುತ್ತೇವೆ ಎಂದರು. ಅಲ್ಲದೇ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 8ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿ ಜನಪರ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಿದರು.

ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ನಿರೀಕ್ಷೆ: ಸುಧಾಕರ್
ನಾಳೆ 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಬಜೆಟ್​ನಲ್ಲಿ ಇರುವ ಇತಿಮಿತಿಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ನಿರೀಕ್ಷೆಯೂ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈಗಾಗಲೆ ಪ್ರಧಾನ ಮಂತ್ರಿ ಕೇಂದ್ರ ಸರ್ಕಾರ ಆರೋಗ್ಯ ಇಲಾಖೆಗೆ ದೊಡ್ಡ ಪುಷ್ಠಿ ಕೊಟ್ಟಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 137 ಹೆಚ್ಚು ಒತ್ತು ಕೊಟ್ಟಿದ್ದಾರೆ. ಆರ್ಥಿಕ ಬಿಕ್ಕಟ್ಟು ಹೊರತಾಗಿಯೂ ಸಿಎಂ ಆರೋಗ್ಯ ಇಲಾಖೆಗೆ ಹೆಚ್ಚು ಒತ್ತು ನೀಡಬೇಕು. ಈಗಾಗಲೇ ಪೂರ್ವಭಾವಿ ಚರ್ಚೆ ಮಾಡಿದ್ದೇವೆ. ಪ್ರಾಥಮಿಕ, ದ್ವಿತೀಯ ಮತ್ತು ತೃತೀಯ ಹಂತಗಳ ಆರೋಗ್ಯ ಸೇವೆ ಉತ್ತಮಗೊಳಿಸುವ ಪರಿಕಲ್ಪನೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ

ಭದ್ರಾವತಿ ಕಬಡ್ಡಿ ಟೂರ್ನಮೆಂಟ್​ ಗಲಾಟೆ: ಭದ್ರಾವತಿ ಎಮ್​ಎಲ್​ಎ ಸೀಟು ಗೆಲ್ಲಲು ಬಿಜೆಪಿ-ಕಾಂಗ್ರೆಸ್​ ಜಿದ್ದಾಜಿದ್ದು?

ಎರಡು ಕಡೆ ಪ್ರತ್ಯೇಕ ಆತ್ಮಹತ್ಯೆ: ಕರ್ತವ್ಯ ನಿರತ ಯೋಧ ನೇಣಿಗೆ ಶರಣು.. ಮಾಜಿ ಕಾರ್ಪೊರೇಟರ್ ಕಚೇರಿಯಲ್ಲಿ ಶವ ಪತ್ತೆ