Arkavathy: ಭೂ ಹಗರಣ ಕೇಸ್​ನಲ್ಲಿ ಸಿದ್ದರಾಮಯ್ಯಗೆ ಜೈಲು ಎಂದ ಕಟೀಲ್; ಸಿಎಂ ಬೊಮ್ಮಾಯಿ ರಿಯಾಕ್ಷನ್ ಇಲ್ಲಿದೆ

|

Updated on: Feb 26, 2023 | 3:00 PM

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ 8ಕೋಟಿ ಹಗರಣ ನಡೆದಿದೆ. ಈ ಪ್ರಕರಣದಡಿ ಶೀಘ್ರವೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲು ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Arkavathy: ಭೂ ಹಗರಣ ಕೇಸ್​ನಲ್ಲಿ ಸಿದ್ದರಾಮಯ್ಯಗೆ ಜೈಲು ಎಂದ ಕಟೀಲ್; ಸಿಎಂ ಬೊಮ್ಮಾಯಿ ರಿಯಾಕ್ಷನ್ ಇಲ್ಲಿದೆ
ಬಸವರಾಜ ಬೊಮ್ಮಾಯಿ ಮತ್ತು ಸಿದ್ದರಾಮಯ್ಯ
Follow us on

ಬಾಗಲಕೋಟೆ: ಸಿದ್ದರಾಮಯ್ಯ (Siddaramaiah) ವಿರುದ್ಧದ ಅರ್ಕಾವತಿ ಡಿನೋಟಿಫಿಕೇಶನ್ ಆರೋಪದ ಪ್ರಕರಣವನ್ನು (Arkavathy land denotification case) ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೇಳಿದ್ದಾರೆ. ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಕರಣದ ಸಂಪೂರ್ಣ ವರದಿಯನ್ನು ನೋಡಿದ್ದೇನೆ. ನ್ಯಾಯ ತನ್ನ ಕಾರ್ಯವನ್ನು ನಿಶ್ಚಿತವಾಗಿ ಮಾಡಿಯೇ ಮಾಡುತ್ತದೆ ಎಂದು ಹೇಳಿದ್ದಾರೆ. ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ 8ಕೋಟಿ ಹಗರಣ ನಡೆದಿದೆ. ಈ ಪ್ರಕರಣದಡಿ ಶೀಘ್ರವೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲು ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿದ್ದರು. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದರು.

ಆರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ 8 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದ್ದು, ಈ ಸಂಬಂಧ ನ್ಯಾ. ಕೆಂಪಯ್ಯ ಅವರು ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಶೀಘ್ರದಲ್ಲೇ ಸಿದ್ದರಾಮಯ್ಯ ಅವರು ಜೈಲು ಸೇರಲಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ರಾಯಚೂರಿನ ಸಿಂಧನೂರು ತಾಲೂಕಿನ ಸರ್ಕ್ಯೂಟ್​ಹೌಸ್​ನಲ್ಲಿ ನಿನ್ನೆ (ಫೆಬ್ರವರಿ 27) ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಕೇಸ್​: ಬೊಮ್ಮಾಯಿ-ಸಿದ್ದರಾಮಯ್ಯ ಮಧ್ಯೆ ಮಾತಿನ ಜಟಾಪಟಿ

ಫೆ.23 ರಂದು ಬಜೆಟ್​ ಮೇಲಿನ ಚರ್ಚೆ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್​​ ಕುರಿತು ನ್ಯಾ. ಕೆಂಪಣ್ಣ ಆಯೋಗದ ವರದಿಯನ್ನು ಪ್ರಸ್ತಾಪಿಸಿ “ನೀವು ಭ್ರಷ್ಟರಾಗಿದ್ದಲ್ಲದೇ ವ್ಯವಸ್ಥೆಯನ್ನೂ ಭ್ರಷ್ಟಗೊಳಿಸಿದ್ದೀರಿ. ಈ ಹಿನ್ನೆಲೆ ಕಾಂಗ್ರೆಸ್​ ಆಡಳಿತದ ಅವಧಿಯ ಎಲ್ಲ ಭ್ರಷ್ಟಾವಾರದ ಪ್ರಕರಣಗಳನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಿ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡುವುದಿಲ್ಲ” ಎಂದು ಬೊಮ್ಮಾಯಿ ಶಪತಗೈದಿದ್ದರು.

ಇದರ ಮರುದಿನ ಅಂದರೆ, ಫೆ.24 ರಂದು ಸುದ್ದಿಗೋಷ್ಠಿ ನಡೆಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ವಿರುದ್ಧದ ಶೇ 40 ರಷ್ಟು ಕಮಿಷನ್​ ಆರೋಪ ಹಾಗೂ ಸಾಲು ಸಾಲಾಗಿ ಹೊರಬರುತ್ತಿರುವ ಹಗರಣಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದರು.

ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿರುವ ಪ್ರಕರಣದ ತನಿಖೆ ನಡೆಸುತ್ತಿದ್ದ ನ್ಯಾಯಮೂರ್ತಿ ಎಚ್‌ಎಸ್ ಕೆಂಪಣ್ಣ ಆಯೋಗ ರಚನೆಯಾಗಿ ಮೂರು ವರ್ಷಗಳ ಬಳಿಕ (2017ರಲ್ಲಿ) ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. 1,861 ಪುಟಗಳ ವರದಿಯನ್ನು ಸಲ್ಲಿಸಿದ ನ್ಯಾಯಮೂರ್ತಿ ಕೆಂಪಣ್ಣ, ಅರ್ಕಾವತಿ ಬಡಾವಣೆ ಅಭಿವೃದ್ಧಿಯಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ದೂರುಗಳ ಎಲ್ಲಾ ಅಂಶಗಳನ್ನು ಅಧ್ಯಯನ ಮಾಡಿ ನನ್ನ ಕಾರ್ಯವನ್ನು ಪೂರ್ಣಗೊಳಿಸಿದ್ದೇನೆ. ಈಗ ಮುಂದಿನ ಕ್ರಮವನ್ನು ನಿರ್ಧರಿಸುವುದು ಸರ್ಕಾರಕ್ಕೆ ಬಿಟ್ಟದ್ದು ಎಂದು ಹೇಳಿದ್ದರು.

541 ಎಕರೆ ಜಮೀನು ಡಿನೋಟಿಫಿಕೇಶನ್‌ನ ನೇರ ಫಲಾನುಭವಿ ಸಿದ್ದರಾಮಯ್ಯ ಎಂದು ಆರೋಪಿಸಿ ಬಿಜೆಪಿ ಶಾಸಕಾಂಗದಲ್ಲಿ ಬಿರುಗಾಳಿ ಎಬ್ಬಿಸಿದ ನಂತರ 2014 ಆಗಸ್ಟ್‌ನಲ್ಲಿ ಆಯೋಗವನ್ನು ರಚಿಸಲಾಯಿತು. ಆಪಾದಿತ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಪಕ್ಷವು ಕೋರಿತ್ತು. ಸಿದ್ದರಾಮಯ್ಯ ಸಿಬಿಐ ತನಿಖೆಗೆ ನಿರಾಕರಿಸಿ ನ್ಯಾಯಾಂಗ ತನಿಖೆಯನ್ನು ಘೋಷಿಸಿದರು. 541 ಎಕರೆ ಡಿನೋಟಿಫಿಕೇಶನ್ ಕರ್ನಾಟಕ ಹೈಕೋರ್ಟ್ ನೀಡಿರುವ ಮಾರ್ಗಸೂಚಿಗೆ ಅನುಗುಣವಾಗಿ ನಡೆದಿದೆ ಎಂದೂ ಅವರು ಹೇಳಿದ್ದರು.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Sun, 26 February 23