ಸಿದ್ದರಾಮಯ್ಯ ಸಂಧಾನ ಯಶಸ್ವಿ: ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಫೈನಲ್

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗು ತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ 'ಕುಟುಂಬ ರಾಜಕಾರಣ'ದ ಬಿಸಿ ತಟ್ಟಿದೆ. ಮಾಜಿ ಶಾಸಕ ಎಚ್.ವೈ. ಮೇಟಿ ಅವರ ಕುಟುಂಬದಲ್ಲಿ ಟಿಕೆಟ್‌ಗಾಗಿ ಭಿನ್ನಮತ ಸ್ಪೋಟ ಗೊಂಡಿದ್ದು, ಕಿರಿಯ ಪುತ್ರಿ ಮಹಾದೇವಿ ಮೇಟಿ ಬಂಡಾಯ ಬಾವುಟ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸ್ವತಃ ಸಿಎಂ ಸಿದ್ದರಾಮಯ್ಯ ಮಧ್ಯೆ ಪ್ರವೇಶಿಸಿ ಮೇಟಿ ಕುಟುಂಬದ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.

ಸಿದ್ದರಾಮಯ್ಯ ಸಂಧಾನ ಯಶಸ್ವಿ: ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಫೈನಲ್
Siddaramaiah

Updated on: Mar 18, 2026 | 4:00 PM

ಬೆಂಗಳೂರು/ಬಾಗಲಕೋಟೆ, (ಮಾರ್ಚ್ 18): ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Bagalkot By Election) ಘೋಷಣೆಯಾಗು ತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷಕ್ಕೆ ‘ಕುಟುಂಬ ರಾಜಕಾರಣ’ದ ಬಿಸಿ ತಟ್ಟಿದ್ದು, ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (Siddaramaiah) ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಹೌದು…ಮಾಜಿ ಶಾಸಕ ಎಚ್.ವೈ. ಮೇಟಿ ಅವರ ಕುಟುಂಬದಲ್ಲಿ (HY Meti Family) ಟಿಕೆಟ್‌ಗಾಗಿ ಭಿನ್ನಮತ ಸ್ಪೋಟಗೊಂಡಿತ್ತು. ಇದರ ಬೆನ್ನಲ್ಲೇ ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ, ಮಹಾದೇವಿ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಇಂದು (ಮಾರ್ಚ್ 18) ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಮೇಟಿ ಕುಟುಂಬಕ್ಕೆ ಟಿಕೆಟ್ ನೀಡುವ ಬಗ್ಗೆ ಫೈನಲ್ ಆಗಿದೆ.

ಮೇಟಿ ಕುಟುಂಬಕ್ಕೆ ಟಿಕೆಟ್ ಫಿಕ್ಸ್​

ಶಾಸಕ ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ ಹಾಗೂ ಮಹಾದೇವಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಮುಖ್ಯವಾಗಿ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವುದಾಗಿ ಮಹಾದೇವಿ ಬಹಿರಂಗ ಎಚ್ಚರಿಕೆ ನೀಡಿದ್ದರು. ಅಲ್ಲದೇ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿ ರುವ ಮಹಾದೇವಿ ಅವರ ಅಭಿಮಾನಿಗಳು ‘ಮಾರ್ಚ್ 20 ರಂದು ಮಹಾದೇವಿ ಮೇಟಿ ಅವರು ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಪೋಸ್ಟ್ ಕಾಂಗ್ರೆಸ್ ಪಕ್ಷದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಇದರಿಂದ ಎಚ್ಚೆತ್ತ ಸಿಎಂ, ಎಲ್ಲರನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಮಹತ್ವದ ಸಭೆ ಮಾಡಿದ್ದು, ತಮ್ಮ ಕುಟುಂಬಕ್ಕೆ ನೀಡುತ್ತೇವೆ. ಆದ್ರೆ, ನಾಲ್ವರಲ್ಲಿ ಒಬ್ಬರಿಗೆ ನೀಡಿದರೆ ಉಳಿದವರು ಪಕ್ಷಕ್ಕೆ ಕೆಲಸ ಮಾಡಬೇಕೆಂದು ಸಿದ್ದರಾಮಯ್ಯ ಸಭೆಯಲ್ಲಿ ಖಡಕ್ ಆಗಿ ಹೇಳಿದ್ದಾರೆ. ಇದಕ್ಕೆ ಮೇಟಿ ಮಕ್ಕಳು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಮೇಟಿ ಕುಟುಂಬಕ್ಕೆ ಎನ್ನುವುದು ಕನ್ಫರ್ಮ್ ಆದಂತಾಗಿದೆ.

ಇದನ್ನೂ ಓದಿ: ಬಾಗಲಕೋಟೆ ಬೈ ಎಲೆಕ್ಷನ್: ಕಾಂಗ್ರೆಸ್​​ ಟಿಕೆಟ್​​ಗಾಗಿ ಹೆಚ್​​.ವೈ. ಮೇಟಿ ಮಕ್ಕಳ ನಡುವೆಯೇ ಪೈಪೋಟಿ

ಸಭೆ ಬಳಿಕ ಸಿಎಂ ಹೇಳಿದ್ದೇನು?


ಇನ್ನು ಸಭೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,  ಬಾಗಲಕೋಟೆಯಲ್ಲಿ ಮೇಟಿ ಕುಟುಂಬದವರು ಟಿಕೆಟ್ ಕೇಳುತ್ತಿದ್ದಾರೆ. ಮಲ್ಲಿಕಾರ್ಜುನ, ಉಮೇಶ್, ಮಹದೇವಿ ಟಿಕೆಟ್ ಕೇಳುತ್ತಿದ್ದಾರೆ. ಯಾರಿಗೆ ಟಿಕೆಟ್ ಕೊಟ್ರೂ ಒಟ್ಟಿಗೆ ಕೆಲಸ ಮಾಡಬೇಕು ಎಂದಿದ್ದೇನೆ. ಅದಕ್ಕೆ ಮಲ್ಲಿಕಾರ್ಜುನ, ಉಮೇಶ್, ಮಹದೇವಿ ಒಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಮೇಟಿ ಕುಟುಂಬಕ್ಕೆ ಎನ್ನುವುದು ಖಚಿತವಾದಂತಾಯ್ತು.

ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​ ಬಗ್ಗೆ ಹೈಕಮಾಂಡ್​ ತೀರ್ಮಾನ ಮಾಡುತ್ತೆ. ಶುಕ್ರವಾರ ರಣದೀಪ್​ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಬರ್ತಾರೆ. ನಿನ್ನೆ (ಮಾರ್ಚ್ 17) ಒಂದು ಟೀಮ್ ದಾವಣಗೆರೆ, ಬಾಗಲಕೋಟೆಗೆ ಹೋಗಿತ್ತು. ಅವರ ವರದಿ ಆಧರಿಸಿ ನಾನು, ಡಿಸಿಎಂ ಚರ್ಚೆ ಮಾಡುತ್ತೇವೆ. ಡಿಸಿಎಂ, ನಾನು ಚರ್ಚೆ ಮಾಡಿ ಹೈಕಮಾಂಡ್​ಗೆ ವರದಿ ಕೊಡುತ್ತೇವೆ ಎಂದರು.

ಬೈ ಎಲೆಕ್ಷನ್ ಟಕೆಟ್ ಬಗ್ಗೆ-ಡಿಕೆಶಿ ಹೇಳಿದ್ದಿಷ್ಟು

ಇನ್ನೊಂದೆಡೆ ಬೈ ಎಲೆಕ್ಷನ್ ಟಿಕೆಟ್ ಬಗ್ಗೆ ಡಿಸಿಎಂ , ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಮಾತನಾಡಿದ್ದು, ನಾನು ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಬಗ್ಗೆ ಇನ್ನೂ ವರದಿ ಬಂದಿಲ್ಲ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಬಗ್ಗೆಯೂ ಚರ್ಚೆ ಆಗಿದೆ. H.Y.ಮೇಟಿ ಕುಟುಂಬದ ಸದಸ್ಯರು ಸಿಎಂ ಭೇಟಿ ಮಾಡಿದ್ದಾರೆ. ನಾನು ಮಂತ್ರಿಗಳ ಬಳಿ ಚರ್ಚೆ ಮಾಡಿದ್ದೇನೆ. ನಾನು ವರದಿ ಕೊಡುತ್ತೇನೆ. ಬಳಿಕ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಹೇಳಿದರು.

ಯಾರು ಕೈಗೆ ಹಿತ ಈ ನಾಲ್ವರೊಳಗೆ?

ಬಾಗಲಕೋಟೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಗಾಗಿ ಎಚ್​​​ವೈ ಮೇಟಿ ಮಕ್ಕಳ ನಡುವೆ ತೀವ್ರ ಪೈಪೋಟಿ ಶುರುವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಮೇಟಿ ಮಕ್ಕಳ ಜತೆ ಸಭೆ ಮಾಡಿದ್ದಾರೆ. ಅಲ್ಲದೇ ನಾಲ್ವರಲ್ಲಿ ಒಬ್ಬರಿಗೆ ಕೊಡುವುದಾಗಿ ಸಹ ಒಪ್ಪಿಕೊಂಡಿದ್ದಾರೆ. ಆದ್ರೆ, ಯಾರಿಗೆ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿ ಇಟ್ಟಿದ್ದಾರೆ. ಹಿರಿಯ ಪುತ್ರಿ ಬಾಯಕ್ಕ, ಕಿರಿಯ ಸಹೋದರಿ ಮಹಾದೇವಿ, ಹಿರಿಯ ಪುತ್ರ ಮಲ್ಲಿಕಾರ್ಜುನ ಮೇಟಿ, ಕಿರಿಯ ಪುತ್ರ ಉಮೇಶ್ ಮೇಟಿ. ಈ ನಾಲ್ವರಲ್ಲಿ ಯಾರಿಗೆ ಟಿಕೆಟ್ ಒಲಿಯುತ್ತೆ ಎನ್ನುವುದೇ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಒಟ್ಟಿನಲ್ಲಿ ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಮೇಟಿ ಕುಟುಂಬಕ್ಕೆ ಖಚಿತವಾಗಿದ್ದು, ನಾಲ್ವರಲ್ಲಿ ಯಾರಿಗೆ ಎನ್ನುವುದೇ ಇನ್ನೂ ನಿಗೂಢವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:56 pm, Wed, 18 March 26

Follow Us