ಪ್ರವಾದಿ ಬಗ್ಗೆ ನೂಪುರ್ ಶರ್ಮಾ ಹೇಳಿಕೆ ವಿವಾದ ಹಿನ್ನಲೆಯಲ್ಲಿ ಹಿಂಸಾಚಾರ ಖಂಡಿಸಿ ನಾಳೆ ದೇಶದಾದ್ಯಂತ ಬಜರಂಗ ದಳ ಪ್ರತಿಭಟನೆ

ಇಸ್ಲಾಮಿಕ್ ಜಿಹಾದಿ ಮೂಲಭೂತವಾದಿಗಳಿಂದ ಹೆಚ್ಚುತ್ತಿರುವ ಉಗ್ರಗಾಮಿ ಘಟನೆಗಳ ವಿರುದ್ಧ ತನ್ನ ಯುವ ಘಟಕದ ಕಾರ್ಯಕರ್ತರು ಗುರುವಾರ ದೇಶಾದ್ಯಂತ ಜಿಲ್ಲಾಡಳಿತ ಕೇಂದ್ರ ಕಚೇರಿಯಲ್ಲಿ ಧರಣಿ ನಡೆಸಲಿದ್ದಾರೆ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಜ್ಞಾಪನಾ ಪತ್ರವನ್ನು ಸಲ್ಲಿಸಲಿದ್ದಾರೆ..

ಪ್ರವಾದಿ ಬಗ್ಗೆ ನೂಪುರ್ ಶರ್ಮಾ ಹೇಳಿಕೆ ವಿವಾದ ಹಿನ್ನಲೆಯಲ್ಲಿ ಹಿಂಸಾಚಾರ ಖಂಡಿಸಿ ನಾಳೆ ದೇಶದಾದ್ಯಂತ ಬಜರಂಗ ದಳ ಪ್ರತಿಭಟನೆ
ಬಜರಂಗ ದಳ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 15, 2022 | 3:14 PM

ದೆಹಲಿ:ಬಿಜೆಪಿಯಿಂದ (BJP) ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾ (Nupur Sharma) ಅವರು ಪ್ರವಾದಿ ಮೊಹಮ್ಮದ್ (Prophet muhammad) ಅವರ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯಗಳಾದ್ಯಂತ ಗುಂಪು ಹಿಂಸಾಚಾರ ಮತ್ತು ಗಲಭೆಗಳು ನಡೆದಿದ್ದು ಇದನ್ನು ಖಂಡಿಸಿ ಬಜರಂಗದಳ (Bajrang Dal) ಸದಸ್ಯರು ನಾಳೆ (ಜೂನ್ 16 ರಂದು) ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿದ್ದಾರೆ. ಇಸ್ಲಾಮಿಕ್ ಜಿಹಾದಿ ಮೂಲಭೂತವಾದಿಗಳಿಂದ ಹೆಚ್ಚುತ್ತಿರುವ ಉಗ್ರಗಾಮಿ ಘಟನೆಗಳ ವಿರುದ್ಧ ತನ್ನ ಯುವ ಘಟಕದ ಕಾರ್ಯಕರ್ತರು ಗುರುವಾರ ದೇಶಾದ್ಯಂತ ಜಿಲ್ಲಾಡಳಿತ ಕೇಂದ್ರ ಕಚೇರಿಯಲ್ಲಿ ಧರಣಿ ನಡೆಸಲಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಜ್ಞಾಪನಾ ಪತ್ರವನ್ನು ಸಲ್ಲಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಕಟಣೆ ತಿಳಿಸಿದೆ. ಮಸೀದಿಗಳ ಮೂಲಕ ನಡೆಸುತ್ತಿರುವ ಜಿಹಾದಿ ಉಗ್ರರ ಹಿಂಸಾಚಾರದ ವಿರುದ್ಧ ಪ್ರತಿಭಟಿಸಲು ನಾವು ನಿರ್ಧರಿಸಿದ್ದೇವೆ. ಅವರು ಹಿಂದೂಗಳನ್ನು ಗುರಿಯಾಗಿಸಿಕೊಂಡು ಅವರ ಮನೆಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಈ ಹಿಂಸಾತ್ಮಕ ಗುಂಪುಗಳು ಹುಟ್ಟಿಕೊಂಡ ಮಸೀದಿಗಳ ಮೇಲೆ ಸರ್ಕಾರ ಕಟ್ಟುನಿಟ್ಟಿನ ನಿಗಾ ಇಡಬೇಕೆಂದು ನಾವು ಬಯಸುತ್ತೇವೆ. ಈ ಹಿಂಸಾತ್ಮಕ ಗುಂಪುಗಳನ್ನು ಪ್ರಚೋದಿಸಿದ ಜನರನ್ನು ಗುರುತಿಸಬೇಕು ಮತ್ತು ಅವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ವಿಎಚ್‌ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರವಾದಿ ಮೊಹಮ್ಮದ್ ವಿರುದ್ಧ ಶರ್ಮಾ ಅವರ ಹೇಳಿಕೆ ಖಂಡಿಸಿ ಜೂನ್ 10 ರಂದು ದೆಹಲಿಯ ಜಾಮಾ ಮಸೀದಿಯ ಹೊರಗೆ ಸೇರಿದಂತೆ ದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಜನಸಮೂಹವನ್ನು ಪ್ರಚೋದಿಸಿದವರನ್ನು ತಕ್ಷಣವೇ ಬಂಧಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪರಾಂಡೆ ಒತ್ತಾಯಿಸಿದ್ದಾರೆ. ಬೆದರಿಕೆಗೆ ಒಳಗಾದವರ ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು. ಬೆದರಿಕೆ ಹಾಕುವವರನ್ನು ಬಂಧಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಬಿಜೆಪಿಯ ‘ಬುಲ್ಡೋಜರ್’ ತಡೆಯುವ ಶಕ್ತಿ ಯಾರಿಗಿದೆ?: ಅಖಿಲೇಶ್ ಯಾದವ್
Image
ಜೂನ್ 20ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ; ಅರಮನೆ ಮೈದಾನದಲ್ಲಿ ನಾಳೆ ಸಂಜೆ 4 ಗಂಟೆಗೆ ಸಿದ್ಧತಾ ಸಭೆ
Image
Fact Check ನೂಪುರ್ ಶರ್ಮಾಗೆ 34 ದೇಶಗಳು ಬೆಂಬಲ ನೀಡಿವೆ ಎಂಬ ವೈರಲ್ ಟ್ವೀಟ್ ಸುಳ್ಳು

ಜಮೀಯತ್ ಉಲಾಮಾ-ಇ-ಹಿಂದ್, ಮಸೀದಿಗಳು ಮತ್ತು ಇಂತಹ ಗಲಭೆಕೋರರಿಗೆ ಆಹಾರ ಮತ್ತು ಸ್ಫೂರ್ತಿಯ ಮೂಲವಾಗಿರುವ ಜಿಹಾದಿ ಮನಸ್ಥಿತಿಯ ಜನರು ಮತ್ತು ಮುಸ್ಲಿಂ ಸಂಘಟನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ವಿಎಚ್‌ಪಿಯ ದೆಹಲಿ ಘಟಕವು ಜೂನ್ 10 ರ ಹಿಂಸಾಚಾರದ ವಿರುದ್ಧ ಪ್ರತಿಭಟನೆಯನ್ನು ದಾಖಲಿಸಲು ಮಂಗಳವಾರ ರಾತ್ರಿ 8 ಗಂಟೆಗೆ ದೇವಾಲಯಗಳಲ್ಲಿ ಸೇರಲು ಮತ್ತು ಹನುಮಾನ್ ಚಾಲೀಸಾದ ಸಾಮೂಹಿಕ ಪಠಣದಲ್ಲಿ ಭಾಗವಹಿಸಲು ನಗರದ ಜನರಿಗೆ ಸೋಮವಾರ ಕರೆ ನೀಡಿತ್ತು.

ನೂಪುರ್ ಶರ್ಮಾ ಹತ್ಯೆಗೆ ಕಾನೂನುಬಾಹಿರ ಫತ್ವಾಗಳನ್ನು ಹೊರಡಿಸಲಾಗಿದೆ. ಇಂತಹ ಅಕ್ರಮ ಪ್ರದರ್ಶನಗಳಿಂದಾಗಿ ಹಿಂದೂ ಸಮಾಜದ ಮೇಲೆ ನಿರ್ಮಿಸಲಾದ ಒತ್ತಡವನ್ನು ಹಿಂದೂ ಸಮಾಜ ತಿರಸ್ಕರಿಸುತ್ತದೆ ಮತ್ತು ಬಲವಾಗಿ ಖಂಡಿಸುತ್ತದೆ ಎಂದು ದೆಹಲಿ ವಿಎಚ್‌ಪಿ ಮುಖ್ಯಸ್ಥ ಕಪಿಲ್ ಖನ್ನಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾಳೆ ರಾಜ್ಯಾದ್ಯಂತ ಬೃಹತ್ ಹೋರಾಟಕ್ಕೆ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ತೀರ್ಮಾನ

ಹಿಂದೂಗಳ ಮೇಲೆ ದಾಳಿ, ಹಿಂದೂಗಳ ಆಸ್ತಿ ಪಾಸ್ತಿ ಹಾನಿ, ಶ್ರೀರಾಮ ನವಮಿ ಶೋಭಾಯಾತ್ರೆ ವೇಳೆ ಕಲ್ಲುತೂರಾಟ ಮತ್ತು ನೂಪುರ್ ಶರ್ಮಾ ಹೇಳಿಕೆ ನೆಪದಲ್ಲಿ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಖಂಡಿಸಿ ಬಜರಂಗದಳ ಹಾಗೂ ವಿಶ್ವಹಿಂದೂಪರಿಷತ್ ನಾಳೆ ರಾಜ್ಯದ ಎಲ್ಲಾ ಜಿಲ್ಲಾಕೇಂದ್ರಗಳಲ್ಲೂ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ನಾಳಿನ ಪ್ರತಿಭಟನೆಯ ರೂಪುರೇಷೆ ಸಿದ್ಧಪಡಿಸಲು ಬೈಠಕ್ ಕರೆದಿದ್ದು, ರಾತ್ರಿ ಒಂಬತ್ತು ಗಂಟೆ ದೇಶದ ಎಲ್ಲಾ ಮುಖಂಡರ ಜೊತೆಗೆ ಆನ್ಲೈನ್ ನಲ್ಲಿ ಬೈಠಕ್ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡಲಿದ್ದಾರೆ.

ನಾಳೆ ಮಧ್ಯಾಹ್ನ ಮೂರು ಗಂಟೆ ಗೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆ ಇದ್ದು ನಗರ ಪೋಲಿಸ್ ಆಯುಕ್ತರಿಗೆ ಬೆಂಗಳೂರು ಮುಖಂಡರು ಮನವಿ ನೀಡಿಲಿದ್ದಾರೆ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:33 pm, Wed, 15 June 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ