ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ

| Updated By: ganapathi bhat

Updated on: Aug 25, 2021 | 7:34 PM

Balachandra Jarkiholi: ಶ್ರೀಮಂತ ಪಾಟೀಲ್ ಹಾಗೂ ಮಹೇಶ್ ಕುಮಟಹಳ್ಳಿ ಜತೆ ಜಾರಕಿಹೊಳಿ ಸಹೋದರರು ದೆಹಲಿಗೆ ಆಗಮಿಸಿದ್ದಾರೆ. ಸಿಎಂ ಬೊಮ್ಮಾಯಿ ಭೇಟಿಗಾಗಿ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಕಾಯುತ್ತಿದ್ದಾರೆ.

ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ
ರಮೇಶ್​ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ
Follow us on

ದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ  ನವದೆಹಲಿಯ ಕರ್ನಾಟಕ ಭವನಕ್ಕೆ ಜಾರಕಿಹೊಳಿ ಸಹೋದರರು ಆಗಮಿಸಿದ್ದಾರೆ. ನಾವು ಬೇರೆ ಕೆಲಸದ ವಿಚಾರವಾಗಿ ನವದೆಹಲಿಗೆ ಬಂದಿದ್ದೇವೆ. ಸಿಎಂ ಬಂದಿದ್ದಾರೆಂದು ಗೊತ್ತಾಯ್ತು. ಹಾಗಾಗಿ, ಭೇಟಿಗೆ ಆಗಮಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಹೋಗುತ್ತೇವೆ. ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿ​ಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡುತ್ತೇವೆ. ಮೂವರಿಗೂ ಸಚಿವ ಸ್ಥಾನ ನೀಡುವಂತೆ ಸಿಎಂ ಬೊಮ್ಮಾಯಿ ಭೇಟಿಯಾಗಿ ಮನವಿ ಮಾಡುತ್ತೇವೆ ಎಂದು ನವದೆಹಲಿಯಲ್ಲಿ ಬಾಲಚಂದ್ರ ತಿಳಿಸಿದ್ದಾರೆ.

ಜಾರಕಿಹೊಳಿ ಸಹೋದರರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ನವದೆಹಲಿಗೆ ಆಗಮಿಸಿದ್ದಾರೆ. ಶ್ರೀಮಂತ ಪಾಟೀಲ್ ಹಾಗೂ ಮಹೇಶ್ ಕುಮಟಹಳ್ಳಿ ಜತೆ ಜಾರಕಿಹೊಳಿ ಸಹೋದರರು ದೆಹಲಿಗೆ ಆಗಮಿಸಿದ್ದಾರೆ. ಸಿಎಂ ಬೊಮ್ಮಾಯಿ ಭೇಟಿಗಾಗಿ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಕಾಯುತ್ತಿದ್ದಾರೆ.

ಕೇಂದ್ರ ಸಚಿವರನ್ನು ಭೇಟಿಯಾದ ಬಸವರಾಜ ಬೊಮ್ಮಯಿ
ಬುಧವಾರ ದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಕೃಷಿ ಸಚಿವ ತೋಮರ್ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ತೋಮರ್​ ಜೊತೆಗೆ ಸಿಎಂ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಜಲಸಂಪನ್ಮೂಲ ಖಾತೆ ಸಚಿವ ಕಾರಜೋಳ ಉಪಸ್ಥಿತರಿದ್ದರು. ಬಳಿಕ, ಕೇಂದ್ರ ಜಲಶಕ್ತಿ ಸಚಿವರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಗಜೇಂದ್ರಸಿಂಗ್​ ಶೇಖಾವತ್ ಭೇಟಿಯಾಗಿ, ಮಹದಾಯಿ, ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: Raksha Bandhan 2021: ಗೋಕಾಕ ಶಾಸಕ ರಮೇಶ್ ಜಾರಕಿಹೊಳಿಗೆ ಬಿಜೆಪಿ ಕಾರ್ಯಕರ್ತೆಯರ ರಾಖಿ ಬಂಧನ

ನೀರಾವರಿ ಯೋಜನೆಗಳು, ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸುವ ಕುರಿತು ಚರ್ಚೆ: ದೆಹಲಿಯಲ್ಲಿ ಬಸವರಾಜ ಬೊಮ್ಮಾಯಿ

Published On - 7:27 pm, Wed, 25 August 21