ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ 5 ಬಾಣಂತಿಯರ ಸಾವು, ಸರ್ಕಾರದ ವಿರುದ್ಧ ಅಶೋಕ್​ ಆಕ್ರೋಶ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐದು ಬಾಣಂತಿಯರು ಮೃತಪಟ್ಟಿರುವ ಘಟನೆ ಕರ್ನಾಟಕದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರವು ತನಿಖಾ ಸಮಿತಿ ರಚಿಸಿದ್ದರೂ, ಮೊದಲ ವರದಿಯನ್ನು ಗೌಪ್ಯವಾಗಿಟ್ಟಿರುವುದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ಆರ್. ಅಶೋಕ್ ಅವರು ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ. ಆರೋಗ್ಯ ಸಚಿವರ ರಾಜೀನಾಮೆಗೆ ಒತ್ತಾಯಿಸಲಾಗಿದೆ.

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ 5 ಬಾಣಂತಿಯರ ಸಾವು, ಸರ್ಕಾರದ ವಿರುದ್ಧ ಅಶೋಕ್​ ಆಕ್ರೋಶ
ಆರ್​ ಅಶೋಕ್​
Follow us
ವಿವೇಕ ಬಿರಾದಾರ
|

Updated on: Nov 29, 2024 | 11:14 AM

ಬೆಂಗಳೂರು, ನವೆಂಬರ್​ 29: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ (BIMS) ಕಳೆದ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟಿದ್ದು, ಜನರ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಸರ್ಕಾರ ತನಿಖೆ ನಡೆಸಲು ಮತ್ತೊಂದು ಸಮಿತಿ ರಚಿಸಿದೆ. ಆದರೆ, ಈ ಹಿಂದೆ ರಚಿಸಲಾಗಿದ್ದ ತನಿಖಾ ಸಮಿತಿ ವರದಿ ಸಿದ್ದಪಡಿಸಿ ಈಗಾಗಲೆ ಸರ್ಕಾರಕ್ಕೆ ನೀಡಿದೆ. ಈ ವರದಿಯನ್ನು ಸರ್ಕಾರ ಗೌಪ್ಯವಾಗಿಟ್ಟಿದ್ದು, ವಿಪಕ್ಷಗಳ ಆಕ್ರೋಶವಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್​ ಅಶೋಕ್ (R Ashok)​ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಬಳ್ಳಾರಿಯ ಜಿಲ್ಲಾಸ್ಪತ್ರೆ ಹಾಗು ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ 5 ಮಂದಿ ಬಾಣಂತಿಯರ ಸಾವಾಗಿದ್ದು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನ ಕರ್ನಾಟಕ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.” ಎಂದು ಆರ್ ಅಶೋಕ್​ ಟ್ವಿಟ್​ ಮಾಡಿದ್ದಾರೆ.

“ಈ ಸರಣಿ ಸಾವಿನ ಬೆನ್ನಲ್ಲೇ, ನವೆಂಬರ್ 16ನೆ ತಾರೀಖಿನಂದು ಖಾಸಗಿ ಕಂಪನಿಯೊಂದು ಸರಬರಾಜು ಮಾಡಿರುವ Ringer Lactate Infusion ಔಷದಿಯನ್ನ ಬಳಕೆ ಮಾಡದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸುತ್ತೋಲೆ ಹೊರಡಿಸಿದೆ.”

ಟ್ವಿಟರ್​ ಪೋಸ್ಟ್​

“ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿಗೂ ಈ ಸುತ್ತೋಲೆಗೂ ಏನಾದರೂ ಸಂಬಂಧವಿದೆಯೇ? ಈ ಕಳಪೆ ಗುಣಮಟ್ಟದ ಔಷಧಿ ಪೂರೈಕೆಗೆ, ಬಳಕೆಗೆ ಹೊಣೆ ಯಾರು? ಸರ್ಕಾರ ವರದಿಯನ್ನ ಮುಚ್ಚಿಡುವ ಮೂಲಕ ಯಾರನ್ನು ರಕ್ಷಿಸುತ್ತಿದೆ?”

ಇದನ್ನೂ ಓದಿ: ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು: ಉಸ್ತುವಾರಿ ಸಚಿವ ಜಮೀರ್ ವಿರುದ್ಧ ಸ್ಥಳೀಯರ ಆಕ್ರೋಶ

“ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ಇಂತಹ ಆಘಾತಕಾರಿ ಘಟನೆ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ ಅವರಾಗಲಿ, ಡಿಸಿಎಂ ಡಿಕೆ ಶಿವಕುಮಾರ್​ ಅವರಾಗಲಿ ಇದರ ಬಗ್ಗೆ ಕ್ರಮ ಕೈಗೊಳ್ಳುವುದಿರಲಿ, ಕನಿಷ್ಠ ಪಕ್ಷ ಸಂತಾಪ ಕೂಡ ಸೂಚಿಸಿಲ್ಲ. ಇನ್ನು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್​ ಅಹ್ಮದ್​ ಖಾನ್​ ಅವರು ಈವರೆಗೂ ಜಿಲ್ಲೆಗೆ ಭೇಟಿ ನೀಡುವ ಗೋಜಿಗೂ ಹೋಗಿಲ್ಲ.”

“ಈ ಪ್ರಕರಣದ ನೈತಿಕೆ ಹೊಣೆ ಹೊತ್ತು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್​ ಅವರು ಕೂಡಲೇ ರಾಜೀನಾಮೆ ನೀಡಬೇಕು. ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನ ಒತ್ತಾಯಿಸುತ್ತೇನೆ.” ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಲಬುರಗಿ: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
ಕಲಬುರಗಿ: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
ಬಿಗ್ ಬಾಸ್ ಮನೆಯಲ್ಲಿ ರಾಜ-ಯುವರಾಣಿ ಬಂಧನ; ಮಾಡಿದ ತಪ್ಪೇನು?
ಬಿಗ್ ಬಾಸ್ ಮನೆಯಲ್ಲಿ ರಾಜ-ಯುವರಾಣಿ ಬಂಧನ; ಮಾಡಿದ ತಪ್ಪೇನು?
Daily Devotional: ಅಯ್ಯಪ್ಪ ಮಾಲೆ ಧಾರಣೆಯ ಹಿಂದಿನ ಮಹತ್ವ ತಿಳಿಯಿರಿ
Daily Devotional: ಅಯ್ಯಪ್ಪ ಮಾಲೆ ಧಾರಣೆಯ ಹಿಂದಿನ ಮಹತ್ವ ತಿಳಿಯಿರಿ
ಈ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದೆ
ಈ ರಾಶಿಯವರಿಗೆ ಆರು ಗ್ರಹಗಳ ಶುಭ ಫಲವಿದೆ
ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ