ಯತ್ನಾಳ್ ಉಚ್ಛಾಟನೆ ಬೆನ್ನಲ್ಲೇ ರಾಜೀನಾಮೆ ಪರ್ವ, ಮತ್ತೊಂದಡೆ ಸಂಭ್ರಮ: ಸತ್ಯವಂತರಿಗೆ ಕಾಲವಲ್ಲ ಎಂದ ಬಸನಗೌಡ
ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಉಚ್ಚಾಟನೆಗೆ ಯತ್ನಾಳ್ ಅವರ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅವರು ಪಕ್ಷದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಛಾಟನೆ ಮಾಡುತ್ತಿದ್ದಂತೆ ಕೆಲ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಹಿ ಹಂಚಿ ಸಂಭ್ರಮಿಸಿದರು.

ವಿಜಯಪುರ, ಮಾರ್ಚ್ 26: ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ವಿಜಯಪುರದ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರನ್ನು (Basanagowda Patil Yatnal) ಪಕ್ಷದದಿಂದ ಉಚ್ಛಾಟನೆ ಮಾಡಲಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆಗೆ ಅವರ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದು, ಪಕ್ಷದ ವಿರುದ್ಧ ಅಸಮಾಧಾನ ಹೊರಹಾಗಿದ್ದಾರೆ. ಪಕ್ಷದಲ್ಲಿನ ತಮ್ಮ ಸ್ಥಾನಗಳಿಗೆ ಬಸನಗೌಡ ಪಾಟೀಲ್ ಯತ್ನಾಳ್ ರಾಜೀನಾಮೆ ನೀಡುತ್ತಿದ್ದಾರೆ.
ಬಿಜೆಪಿ ನಗರ ಒಬಿಸಿ ಮೋರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ಭೀಮು ಮಾಶ್ಯಾಳ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಗರ ಮಂಡಳ ಅಧ್ಯಕ್ಷ ಹೂಗಾರ್ ಅವರಿಗೆ ವಾಟ್ಸಾಪ್ ಮೂಲಕ ರಾಜಿನಾಮೆ ಪತ್ರ ರವಾನೆ ಮಾಡಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ ಉಚ್ಛಾಟನೆ ವಿರೋಧಿಸಿ ವಿಜಯಪುರ ನಗರ ಮಂಡಲ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಿದ್ದನಗೌಡ ಬಿರಾದಾರ್ ರಾಜೀನಾಮೆ ನೀಡಿದ್ದಾರೆ. ಹಾಗೇ, ಬಿಜೆಪಿ ನಗರ ಮಂಡಲ ರೈತ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಚು ಬಿರಾದಾರ ಮತ್ತು ನಗರ ಮಂಡಲ ಅಧ್ಯಕ್ಷ ಸ್ಥಾನಕ್ಕೆ ಶಂಕರ ಹೂಗಾರ ರಾಜೀನಾಮೆ ನೀಡಿದ್ದಾರೆ. I STAND WITH ಯತ್ನಾಳ ಎಂದು ಬರೆದು ರಾಜೀನಾಮೆ ಸಲ್ಲಿಸಿದ್ದಾರೆ.
ಸತ್ಯಮೇವ ಜಯತೆ ಎಂದ ಯತ್ನಾಳ್
ಪಕ್ಷದಿಂದ ಉಚ್ಚಾಟನೆ ಮಾಡುತ್ತಿದ್ದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ “ನ ದೈನ್ಯಂ, ನ ಪಲಾಯನಂ, ಸತ್ಯಮೇವ ಜಯತೆ” ಎಂದು ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.
“ಸತ್ಯವಂತರಿಗಿದು ಕಾಲವಲ್ಲ
ದುಷ್ಟಜನರಿಗೆ ಸುಭಿಕ್ಷಕಾಲ ||
ಉಪಕಾರ ಮಾಡಿದರೆ ಅಪಕರಿಸುವ ಕಾಲ
ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ
ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ
ಸತ್ಯವಂತರಿಗಿದು ಕಾಲವಲ್ಲ” ಎಂದು ಪೋಸ್ಟ್ ಹಾಕಿದ್ದಾರೆ. ಇನ್ನು, ಪ್ರತಿನಿತ್ಯ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಕಚೇರಿ ಖಾಲಿ ಖಾಲಿಯಾಗಿದೆ.
ಟ್ವಿಟರ್ ಪೋಸ್ಟ್
The party has expelled me for 6 years for speaking against dynasty politics, corruption, reforms within the party, remove one man upmanship & request to develop North Karnataka.
The party has rewarded me for ‘Calling a Spade, a Spade’
Certain vested interests have played their…
— Basanagouda R Patil (Yatnal) (@BasanagoudaBJP) March 26, 2025
ಇದನ್ನೂ ಓದಿ: ಯತ್ನಾಳ್ ಉಚ್ಛಾಟನೆ ಬೆನ್ನಲ್ಲೇ ಮಹತ್ವದ ಸಂದೇಶ ರವಾನಿಸಿದ ವಿಜಯೇಂದ್ರ..!
ಯತ್ನಾಳ ಉಚ್ಛಾಟನೆಗೆ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮ
ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಛಾಟನೆ ಮಾಡುತ್ತಿದ್ದಂತೆ ನಗರದ ಜೋರಾಪುರ ಪೇಟೆಯಲ್ಲಿನ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಹಿ ಹಂಚಿ ಸಂಭ್ರಮಿಸಿದರು. ರಾಜೂ ಹುನ್ನೂರ, ಆಕಾಶ ತೊರವಿ, ಸುಮಿತ್ ಮ್ಯಾಡಿ, ಸುಮೀತ್ ಗೌರ, ಆಕಾಶ ನಾಗನೂರ ಹಾಗೂ ಇತತರು ಸಂಭ್ರಮಿಸುವ ಮೂಲಕ ಯತ್ನಾಳ ಉಚ್ಛಾಟನೆಯನ್ನು ಸ್ವಾಗತಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:04 pm, Wed, 26 March 25