ಯತ್ನಾಳ್​ ಉಚ್ಛಾಟನೆ ಬೆನ್ನಲ್ಲೇ ರಾಜೀನಾಮೆ ಪರ್ವ, ಮತ್ತೊಂದಡೆ ಸಂಭ್ರಮ: ಸತ್ಯವಂತರಿಗೆ ಕಾಲವಲ್ಲ ಎಂದ ಬಸನಗೌಡ

ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಉಚ್ಚಾಟನೆಗೆ ಯತ್ನಾಳ್ ಅವರ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅವರು ಪಕ್ಷದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಛಾಟನೆ ಮಾಡುತ್ತಿದ್ದಂತೆ ಕೆಲ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಹಿ ಹಂಚಿ ಸಂಭ್ರಮಿಸಿದರು.

ಯತ್ನಾಳ್​ ಉಚ್ಛಾಟನೆ ಬೆನ್ನಲ್ಲೇ ರಾಜೀನಾಮೆ ಪರ್ವ, ಮತ್ತೊಂದಡೆ ಸಂಭ್ರಮ: ಸತ್ಯವಂತರಿಗೆ ಕಾಲವಲ್ಲ ಎಂದ ಬಸನಗೌಡ
ಬಸನಗೌಡ ಪಾಟೀಲ್ ಯತ್ನಾಳ್​
Edited By: ವಿವೇಕ ಬಿರಾದಾರ

Updated on: Mar 26, 2025 | 8:18 PM

ವಿಜಯಪುರ, ಮಾರ್ಚ್​ 26: ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ವಿಜಯಪುರದ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ರನ್ನು (Basanagowda Patil Yatnal) ಪಕ್ಷದದಿಂದ ಉಚ್ಛಾಟನೆ ಮಾಡಲಾಗಿದೆ. ಬಸನಗೌಡ ಪಾಟೀಲ್​ ಯತ್ನಾಳ್​ ಉಚ್ಛಾಟನೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್​ ಉಚ್ಛಾಟನೆಗೆ ಅವರ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದು, ಪಕ್ಷದ ವಿರುದ್ಧ ಅಸಮಾಧಾನ ಹೊರಹಾಗಿದ್ದಾರೆ. ಪಕ್ಷದಲ್ಲಿನ ತಮ್ಮ ಸ್ಥಾನಗಳಿಗೆ ಬಸನಗೌಡ ಪಾಟೀಲ್​ ಯತ್ನಾಳ್ ರಾಜೀನಾಮೆ ನೀಡುತ್ತಿದ್ದಾರೆ.

ಬಿಜೆಪಿ ನಗರ ಒಬಿಸಿ ಮೋರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ಭೀಮು ಮಾಶ್ಯಾಳ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಗರ ಮಂಡಳ ಅಧ್ಯಕ್ಷ ಹೂಗಾರ್‌ ಅವರಿಗೆ ವಾಟ್ಸಾಪ್ ಮೂಲಕ ರಾಜಿನಾಮೆ ಪತ್ರ ರವಾನೆ ಮಾಡಿದ್ದಾರೆ.

ಬಸನಗೌಡ ಪಾಟೀಲ್​ ಯತ್ನಾಳ ಉಚ್ಛಾಟನೆ ವಿರೋಧಿಸಿ ವಿಜಯಪುರ ನಗರ ಮಂಡಲ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಿದ್ದನಗೌಡ ಬಿರಾದಾರ್ ರಾಜೀನಾಮೆ ನೀಡಿದ್ದಾರೆ. ಹಾಗೇ,  ಬಿಜೆಪಿ ನಗರ ಮಂಡಲ ರೈತ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಚು ಬಿರಾದಾರ ಮತ್ತು  ನಗರ ಮಂಡಲ ಅಧ್ಯಕ್ಷ ಸ್ಥಾನಕ್ಕೆ ಶಂಕರ ಹೂಗಾರ ರಾಜೀನಾಮೆ ನೀಡಿದ್ದಾರೆ. I STAND WITH ಯತ್ನಾಳ ಎಂದು ಬರೆದು ರಾಜೀನಾಮೆ ಸಲ್ಲಿಸಿದ್ದಾರೆ.

ಸತ್ಯಮೇವ ಜಯತೆ ಎಂದ ಯತ್ನಾಳ್​

ಪಕ್ಷದಿಂದ ಉಚ್ಚಾಟನೆ ಮಾಡುತ್ತಿದ್ದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ನ ದೈನ್ಯಂ, ನ ಪಲಾಯನಂ, ಸತ್ಯಮೇವ ಜಯತೆಎಂದು ಎಕ್ಸ್​​ನಲ್ಲಿ ಟ್ವೀಟ್ ಮಾಡಿದ್ದಾರೆ.

ಸತ್ಯವಂತರಿಗಿದು ಕಾಲವಲ್ಲ

ದುಷ್ಟಜನರಿಗೆ ಸುಭಿಕ್ಷಕಾಲ ||

ಉಪಕಾರ ಮಾಡಿದರೆ ಅಪಕರಿಸುವ ಕಾಲ

ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ

ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ

ಸತ್ಯವಂತರಿಗಿದು ಕಾಲವಲ್ಲಎಂದು ಪೋಸ್ಟ್​ ಹಾಕಿದ್ದಾರೆ. ಇನ್ನು, ಪ್ರತಿನಿತ್ಯ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಬಸನಗೌಡ ಪಾಟೀಲ್​ ಯತ್ನಾಳ್​ ಕಚೇರಿ ಖಾಲಿ ಖಾಲಿಯಾಗಿದೆ.

ಟ್ವಿಟರ್​ ಪೋಸ್ಟ್​

ಇದನ್ನೂ ಓದಿ: ಯತ್ನಾಳ್​ ಉಚ್ಛಾಟನೆ ಬೆನ್ನಲ್ಲೇ ಮಹತ್ವದ ಸಂದೇಶ ರವಾನಿಸಿದ ವಿಜಯೇಂದ್ರ..!

ಯತ್ನಾಳ ಉಚ್ಛಾಟನೆಗೆ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮ

ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಛಾಟನೆ ಮಾಡುತ್ತಿದ್ದಂತೆ ನಗರದ ಜೋರಾಪುರ ಪೇಟೆಯಲ್ಲಿನ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಹಿ ಹಂಚಿ ಸಂಭ್ರಮಿಸಿದರು. ರಾಜೂ ಹುನ್ನೂರ, ಆಕಾಶ ತೊರವಿ, ಸುಮಿತ್ ಮ್ಯಾಡಿ, ಸುಮೀತ್ ಗೌರ, ಆಕಾಶ ನಾಗನೂರ ಹಾಗೂ ಇತತರು ಸಂಭ್ರಮಿಸುವ ಮೂಲಕ ಯತ್ನಾಳ ಉಚ್ಛಾಟನೆಯನ್ನು ಸ್ವಾಗತಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Wed, 26 March 25

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us