ಕೊರೊನಾ ವೇಳೆ ಯಡಿಯೂರಪ್ಪ ಸರ್ಕಾರದಲ್ಲಿ 40 ಸಾವಿರ ಕೋಟಿ ರೂ. ಅವ್ಯವಹಾರ: ಯತ್ನಾಳ್​ ಆರೋಪ

| Updated By: ವಿವೇಕ ಬಿರಾದಾರ

Updated on: Dec 26, 2023 | 1:39 PM

ಕೊರೊನಾ ಸಂದರ್ಭದಲ್ಲಿ 45 ರೂಪಾಯಿ ಮಾಸ್ಕ್​ಗೆ 485 ರೂಪಾಯಿ ನಿಗದಿಪಡಿಸಿದರು. ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿದ್ರಿ. ಇದಕ್ಕೆ 10 ಸಾವಿರ ಬೆಡ್​​ ಬಾಡಿಗೆ ಪಡೆದಿದರು. ಆ ಹಣದಲ್ಲೇ ಬೆಡ್​​ಗಳನ್ನು ಖರೀದಿ ಮಾಡಿದ್ದರೆ ಉಳಿಯುತ್ತಿತ್ತು ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ? ಈ ವಿಚಾರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದಲ್ಲಿ ಹೇಳಿದ್ದೇನೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದರು.

ಕೊರೊನಾ ವೇಳೆ ಯಡಿಯೂರಪ್ಪ ಸರ್ಕಾರದಲ್ಲಿ 40 ಸಾವಿರ ಕೋಟಿ ರೂ. ಅವ್ಯವಹಾರ: ಯತ್ನಾಳ್​ ಆರೋಪ
ಬಿಎಸ್​ ಯಡಿಯೂರಪ್ಪ, ಬಸನಗೌಡ ಪಾಟೀಲ್​ ಯತ್ನಾಳ್​
Follow us on

ವಿಜಯಪುರ, ಡಿಸೆಂಬರ್​ 26: ಯಾರು ಯಾರು ಲೂಟಿ ಮಾಡಿ ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಎಂಬುದನ್ನು ಹೊರ ತೆಗೆಯುವೆ. ಕೊರೊನಾ ಮೊದಲನೇ ಅಲೆಯಲ್ಲಿ ಬಿಎಸ್​ ಯಡಿಯೂರಪ್ಪ (BS Yediyurappa) ಮುಖ್ಯಮಂತ್ರಿ ಇದ್ದರು. ಈ ವೇಳೆ ವೇಳೆ 40,000 ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ. ಪ್ರತಿಯೊಬ್ಬ ಕೊರೋನಾ ರೋಗಿಗೆ 8 ರಿಂದ 10 ಲಕ್ಷ ರೂಪಾಯಿ ಬಿಲ್ ಮಾಡಿದ್ದಾರೆ. ನಮ್ಮ ಸರ್ಕಾರವಿದ್ದರೇನು, ಕಳ್ಳರು ಕಳ್ಳರೇ ಅಲ್ಲವಾ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal)​ ಆರೋಪ ಮಾಡಿದರು.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕೊರೊನಾ ಸಂದರ್ಭದಲ್ಲಿ 45 ರೂಪಾಯಿ ಮಾಸ್ಕ್​ಗೆ 485 ರೂಪಾಯಿ ನಿಗದಿಪಡಿಸಿದರು. ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿದ್ರಿ. ಇದಕ್ಕೆ 10 ಸಾವಿರ ಬೆಡ್​​ ಬಾಡಿಗೆ ಪಡೆದಿದರು. ಆ ಹಣದಲ್ಲೇ ಬೆಡ್​​ಗಳನ್ನು ಖರೀದಿ ಮಾಡಿದ್ದರೆ ಉಳಿಯುತ್ತಿತ್ತು ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ? ಈ ವಿಚಾರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದಲ್ಲಿ ಹೇಳಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಆದಾಗ ಮಣಿಪಾಲ್ ಆಸ್ಪತ್ರೆಯಲ್ಲಿ 5 ಲಕ್ಷ 80 ಸಾವಿರ ತೆಗೆದುಕೊಂಡರು. ಇಷ್ಟು ಹಣವನ್ನು ಬಡವರಾದವರು ಎಲ್ಲಿಂದ ಕೊಡಬೇಕೆಂದು ವಿಧಾನಸೌಧದಲ್ಲಿ ಮಾತನಾಡಿದ್ದೆ ಎಂದು ತಿಳಿಸಿದರು.

ಆರೋಗ್ಯ ವಿಚಾರದಲ್ಲಿ ನಾನು ಯಾವುದೇ ರೀತಿಯ ಸರ್ಕಾರದಿಂದ ಹಣ ಇಲ್ಲಿವರೆಗೂ ಪಡೆದಿಲ್ಲ. ಶಾಸಕರಿಗೆ 2 ಲಕ್ಷ ರೂಪಾಯಿ ಸಂಬಳವಿದೆ. ನಾನು ಕಮಿಟಿ ಸಭೆಗೆ ಹೋದರೇ 65 ಸಾವಿರ ರೂಪಾಯಿ ಸಿಗುತ್ತದೆ. ತೆಗೆದುಕೊಂಡರೆ ನಾವು ಮನುಷ್ಯರಾ? ಎಂದರು.

ಇದನ್ನೂ ಓದಿ: ಬಿಎಸ್​ ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಬಸನಗೌಡ ಪಾಟೀಲ್​ ಯತ್ನಾಳ್​

ಇವರು ನನಗೆ ನೊಟೀಸ್ ಕೊಡಲಿ, ಪಕ್ಷದಿಂದ ಹೊರ ಹಾಕಲು ನೋಡಲಿ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ. ಸತ್ಯ ಹೇಳಿದರೆ ಎಲ್ಲರಿಗೂ ಭಯ ಹೀಗಾಗಿ ಭಯದಲ್ಲಿ ಇಡಬೇಕು. ಎಲ್ಲರೂ ಕಳ್ಳರಾದರೆ ರಾಜ್ಯ, ದೇಶವನ್ನು ಯಾರು ಉಳಿಸುತ್ತಾರೆ. ಪ್ರಧಾನಿ ಮೋದಿ ಅವರು ಇದ್ದಾರೆ ಎಂಬ ಕಾರಣಕ್ಕೆ ದೇಶ ಉಳಿದಿದೆ. ಈ ದೇಶದಲ್ಲಿ ಹಿಂದೆ ಬಹಳ ಹಗರಣಗಳಾಗಿವೆ. ಕಲ್ಲಿದ್ದಲು ಹಗರಣ 2ಜಿ ಹಗರಣ ಆಗಿವೆ. ಪ್ರಧಾನಿ ಮೋದಿ ಅವರ ಕಾಲದಲ್ಲಿ ಒಂದಾದರೂ ಹಗರಣ ನೋಡಿದ್ದೀರಾ ಎಂದು ಪ್ರಶ್ನಿಸಿದರು.

ಮೋದಿ ಅವರ ಬಗ್ಗೆ ಟೀಕೆ ಮಾಡುತ್ತಾರೆ. ಆದರೆ ಮೋದಿಯವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಹೇಳುವ ತಾಕತ್ತು ದೇಶದಲ್ಲಿ ಯಾರಿಗಾದರೂ ಇದೆಯಾ? *ಮೋದಿಯವರಿಗಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಇಂಥ ಬಿಎಸ್​ ಯಡಿಯೂರಪ್ಪಗಾಗಿ ನಾವು ಕೆಲಸ ಮಾಡಲ್ಲ ಎಂದು ಆಕ್ರೋಶ ಹೊರಹಾಕಿದರು.

ಯತ್ನಾಳರನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂಬ ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಎಂಥವರ ಬಗ್ಗೆ ಪ್ರಶ್ನೆ ಕೇಳುತ್ತೀರಿ. ಅವರೆಲ್ಲ ರಾಜ್ಯ ಉಪಾಧ್ಯಕ್ಷ ಹೇಗೆ ಆಗುತ್ತಾರೆ. ಇನ್ನು ಬಹಳ ವಿಷಯಗಳಿವೆ ನನ್ನನ್ನು ಉಚ್ಚಾಟನೆ ಮಾಡಿದ ಬಳಿಕ ಹೇಳುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ