AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮತಿ ಇಲ್ಲದೆ ನಡೆಯುವ ನಮಾಜ್​ ನಿಷೇಧಿಸಿ: ಸಿಎಂಗೆ ಶಾಸಕ ಯತ್ನಾಳ್​ ಪತ್ರ

ಆರೆಸ್ಸೆಸ್​ ಕಾರ್ಯಚಟುವಟಿಕೆಗಳಿಗೆ ರಾಜ್ಯದಲ್ಲಿ ನಿರ್ಬಂಧ ವಿಧಿಸಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕೌಂಟರ್​ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಯತ್ನಾಳ್​, ಅನುಮತಿ ಇಲ್ಲದೆ ರಸ್ತೆ, ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ನಮಾಜ್​ ನಿಷೇಧಿಸುವಂತೆ ಆಗ್ರಹಿಸಿದ್ದಾರೆ.

ಅನುಮತಿ ಇಲ್ಲದೆ ನಡೆಯುವ ನಮಾಜ್​ ನಿಷೇಧಿಸಿ: ಸಿಎಂಗೆ ಶಾಸಕ ಯತ್ನಾಳ್​ ಪತ್ರ
ಸಿಎಂಗೆ ಶಾಸಕ ಯತ್ನಾಳ್​ ಪತ್ರ
ಕಿರಣ್​ ಹನಿಯಡ್ಕ
| Edited By: |

Updated on:Oct 17, 2025 | 3:02 PM

Share

ಬೆಂಗಳೂರು, ಅಕ್ಟೋಬರ್​ 17: ಸರ್ಕಾರಿ ಸ್ಥಳಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂದು ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹೇಳಿತ್ತು. ಅಲ್ಲದೆ ಈ ಸಂಬಂಧ ರೆಗ್ಯುಲೇಷನ್ ಆಫ್ ಯೂಸ್ ಆಫ್ ಗವರ್ನಮೆಂಟ್ ಪ್ರಿಮಿಸಿಸ್ ಆ್ಯಂಡ್​ ಪ್ರಾಪರ್ಟೀಸ್ ಬಿಲ್ – 2025ರ ಡ್ರಾಫ್ಟ್ ಸಿದ್ಧವಾಗಿರುವ ಬಗ್ಗೆಯೂ ವರದಿಯಾಗಿದ್ದವು. ಈ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದ್ದು, ಸರಕಾರಿ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಡೆಯುವ ನಮಾಜ್​ಗೂ ಬ್ರೇಕ್​ ಹಾಕುವಂತೆ ಆಗ್ರಹಿಸಿದ್ದಾರೆ.

ಯತ್ನಾಳ್​ ಬರೆದ ಪತ್ರದಲ್ಲಿ ಏನಿದೆ?

ಅನುಮತಿಯಿಲ್ಲದೆ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸುತ್ತಿರುವ ದೃಶ್ಯಗಳು ಕಾಣಸಿಗುತ್ತಿವೆ.  ಇಂತಹ ಚಟುವಟಿಕೆಗಳಿಂದ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ಅಡಚಣೆ ಉಂಟಾಗುತ್ತಿದೆ. ಇದು ಭಾರತೀಯ ಸಂವಿಧಾನದ ಕಲಂ 19 ಮತ್ತು 21ರ ಅಡಿಯಲ್ಲಿ ಖಾತರಿಯಾದ ಮುಕ್ತ ಸಂಚಾರ ಹಾಗೂ ಭದ್ರತೆ ಎಂಬ ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿದೆ. ಹೀಗಾಗಿ ಸರ್ಕಾರದ ಕಚೇರಿಗಳು ಅಥವಾ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್‌ಗೆ ವಿಶೇಷ ಅನುಮತಿ ನೀಡಬಾರದು. ಇತರ ಸಂಸ್ಥೆಗಳ ಕಾರ್ಯಚಟುವಟಿಕೆ ನಿರ್ಬಂಧಿಸಿ ಇಂತಹ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ನೀಡುವುದು ಆಡಳಿತದ ಮೇಲಿನ ನಂಬಿಕೆಗೆ ಚ್ಯುತಿ ತರಬಹುದಾದ ಕಾರಣ ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಸರ್ಕಾರ ಆದೇಶಿಸಬೇಕು. ಅನುಮತಿಯಿಲ್ಲದೆ ರಸ್ತೆಗಳು, ಪಾದಚಾರಿ ಮಾರ್ಗಗಳು ಅಥವಾ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸಲು ಅವಕಾಶ ನೀಡದಂತೆ ಸೂಚಿಸಬೇಕು ಎಂದು ಯತ್ನಾಳ್​ ಆಗ್ರಹಿಸಿದ್ದಾರೆ.

ಇದನ್ನೂ ಓದಿ: RSSಗೆ ಅಂಕುಶಕ್ಕೆ ಹೊಸ ವಿಧೇಯಕದ ಡ್ರಾಫ್ಟ್​ ರೆಡಿ: ನಿಯಮ ಮೀರಿದ್ರೆ ಏನೆಲ್ಲ ಶಿಕ್ಷೆ?

ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಸಂಬಂಧಿತ ಸಂಚಾರ ನಿಯಮಾವಳಿಗಳ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳನ್ನು ಧಾರ್ಮಿಕ ಉದ್ದೇಶಗಳಿಗೆ ಅನಧಿಕೃತವಾಗಿ ಬಳಸುವುದನ್ನು ತಡೆಗಟ್ಟಲು ಸ್ಪಷ್ಟವಾದ SOPಯನ್ನು ಸರ್ಕಾರ ರೂಪಿಸಬೇಕು. ಆ ಮೂಲಕ ಧರ್ಮನಿರಪೇಕ್ಷತೆ, ಕಾನೂನಿನ ಸಮಾನತೆ ಮತ್ತು ಸಾರ್ವಜನಿಕ ಶಿಸ್ತಿನ ಬಗ್ಗೆ ತನ್ನ ಬದ್ಧತೆಯನ್ನು ದೃಢಪಡಿಸಬೇಕು ಎಂದು ಶಾಸಕ ಯತ್ನಾಳ್​ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:00 pm, Fri, 17 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ