‘ನ ದೈನ್ಯಂ, ನ ಪಲಾಯನಂ’: ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರು ಬೆನ್ನಲ್ಲೇ ಶಾಸಕ ಯತ್ನಾಳ್​ ಟ್ವೀಟ್​

| Updated By: ಗಂಗಾಧರ​ ಬ. ಸಾಬೋಜಿ

Updated on: Nov 17, 2023 | 9:44 PM

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕನ ನೇಮಕ ವಿಚಾರವಾಗಿ ಮುನಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕಾಂಗ ಪಕ್ಷದ ಸಭೆಗೂ ಹಾಜರಾಗದೆ ವಾಪಸಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರು ಬೆನ್ನಲ್ಲೇ ಟ್ವೀಟ್​ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ನ ದೈನ್ಯಂ, ನ ಪಲಾಯನಂ’ ಎಂದಿದ್ದಾರೆ.

‘ನ ದೈನ್ಯಂ, ನ ಪಲಾಯನಂ’: ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರು ಬೆನ್ನಲ್ಲೇ ಶಾಸಕ ಯತ್ನಾಳ್​ ಟ್ವೀಟ್​
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
Follow us on

ಬೆಂಗಳೂರು, ನವೆಂಬರ್ 17: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕನ ನೇಮಕ ವಿಚಾರವಾಗಿ ಮುನಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಶಾಸಕಾಂಗ ಪಕ್ಷದ ಸಭೆಗೂ ಹಾಜರಾಗದೆ ವಾಪಸಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರು ಬೆನ್ನಲ್ಲೇ ಟ್ವೀಟ್​ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ನ ದೈನ್ಯಂ, ನ ಪಲಾಯನಂ’ ಎಂದಿದ್ದಾರೆ.

ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಅವನ ಜೀವನವು ಅಂತ್ಯವಿಲ್ಲದ ಸವಾಲು, ಮತ್ತು ಆ ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಕೇವಲ ಸವಾಲುಗಳಾಗಿರುತ್ತವೆ ಎಂದು ತಮ್ಮ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್​

ಇಂದು ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಅವಕಾಶದ ಬಗ್ಗೆ ಯತ್ನಾಳ್ ಪ್ರಸ್ತಾಪಿಸಿದ್ದಾರೆ. ಈ ವೇಳೆ ಬಿಜೆಪಿ ಹೈಕಮಾಂಡ್ ತೀರ್ಮಾನವನ್ನು ವೀಕ್ಷಕರು ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್ ತೀರ್ಮಾನ ಒಪ್ಪದೇ ಸಭೆಯಿಂದ ಹೊರನಡೆದಿದ್ದಾರೆ.

ಇದನ್ನೂ ಓದಿ: ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ಸ್ಫೋಟ: ವಿಜಯೇಂದ್ರ ನನ್ನ ಮನೆಗೆ ಕಾಲಿಡುವುದೂ ಬೇಡ ಎಂದ ಬಿಜೆಪಿ ಶಾಸಕ

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕಾತಿಗೆ ಅಸಮಾಧಾನ ಹೊಂದಿದ್ದ ಶಾಸಕ ಯತ್ನಾಳ್, ವಿಪಕ್ಷ ನಾಯಕನ ವಿಚಾರದಲ್ಲಿ ವರಿಷ್ಠರ ನಿರ್ಧಾರ ಮತ್ತಷ್ಟು ಸಿಟ್ಟು ತರಿಸಿದೆ. ಹೈಕಮಾಂಡ್ ನಿರ್ಧಾರ ಒಪ್ಪದೇ ವೀಕ್ಷಕರ ಮುಂದೆ ಕಟು ಶಬ್ದಗಳ ಬಳಕೆ ಮಾಡಿ ಸಭೆಯಿಂದ ಹೊರನಡೆದಿದ್ದಾರೆ. ಯತ್ನಾಳ್ ಜೊತೆ ಸಭೆಯಿಂದ ಶಾಸಕ ರಮೇಶ್ ಜಾರಕಿಹೊಳಿ ಕೂಡ ಹೊರನಡೆದ್ದಾರೆ.

ಜೀ ಹುಜೂರ್ ಸಂಸ್ಕೃತಿ ನನ್ನದಲ್ಲ

ಪಂಚಮಸಾಲಿ ಸಮುದಾಯವನ್ನು ಯಾವಾಗಲೂ ನಿರ್ಲಕ್ಷ್ಯ ಮಾಡಿದ್ದಾರೆ. ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಪಕ್ಷದ ಎಲ್ಲ ಹುದ್ದೆಗಳಲ್ಲಿ ದಕ್ಷಿಣ ಕರ್ನಾಟಕದವರಿಗೆ ಆದ್ಯತೆ ನೀಡಿದ್ದಾರೆ. ಸರ್.. ಸರ್.. ಅಂತಾ ಬಾಲ ಹಿಡಿದುಕೊಂಡು ಅವರ ಮನೆಗೆ ಹೋಗ್ಬೇಕಾ? ಉತ್ತರ ಕರ್ನಾಟಕಕ್ಕೆ ಕೊಡಬೇಕು ಅಂತಾ ನಾವೆಲ್ಲರೂ ಒಂದಾಗಿದ್ದೇವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನೂ ಭೇಟಿ ಮಾಡಿದ್ದೇವೆ. ಸಂಜೆ ವಿಪಕ್ಷ ನಾಯಕನ ಆಯ್ಕೆ ಆದ ಬಳಿಕ ಪ್ರತಿಕ್ರಿಯೆ ಕೊಡುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.