ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್, ಗುತ್ತಿಗೆದಾರರಿಂದ ರಾಹುಲ್ ಗಾಂಧಿಗೆ ಮಾಹಿತಿ; ಬಸವರಾಜ ಬೊಮ್ಮಾಯಿ ಆರೋಪ

ಕಾಂಗ್ರೆಸ್ ಹೈಕಮಾಂಡ್ ಭ್ರಷ್ಟಾಚಾರ ಸಹಿಸುವುದಿಲ್ಲ ಅಂತ ರಾಹುಲ್ ಗಾಂಧಿ ಹೇಳಿದ್ದಾರೆ‌. ಆದರೆ, ಗುತ್ತಿಗೆದಾರರು ರಾಹುಲ್ ಗಾಂಧಿಗೆ ಟ್ವೀಟ್ ಮಾಡಿ, ನಿಮ್ಮ ಸರ್ಕಾರ 65% ಕಮಿಷನ್ ವಸೂಲಿ ಮಾಡುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ರಾಹುಲ್ ಗಾಂಧಿಯವರು ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹನೆ ಹೊಂದಿದ್ದರೆ, ತಕ್ಷಣ ಮಧ್ಯ ಪ್ರವೇಶ ಮಾಡಿ, 24 ಗಂಟೆಯಲ್ಲಿ ಗುತ್ತಿಗೆದಾರರ ಬಾಕಿ ಹಣ ಕೊಡಿಸಲಿ ಎಂದು ಬೊಮ್ಮಾಯಿ ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್, ಗುತ್ತಿಗೆದಾರರಿಂದ ರಾಹುಲ್ ಗಾಂಧಿಗೆ ಮಾಹಿತಿ; ಬಸವರಾಜ ಬೊಮ್ಮಾಯಿ ಆರೋಪ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: Ganapathi Sharma

Updated on: Aug 10, 2023 | 6:44 PM

ಬೆಂಗಳೂರು, ಆಗಸ್ಟ್ 10: ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳಲಾಗುತ್ತಿದೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ‌ ಇರುವವರಾದರೆ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ರಾಜ್ಯವು ಕಾಂಗ್ರೆಸ್​​​ನ (Congress) ಎಟಿಎಂ ಎಂಬುದು ಸಾಬೀತಾದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಆರ್​​​ಟಿ ನಗರದ ತಮ್ಮ ನಿವಾಸದಲ್ಲಿ ಗುರುವಾರ ತಮ್ಮನ್ನು ಭೇಟಿ ಮಾಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಮನವಿ ಸ್ವೀಕರಿಸಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ಭೇಟಿ ಮಾಡಿದ್ದಾರೆ. ಅವರು ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡಿಸಲು ಸರ್ಕಾರವನ್ನು ಆಗ್ರಹಿಸಲು ಮನವಿ‌ ಮಾಡಿದ್ದಾರೆ. ನಾನು ಸಿಎಂ ಇದ್ದಾಗ ಬಿಲ್ ಪಾವತಿಗೆ ಆನ್ಲೈನ್ ಮಾಡಿ ಸ್ಟ್ರೀಮ್ ಲೈನ್ ಮಾಡಿದ್ದೆ‌. ಹಿರಿತನದ ಆಧಾರದ ಮೇಲೆ ಹಣ ಬಿಡುಗಡೆ ಮಾಡಲಾಗುತ್ತಿತ್ತು.‌ ಇದರಿಂದ ಅವರ ಬಾಕಿ ಕೂಡ ಕಡಿಮೆ ಉಳಿದಿತ್ತು ಎಂದರು.

ಸಿಎಂ ಮೌನ, ಸಮ್ಮತಿ ಲಕ್ಷಣ; ಬೊಮ್ಮಾಯಿ

ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಿದ ಕೆಲಸದ ಬಿಲ್​ಗೆ ಈಗ ಲಂಚ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಹಿಂದಿನ ಸರ್ಕಾರದ ಅವಧಿಯ ಕಾಮಗಾರಿಗಳಿಗೆ ಲಂಚ ಕೇಳುತ್ತಿರುವುದು ಸ್ಪಷ್ಟವಾಗಿದೆ. ಮುಖ್ಯಮಂತ್ರಿಗಳು ಇದರ ಬಗ್ಗೆ ಮೌನ ವಹಿಸಿದ್ದಾರೆ. ಇದು ಅವರ ಸಮ್ಮತಿ ಎಂಬುದನ್ನು ಸೂಚಿಸುತ್ತದೆ ಎಂದು ಬೊಮ್ಮಾಯಿ ಟೀಕಿಸಿದರು.

ಸಿಎಂ ವರ್ಗಾವಣೆಗೆ ಹಣ ಪಡೆದಿಲ್ಲ ಎಂಬುದಾಗಿ ಹೇಳಿದ್ದಾರೆ‌. ಆದರೆ, ಅವರ ಕಚೇರಿಯಿಂದ ವರ್ಗಾವಣೆ ಆಗಿರುವ ಆದೇಶಗಳು ಯಾಕೆ ಬದಲಾವಣೆ ಆಗುತ್ತಿವೆ? ನಮ್ಮ ಅವಧಿಯಲ್ಲಿ ಕಾಮಗಾರಿಗಳಲ್ಲಿ ಪಾರದರ್ಶಕತೆ ತರಲು 3 ಜನರ ಸಮಿತಿ ರಚನೆ ಮಾಡಿದ್ದೆವು. ಆ ಆದೇಶಗಳನ್ನು ಈಗ ಪಾಲನೆ ಮಾಡುತ್ತಿಲ್ಲ ಎಂದು ಹೇಳಿದರು.

ರಾಹುಲ್ ಗಾಂಧಿ ಮಧ್ಯ ಪ್ರವೇಶಿಸಲಿ; ಬೊಮ್ಮಾಯಿ ಆಗ್ರಹ

ಕಾಂಗ್ರೆಸ್ ಹೈಕಮಾಂಡ್ ಭ್ರಷ್ಟಾಚಾರ ಸಹಿಸುವುದಿಲ್ಲ ಅಂತ ರಾಹುಲ್ ಗಾಂಧಿ ಹೇಳಿದ್ದಾರೆ‌. ಆದರೆ, ಗುತ್ತಿಗೆದಾರರು ರಾಹುಲ್ ಗಾಂಧಿಗೆ ಟ್ವೀಟ್ ಮಾಡಿ, ನಿಮ್ಮ ಸರ್ಕಾರ 65% ಕಮಿಷನ್ ವಸೂಲಿ ಮಾಡುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ರಾಹುಲ್ ಗಾಂಧಿಯವರು ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹನೆ ಹೊಂದಿದ್ದರೆ, ತಕ್ಷಣ ಮಧ್ಯ ಪ್ರವೇಶ ಮಾಡಿ, 24 ಗಂಟೆಯಲ್ಲಿ ಗುತ್ತಿಗೆದಾರರ ಬಾಕಿ ಹಣ ಕೊಡಿಸಲಿ ಎಂದು ಬೊಮ್ಮಾಯಿ ಆಗ್ರಹಿಸಿದರು.

ಯಾರು ಕಳಪೆ ಕಾಮಗಾರಿ ಮಾಡಿದ್ದಾರೆ ಅದರ ಬಗ್ಗೆ ತನಿಖೆ ನಡೆಸಲಿ, ಪ್ರಾಮಾಣಿಕವಾಗಿ ಕೆಲಸ ಮಾಡಿದವರ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಅಂತ ಕರಿಯೋದು ಸಾಬೀತಾದಂತೆ ಆಗುತ್ತದೆ‌. ರಾಹುಲ್ ಗಾಂಧಿ ಮಧ್ಯ ಪ್ರವೇಶ ಮಾಡಿ 24 ಗಂಟೆಯಲ್ಲಿ ಸಮಸ್ಯೆ ಬಗೆ ಹರಿಸಬೇಕು ಎಂದು ಅವರು ಆಗ್ರಹಿಸಿದರು.

ಗುತ್ತಿಗೆದಾರರು ಕೆಲಸ ನಿಲ್ಲಿಸಿದರೆ ಬ್ರ್ಯಾಂಡ್ ಬೆಂಗಳೂರು ಸ್ಥಗಿತ ಆಗುತ್ತದೆ. ಕಮಿಷನ್ ಎಷ್ಟು ಪಡೆಯಬೇಕು ಎನ್ನುವುದು ಸ್ಯಾಂಗ್ರಿಲಾ ಹೊಟೆಲ್ ನಲ್ಲಿ ಮಾತುಕತೆ ನಡೆಯುತ್ತಿದೆಯಂತೆ ಎಷ್ಟಕ್ಕೆ ಆಗುತ್ತದೆಯೋ ನೊಡೊಣ. ಲಂಚ ಪಡೆಯುವುದು ಕೊಡುವುದು ಎರಡೂ ಅಪರಾಧ. ಗುತ್ತಿಗೆದಾರರು ಎಷ್ಟು ಪರ್ಸೆಂಟೇಜಿಗೆ ಒಪ್ಪುತ್ತಾರೊ, ಭ್ರಷ್ಟಾಚಾರದ ಭಾಗವಾಗುತ್ತಾರೊ, ಇಲ್ಲವೋ ನೋಡೋಣ ಎಂದು ಹೇಳಿದರು.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಕುರಿತು‌ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಂಪಣ್ಣ ದೊಡ್ಡವರು. ಅವರೇ ಆರೋಪ ಮಾಡಿದ್ದರಲ್ಲಾ ಎಂದರು.

ಇದನ್ನೂ ಓದಿ: ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆಗೆ ಸಚಿವರ ಸೂಚನೆ, ಸಮಿತಿ ವರದಿ ನಂತರವೇ ನಿರ್ಧಾರ ಎಂದ ಡಿಕೆ ಶಿವಕುಮಾರ್

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಇದರ ಹಿಂದೆ ಯಾರಿದ್ದಾರೆ ಅಂತ ಗೊತ್ತು ಎಂದು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರ ಅವಧಿಯಲ್ಲಿ 40% ಆರೋಪದ ಡ್ರಾಫ್ಟ್ ಎಲ್ಲಿ ಆಗಿತ್ತು ಅಂತ ನಮಗೆ ಗೊತ್ತಿಲ್ವಾ? ಅದರ ಅನುಭವದ ಮೇಲೆ ಅವರು ಈಗ ಆರೊಪ‌ ಮಾಡುತ್ತಿದ್ದಾರೆ ಎಂದರು.

ಡಿಕೆ ಶಿವಕುಮಾರ್ ಸೂಪರ್ ಸಿಎಂ; ಬೊಮ್ಮಾಯಿ

ರಾಜ್ಯದಲ್ಲಿ ಡಿ.ಕೆ ಶಿವಕುಮಾರ್ ಸೂಪರ್ ಸಿಎಂ ಆಗಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ ತನ್ನ ಗಮನಕ್ಕೆ ತಂದು ಮಾಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಸೂಪರ್ ಸಿಎಂ ಎಂದರು. ರಾಜ್ಯದಲ್ಲಿ ಸಿಎಂ ಮತ್ತು ಸೂಪರ್ ಸಿಎಂ ಇಬ್ಬರು ಇದ್ದಾರೆ ಎಂದು ಹೇಳಿದರು.

ಫೇಕ್ ಸರ್ಕಾರ; ಬೊಮ್ಮಾಯಿ ಕಿಡಿ

ಸರ್ಕಾರದ ವಿರುದ್ದ ಬರುವ ಎಲ್ಲ ಪತ್ರಗಳೂ ಫೇಕ್ ಎಂದು ಸರ್ಕಾರ ಅಲ್ಲಗಳೆಯುತ್ತಿದೆ. ಅವರದೇ ಪಕ್ಷದ ಶಾಸಕರು ಬರೆದ ಪತ್ರವನ್ನೂ ಫೇಕ್ ಎನ್ನುತ್ತಾರೆ. ಈ ಸರ್ಕಾರವೇ ಫೇಕ್ ಎಂದು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ