ಭಾರತ್ ಜೋಡೋ ಯಾತ್ರೆಗೆ ಕೌಂಟರ್ ಕೊಡಲು ಬಿಜೆಪಿ ಪ್ಲಾನ್: ಮೈಗೊಡವಿ ನಿಂತ ಬೊಮ್ಮಾಯಿ-ಬಿಎಸ್​ವೈ

ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಅಲೆ ಎಬ್ಬಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕೌಂಟರ್​ ನೀಡಲು ಮುಂದಾಗಿದೆ.

ಭಾರತ್ ಜೋಡೋ ಯಾತ್ರೆಗೆ ಕೌಂಟರ್ ಕೊಡಲು ಬಿಜೆಪಿ ಪ್ಲಾನ್: ಮೈಗೊಡವಿ ನಿಂತ ಬೊಮ್ಮಾಯಿ-ಬಿಎಸ್​ವೈ
BSY And Bommai
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 07, 2022 | 7:09 PM

ಬೆಂಗಳೂರು: ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸಭೆ ಚುನಾವಣೆಗೆ (Karnataka Assembly Election 2023) ಇನ್ನೇನು ಆರೇಳು ತಿಂಗಳು ಬಾಕಿ ಇದ್ದು, ಆಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ಮೈಗೊಡವಿ ಅಖಾಡಕ್ಕಿಳಿದಿವೆ.

ಹೌದು….ಇದಕ್ಕೆ ಪೂರಕವೆಂಬಂತೆ ಈಗಾಗಲೇ ಕಾಂಗ್ರೆಸ್Congress), ಮುಂಬರುವ ವಿಧಾನಸಭೆ ಚುನಾವಣೆ ದೃಷ್ಠಿಯಲ್ಲಿಕೊಂಡು ಜೋಡೋ ಯಾತ್ರೆ ಆರಂಭಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಸೃಷ್ಟಿಸಲು ರಾಹುಲ್ ಗಾಂಧಿ ನೇತೃತ್ವದಲ್ಲಿ ಯಾತ್ರೆ ನಡೆಸಿದೆ. ಇನ್ನು ಇದಕ್ಕೆ ಕೌಂಟರ್ ಕೊಡಲು ಬಿಜೆಪಿ(BJP) ಸಹ ಮುಂದಾಗಿದೆ.

ರಾಜ್ಯದಲ್ಲಿ ಮತ್ತೆ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಆಡಳಿತರೂಡ ಬಿಜೆಪಿ, ಅ. 11 ರಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಾದ್ಯಂತ ಸಂಘಟನಾ ಪ್ರವಾಸ ನಡೆಸುವ ಮೂಲಕ ವಿಧಾನಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲಿದೆ.

ಇದನ್ನೂ ಓದಿ: ಬಿಜೆಪಿ-ಕಾಂಗ್ರೆಸ್ ಮುಕ್ತ ಕರ್ನಾಟಕ: ಹೊಸ ಪ್ಲಾನ್​ನೊಂದಿಗೆ ಕುಮಾರಸ್ವಾಮಿ-ಕೆಸಿಆರ್ ದೃಢ ಸಂಕಲ್ಪ

ಮೊದಲಿಗೆ ರಾಯಚೂರು ಕ್ಷೇತ್ರ, ರಾಯಚೂರು ಗ್ರಾಮಾಂತರದಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಆಯಾ ಕ್ಷೇತ್ರದ ಜಾತಿ ಪ್ರಮುಖರು ಮಠಾಧಿಪತಿಗಳು, ಧಾರ್ಮಿಕ ಕೇಂದ್ರಗಳಿಗೆ ಭೇಟಿ ಮಾಡಲಿದ್ದಾರೆ. ಗೆದ್ದ ಕ್ಷೇತ್ರಗಳ ಜೊತೆ ಸೋತ ಕ್ಷೇತ್ರಗಳಗೂ ಭೇಟಿ ನೀಡಲಿದ್ದು, ಜಾತಿ ಪ್ರಮುಖರ ಜೊತೆ ವಿಶೇಷ ಸಭೆ ಸಹ ನಡೆಸಲಿದ್ದಾರೆ,

ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೀದರ್, ಯಾದಗಿರಿ, ಕಲಬುರುಗಿ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಹುಬ್ಬಳ್ಳಿ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ದಾವಣಗೆರೆ, ಚಿತ್ರದುರ್ಗಾ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ . ವಿಜಯಪುರ, ಬಾಗಲಕೋಟೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಸಂಘಟನಾ ಪ್ರವಾಸ ನಡೆಸಿ ಎರಡು ಇಲ್ಲವೇ ಮೂರು ಜಿಲ್ಲೆಗಳಿಗೆ ಒಂದರಂತೆ ಬೃಹತ್ ಸಮಾವೇಶಗಳನ್ನು ನಡೆಸಲು ಉದ್ದೇಶಿಸಿದೆ.

ನಾಳೆ(ಅ.07) ನಡೆಯಲಿರುವ ಪಕ್ಷದ ಕಾರ್ಯಕಾರಿಣಿ ಸಭೆಯ ನಂತರ ರಾಜ್ಯ ಪ್ರವಾಸದ ಅಧಿಕೃತ ವೇಳೆ ಪಟ್ಟಿ ಅಂತಿಮಗೊಳ್ಳಲಿದೆ. ಹಾಲಿ ನಡೆಸಲುದ್ದೇಶಿಸಿದ್ದ ಸಮಾವೇಶಗಳನ್ನು ಬೃಹತ್ ಸಮಾವೇಶಗಳನ್ನಾಗಿ ಪರಿವರ್ತಿಸಲಿದ್ದು, ಪಾದಯಾತ್ರೆ ಉದ್ದಕ್ಕೂ ಬಿಜೆಪಿ ಅಲೆ ಎಬ್ಬಿಸುವ ಸಂಕಲ್ಪ ತೊಟ್ಟಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹೆಚ್ಚು ಹೆಚ್ಚು ಪ್ರಚಾರಕ್ಕೆ ಬಳಿಸಿಕೊಳ್ಳಲು ತೀರ್ಮಾನಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Thu, 6 October 22