AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ, ನಾನು ಗ್ಯಾರಂಟಿ ಕೊಡ್ತೇನೆ-ಬಸವರಾಜ್​ ಬೊಮ್ಮಾಯಿ

ಹಾವೇರಿ(Haveri)ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ ‘ರಾಜ್ಯದಲ್ಲಿ ಮುಂದೆ ಬಿಜೆಪಿ ಸರ್ಕಾರವೇ ಬರಲಿದೆ. ಸಿಎಂ ಸಿದ್ದರಾಮಯ್ಯ ರೈತರನ್ನು ಕಡೆಗಣನೆ ಮಾಡಿದ್ದಾರೆ. ಈ ಹಿನ್ನಲೆ ರಾಜ್ಯದ ರೈತರ ಪಾಲಿಗೆ ಈ ಸರ್ಕಾರ ಸತ್ತುಹೋಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಾವೇರಿ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ, ನಾನು ಗ್ಯಾರಂಟಿ ಕೊಡ್ತೇನೆ-ಬಸವರಾಜ್​ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Feb 01, 2024 | 3:39 PM

Share

ಹಾವೇರಿ, ಫೆ.01: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗುತ್ತೆ, ನಾನು ಗ್ಯಾರಂಟಿ ಕೊಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ. ಹಾವೇರಿ(Haveri)ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ರಾಜ್ಯದಲ್ಲಿ ಮುಂದೆ ಬಿಜೆಪಿ ಸರ್ಕಾರವೇ ಬರಲಿದೆ. ಸಿಎಂ ಸಿದ್ದರಾಮಯ್ಯ ರೈತರನ್ನು ಕಡೆಗಣನೆ ಮಾಡಿದ್ದಾರೆ. ಈ ಹಿನ್ನಲೆ ರಾಜ್ಯದ ರೈತರ ಪಾಲಿಗೆ ಈ ಸರ್ಕಾರ ಸತ್ತುಹೋಗಿದೆ. ಇನ್ನು 200 ಯೂನಿಟ್ ವಿದ್ಯುತ್ ಯಾರಿಗೆ ಪ್ರೀ ಕೊಟ್ಟಿದ್ದೀರಿ, ಒಬ್ಬರ ಹೆಸರು ಹೇಳಲಿ ಸಾಕು. ಗೃಹಲಕ್ಷ್ಮೀ ಯೋಜನೆ ಒಂದು ತಿಂಗಳು ಬಂದರೆ, ಇನ್ನೊಂದು ತಿಂಗಳು ಬರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಪೂರ್ಣವಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ- ಬಿಸಿ ಪಾಟೀಲ್

ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಬಿಸಿ ಪಾಟೀಲ್ ‘ಈಗಾಗಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಗಾಳಿ ಬಿಸಿದೆ. ಕಳೆದ ಚುನಾವಣೆಯಲ್ಲಿ ಯಾವುದೋ ತಪ್ಪಿನಿಂದಾಗಿ ನಮಗೆ ಸೋಲಾಗಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೊಡಲು ವಿಫಲವಾಗಿದೆ. ರಾಜ್ಯದಲ್ಲಿ ಬರಗಾಲ ಇದ್ದು, ರೈತರಿಗೆ ಕರೆಂಟ್ ಕೊಡುತ್ತಿಲ್ಲ. ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಯಲ್ಲಿ ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ. ಸಂಪೂರ್ಣವಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ:ಬಿಡುಗಡೆ ಮಾಡಿದ ಬರ ಪರಿಹಾರವು ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತಿದೆ: ಬಸವರಾಜ ಬೊಮ್ಮಾಯಿ

ಇನ್ನು ಹಾವೇರಿಯ ಶಿವಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅರವಿಂದ ಬೆಲ್ಲದ, ಮಾಜಿ‌ ಸಚಿವ ಬಿ.ಸಿ.ಪಾಟೀಲ್​ ಸೇರಿದಂತೆ ಮಾಜಿ ಶಾಸಕರು ಹಾಗೂ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 2:37 pm, Thu, 1 February 24