ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yadiyurappa) ಅವರು ರಾಜಕೀಯ ನಿವೃತ್ತಿ ಎಂದು ಹೇಳಿಲ್ಲ ಎಂದು ದೆಹಲಿಯಲ್ಲಿ (Delhi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೇಳಿದ್ದಾರೆ. ಯಡಿಯೂರಪ್ಪನವರು ನಿರಂತರವಾಗಿ ಹೋರಾಟದಿಂದ ಬಂದವರು. ಬೆಂಗಳೂರಿಗೆ ಹೋದ ಮೇಲೆ ಯಡಿಯೂರಪ್ಪನವರ ಜೊತೆ ಮಾತಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪ ಪಾತ್ರ ಇದ್ದೇ ಇರುತ್ತೆ. ಅವರ ಬಲ ಮಾರ್ಗದರ್ಶನ ಇದ್ದೇ ಇರುತ್ತದೆ. ತನ್ನದೇ ಆದ ಮಹತ್ವ ಇರುತ್ತೆ ಎಂದು ಹೇಳಿದರು.
ಶಿಕಾರಿಪುರ ಕ್ಷೇತ್ರ ಬಿಟ್ಟು ಕೊಡುವ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಾಯಕರು ಚರ್ಚೆ ಮಾಡುತ್ತಿದ್ದಾರೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಂತೂರು ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.
ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೋಜನಕೂಟ ಆಯೋಜಿಸಿದ್ದಾರೆ. ಭೋಜನಕೂಟದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ಬಂದಿದ್ದೇನೆ. ನಾಳೆ ಬೆಳಗ್ಗೆ ಬೆಂಗಳೂರಿಗೆ ಹೊರಡುವೆ. ಜುಲೈ 24ರಂದು ಮತ್ತೆ ದೆಹಲಿಗೆ ಬರುತ್ತಿದ್ದೇನೆ. ಬೇರೆ ಮಂತ್ರಿಗಳ ಭೇಟಿ ಉದ್ದೇಶ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರು.
ಹಾಗೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರನ್ನು ಸಿಎಂ ಬೊಮ್ಮಾಯಿ ಅವರು ದೆಹಲಿಯ ಒಡಿಶಾ ಭವನದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
Published On - 8:16 pm, Fri, 22 July 22