ಇಂದು ಸಿಎಂ 2 ಪ್ರತ್ಯೇಕ ಸುದ್ದಿಗೋಷ್ಠಿ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬೊಮ್ಮಾಯಿ ನಡೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಎರಡು 2 ಖಾಸಗಿ ಹೋಟೆಲ್‌ಗಳಲ್ಲಿ ಪ್ರತ್ಯೇಕ ಸುದ್ದಿಗೋಷ್ಠಿ ಕರೆದಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಇಂದು ಸಿಎಂ 2 ಪ್ರತ್ಯೇಕ ಸುದ್ದಿಗೋಷ್ಠಿ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬೊಮ್ಮಾಯಿ ನಡೆ
ಬಸವರಾಜ ಬೊಮ್ಮಾಯಿ
Follow us
ರಮೇಶ್ ಬಿ. ಜವಳಗೇರಾ
|

Updated on: Apr 05, 2023 | 8:56 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ದಿನಗಣನೆ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಪ್ರಚಾರದ ಕಾವು ರಂಗು ಪಡೆದುಕೊಂಡಿದೆ. ಮತದಾರರ ಮನಗೆಲ್ಲಲು ಮೂರು ರಾಜಕೀಯ ಪಕ್ಷಗಳಿಂದ ತಂತ್ರ ಪ್ರತಿತಂತ್ರಗಳೇ ನಡೆಯುತ್ತಿವೆ. ಇನ್ನು ಚುನಾವಣೆ ಹೊತ್ತಲ್ಲೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಹೌದು…ಅಭಿನಯ ಚಕ್ರವರ್ತಿ ಸುದೀಪ್ ಇಂದು(ಏಪ್ರಿಲ್ 05) ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಇದರ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಭ್ಯರ್ಥಿಗಳ ಆಯ್ಕೆ ಸಭೆ ಮಧ್ಯೆಯೇ ಬೆಂಗಳೂರಿನ ಎರಡು ಖಾಸಗಿ ಹೋಟೆಲ್‌ಗಳಲ್ಲಿ ಪ್ರತ್ಯೇಕ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Kichcha Sudeep: ಸುದೀಪ್ ಮಹತ್ವದ ಸುದ್ದಿಗೋಷ್ಠಿ; ರಾಜಕೀಯದಲ್ಲಿ ಧೂಳೆಬ್ಬಿಸ್ತಾರಾ ಕಿಚ್ಚ?

ಹೌದು.., ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದೂ ಸಹ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಇದರ ನಡುವೆಯೇ   ಇಂದು (ಏಪ್ರಿಲ್ 05) ಮಧ್ಯಾಹ್ನ 1.30 ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಇದಾದ ಒಂದು ಗಂಟೆ ನಂತರ ಅಂದರೆ ಮಧ್ಯಾಹ್ನ 2.30ಕ್ಕೆ ಸಿಎಂ ಬೊಮ್ಮಾಯಿ ಮತ್ತೊಂದು ಖಾಸಗಿ ಹೋಟೆಲ್​ನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೊಮ್ಮಾಯಿ ಅವರ ಮೊದಲ ಸುದ್ದಿಗೋಷ್ಠಿಯಲ್ಲಿ ನಟ ಸುದೀಪ್ ಕೂಡ ವೇದಿಕೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಈ ವೇಳೆ ತಮ್ಮ ರಾಜಕೀಯ ಎಂಟ್ರಿ ಬಗ್ಗೆಯೂ ಸುದೀಪ್ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮಧ್ಯಾಹ್ನ 2.30ಕ್ಕೆ ನಡೆಯಲಿರುವ ಎರಡನೇ ಸುದ್ದಿಗೋಷ್ಠಿಯಲ್ಲಿ ಸುದೀಪ್​, ಬಿಜೆಪಿಯ ಹಾಡು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಬೊಮ್ಮಾಯಿ ತಮ್ಮ ಸುದ್ದಿಗೋಷ್ಠಿಯ ವಿಷಯವನ್ನು ಬಹಿರಂಗಪಡಿಸದೇ ನಿಗೂಢವಾಗಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರ ಇಂದಿನ ಎರಡು ಸುದ್ದಿಗೋಷ್ಠಿಗಳು ರಾಜ್ಯ ರಾಜಕಾರಣದಲ್ಲಿ ಮಹತ್ವದ ಪಡೆದುಕೊಂಡಿದೆ.

ಹೀಗಾಗಿ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಏನೆಲ್ಲ ಮಾತನಾಡಲಿದ್ದಾರೆ ಎನ್ನುವ ಕ್ಷಣ ಕ್ಷಣದ ಮಾಹಿತಿಗಾಗಿ https://tv9kannada.com/ ನೋಡುತ್ತಿರಿ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ