Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ನೀರು ನಿಲ್ಲಿಸಿ ಆಮೇಲೆ ಕೋರ್ಟ್​ನಲ್ಲಿ ವಾದ ಮಾಡಿ: ರಾಜ್ಯ ಸರ್ಕಾರಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾವು ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿಲ್ಲ, ಸರ್ಕಾರವೇ ಸಿಲುಕಿಸಿದೆ. ಕುಡಿಯುವ ನೀರಿನ ವಿಚಾರದಲ್ಲಿ ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದರು. ಅಲ್ಲದೆ, ಮೊದಲು ನೀರು ನಿಲ್ಲಿಸಿ ಆಮೇಲೆ ಕೋರ್ಟ್​​ನಲ್ಲಿ ವಾದ ಮಾಡಿ ಎಂದು ಹೇಳಿದರು.

ಮೊದಲು ನೀರು ನಿಲ್ಲಿಸಿ ಆಮೇಲೆ ಕೋರ್ಟ್​ನಲ್ಲಿ ವಾದ ಮಾಡಿ: ರಾಜ್ಯ ಸರ್ಕಾರಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Follow us
Sunil MH
| Updated By: Rakesh Nayak Manchi

Updated on:Sep 01, 2023 | 10:39 PM

ಬೆಂಗಳೂರು, ಸೆ.1: ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ಮೊದಲು ನಿಲ್ಲಿಸಿ. ನಂತರ ಕೋರ್ಟ್​​ನಲ್ಲಿ ವಾದ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವು ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿಲ್ಲ, ಕಾಂಗ್ರೆಸ್ ಸರ್ಕಾರವೇ ಸಿಲುಕಿಸಿದೆ. ಕುಡಿಯುವ ನೀರಿನ ವಿಚಾರದಲ್ಲಿ ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದರು.

ಕಾವೇರಿ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಮಾಡಿ ನೀರು ಬಿಡಿಸುತ್ತಾ ಇದ್ದರು. ಯಾಕೆ ನಮ್ಮವರು ಈ ವಿಷಯವನ್ನು ಸಮಗ್ರವಾಗಿ ವಾದ ಮಾಡುತ್ತಿಲ್ಲ ಅಂತ ಗೊತ್ತಾಗುತ್ತಿಲ್ಲ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಷ್ಟು ಮಳೆ ಬಿದ್ದಿದೆ? ಇದನ್ನು ಮನವರಿಕೆ ಮಾಡಿಕೊಂಡು ನಿರ್ಧಾರ ತೆಗೆದುಕೊಳ್ಳಬೇಕು. ನೋಡಿ ವಾದ ಮಾಡುವಂತದ್ದು ಅನಿವಾರ್ಯ ಎಂದರು.

ಇದನ್ನೂ ಓದಿ: ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್; ‘ಆ’ ವಿಚಾರ ಮರೆತ್ರೆ ಒಳ್ಳೆಯದು ಎಂದ ಗೃಹ ಸಚಿವ ಜಿ.ಪರಮೇಶ್ವರ್, ಇಲ್ಲಿದೆ ವಿಡಿಯೋ

ಸೆಪ್ಟೆಂಬರ್ 6 ರಂದು ಕೋರ್ಟ್ ಇದೆ. ಆದರೆ ನೀರು ಹರಿತಾನೆ ಇದೆ. ಹೀಗಾಗಿ, ಮೊದಲು ನೀರು ನಿಲ್ಲಿಸಿ ಆಮೇಲೆ ವಾದ ಮಾಡಿ. ನಮ್ಮ ರೈತರ ಹಿತಾಸಕ್ತಿ ಕಾಪಾಡುವುದು ಮುಖ್ಯ. ನೀವು ತಮಿಳುನಾಡು ಎಷ್ಟು ನೀರು ಬಳಕೆ ಮಾಡಿದೆ ಅಂತ ವಾದ ಮಾಡಲು ತಯಾರಿಲ್ಲ ಎಂದರು.

ಕುಮಾರಸ್ವಾಮಿ ಲವಲವಿಕೆಯಿಂದಿದ್ದಾರೆ: ಬೊಮ್ಮಾಯಿ

ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಸಿದಿ ನಂತರ ಮಾತನಾಡಿದ ಬೊಮ್ಮಾಯಿ, ಮೊನ್ನೆಯೇ ನಾನು ಆರೋಗ್ಯ ವಿಚಾರಿಸಿದ್ದೇನೆ. ಅವರು ಈಗ ಲವಲವಿಕೆಯಿಂದ ಇದ್ದಾರೆ. ಹಾಗಾಗಿ ಬೇಗ ಗುಣಮುಖ ಆಗಲಿ ಅಂತ ಆಶಿಸುತ್ತೇನೆ ಎಂದರು.

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದಿಂದ ಅನರ್ಹ ವಿಚಾರವಾಗಿ ಮಾತನಾಡಿದ ಬೊಮ್ಮಾಯಿ, ನಾನು ಮನೆಯಲ್ಲಿದ್ದೆ. ಸಂಪೂರ್ಣ ಮಾಹಿತಿ ಇಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:37 pm, Fri, 1 September 23