AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ

ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದರು ತಿಳಿಸಿದ್ದಾರೆ.

ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ
TV9 Web
| Edited By: |

Updated on:May 03, 2022 | 10:46 AM

Share

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರು ಇಂದು (ಮೇ 03) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದರು. ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ ಅಭಿಪ್ರಾಯದ ಮೇಲೆ ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.

ಬಿಜೆಪಿಗೆ ಒಂದು ವರ್ಚಸ್ಸು ಬರುತ್ತದೆ- ಆರ್ ಅಶೋಕ್: ಹೊರಟ್ಟಿ ಸೇರ್ಪಡೆ ಬಗ್ಗೆ ಮಾತನಾಡಿದ ಸಚಿವ ಆರ್ ಅಶೋಕ್, 7 ಬಾರಿ ಎಂಎಲ್ಎ ಆಗಿ ಹಲವು ಹುದ್ದೆಗಳನ್ನ ನಿಭಾಯಿಸಿದ್ದಾರೆ. ಹೊರಟ್ಟಿ ಸರಳ ಸಜ್ಜನ ರಾಜಕಾರಣಿ. ಇವರಿಂದ ಬಿಜೆಪಿಗೆ ಒಂದು ವರ್ಚಸ್ಸು ಬರುತ್ತದೆ. ಎಸ್ಎಂ ಕೃಷ್ಣಾರಂತವರು ಬಂದಿದ್ದಾರೆ. ಇವತ್ತು ಮತ್ತೊಬ್ಬ ಮುತ್ಸದ್ದಿ ಸೇರಿದ್ದಾರೆ. ಮುಂದಿನ ಚುನಾವಣೆಗೆ ಇದು ದಿಕ್ಸೂಚಿ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಬೇಕು ಅಂತಾ ಜನ ಪರ್ವ ಶುರುಮಾಡಿದ್ದಾರೆ ಎಂದರು.

ಇದೇ ತಿಂಗಳು 11ಕ್ಕೆ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಅರಗ ಜ್ಞಾನೆಂದ್ರ, ಆರ್ ಅಶೋಕ್, ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ

Basava Jayanthi: ನಿಮ್ಮ ಟೈಮ್​ಲೈನ್; ‘ಆನೀ ಬಿಜ್ಜಳಂಗೆ ಅಂಜುವೆನೆ?’ ಪ್ರಭುತ್ವವನ್ನು ಎದುರು ಹಾಕಿಕೊಂಡ ಬಸವಣ್ಣ

‘ಮಾರ್ಟಿನ್’ ಚಿತ್ರದ ಡೈಲಾಗ್​ ಹೊಡೆದ ಧ್ರುವ ಸರ್ಜಾ; ಇಲ್ಲಿದೆ ವಿಡಿಯೋ

Published On - 10:31 am, Tue, 3 May 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ