ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರು ಇಂದು (ಮೇ 03) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದರು. ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ ಅಭಿಪ್ರಾಯದ ಮೇಲೆ ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.
ಬಿಜೆಪಿಗೆ ಒಂದು ವರ್ಚಸ್ಸು ಬರುತ್ತದೆ- ಆರ್ ಅಶೋಕ್:
ಹೊರಟ್ಟಿ ಸೇರ್ಪಡೆ ಬಗ್ಗೆ ಮಾತನಾಡಿದ ಸಚಿವ ಆರ್ ಅಶೋಕ್, 7 ಬಾರಿ ಎಂಎಲ್ಎ ಆಗಿ ಹಲವು ಹುದ್ದೆಗಳನ್ನ ನಿಭಾಯಿಸಿದ್ದಾರೆ. ಹೊರಟ್ಟಿ ಸರಳ ಸಜ್ಜನ ರಾಜಕಾರಣಿ. ಇವರಿಂದ ಬಿಜೆಪಿಗೆ ಒಂದು ವರ್ಚಸ್ಸು ಬರುತ್ತದೆ. ಎಸ್ಎಂ ಕೃಷ್ಣಾರಂತವರು ಬಂದಿದ್ದಾರೆ. ಇವತ್ತು ಮತ್ತೊಬ್ಬ ಮುತ್ಸದ್ದಿ ಸೇರಿದ್ದಾರೆ. ಮುಂದಿನ ಚುನಾವಣೆಗೆ ಇದು ದಿಕ್ಸೂಚಿ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಬೇಕು ಅಂತಾ ಜನ ಪರ್ವ ಶುರುಮಾಡಿದ್ದಾರೆ ಎಂದರು.
ಇದೇ ತಿಂಗಳು 11ಕ್ಕೆ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಅರಗ ಜ್ಞಾನೆಂದ್ರ, ಆರ್ ಅಶೋಕ್, ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ
Basava Jayanthi: ನಿಮ್ಮ ಟೈಮ್ಲೈನ್; ‘ಆನೀ ಬಿಜ್ಜಳಂಗೆ ಅಂಜುವೆನೆ?’ ಪ್ರಭುತ್ವವನ್ನು ಎದುರು ಹಾಕಿಕೊಂಡ ಬಸವಣ್ಣ
Published On - 10:31 am, Tue, 3 May 22