ಪರಿಷತ್ ಹಂಗಾಮಿ ಸಭಾಪತಿ ನೇಮಕವಾದ ಬಳಿಕ ಹೊರಟ್ಟಿ ರಾಜಿನಾಮೆ ಅಂಗಿಕಾರ; ಹಂಗಾಮಿ ಸಭಾಪತಿಯಾಗಿ ಬಿಜೆಪಿ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ನೇಮಕಗೊಳ್ಳುವ ಸಾಧ್ಯತೆ

ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ವಿಧಾನ ಪರಿಷತ್ ಹಂಗಾಮಿ ಸಭಾಪತಿ ನೇಮಕವಾದ ಬಳಿಕ ಬಸವರಾಜ ಹೊರಟ್ಟಿ ಅವರ ರಾಜಿನಾಮೆ ಅಂಗೀಕಾರವಾಗಲಿದೆ.

ಪರಿಷತ್ ಹಂಗಾಮಿ ಸಭಾಪತಿ ನೇಮಕವಾದ ಬಳಿಕ ಹೊರಟ್ಟಿ ರಾಜಿನಾಮೆ ಅಂಗಿಕಾರ; ಹಂಗಾಮಿ ಸಭಾಪತಿಯಾಗಿ ಬಿಜೆಪಿ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ನೇಮಕಗೊಳ್ಳುವ ಸಾಧ್ಯತೆ
ಬಸವರಾಜ ಹೊರಟ್ಟಿ
Follow us
TV9 Web
| Updated By: ವಿವೇಕ ಬಿರಾದಾರ

Updated on: May 17, 2022 | 10:08 AM

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ವಿಧಾನ ಪರಿಷತ್ ಹಂಗಾಮಿ ಸಭಾಪತಿ ನೇಮಕವಾದ ಬಳಿಕ ಬಸವರಾಜ ಹೊರಟ್ಟಿ ಅವರ ರಾಜಿನಾಮೆ ಅಂಗೀಕಾರವಾಗಲಿದೆ. ಪರಿಷತ್ ಹಂಗಾಮಿ ಸಭಾಪತಿಯಾಗಿ ಬಿಜೆಪಿ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ನೇಮಕಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪರಿಷತ್ ಹಂಗಾಮಿ ಸಭಾಪತಿ ನೇಮಕ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ನಿನ್ನೆ ಸಂಜೆ ರಾಜ್ಯಪಾಲರ ಜೊತೆ ಮಾತುಕತೆ ನಡೆಸಿದ್ದಾರೆ.

ಮಲ್ಕಾಪುರೆ ಅವರ ನೇಮಕಕ್ಕೆ ಸಿಎಂ ಬೊಮ್ಮಾಯಿ ಒಲವು ಹೊಂದಿದ್ದಾರೆ. ಇನ್ನು ಹಂಗಾಮಿ ಸಭಾಪತಿ ನೇಮಕ ಸಂಬಂಧ ಕೆಲವೇ ಹೊತ್ತಿನಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಶಿಫಾರಸು ಕಳುಹಿಸಲಿದ್ದಾರೆ. ಹಂಗಾಮಿ ಸಭಾಪತಿ ನೇಮಕದ ಬಳಿಕ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಅಂಗೀಕಾರವಾಗಲಿದೆ. ಬಳಿಕ ಇಂದು ಸಂಜೆ ಅಥವಾ ನಾಳೆ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಇನ್ನು ಜೆಡಿಎಸ್ ಜನತಾ ಜಲಧಾರೆ ಮಾಡಿ, ಈ ಬಾರಿ ಜೆಡಿಎಸ್ ಗೆ ಪೂರ್ಣ ಬಹುಮತ ನೀಡಿದರೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದಾಗಿ ಜೆಡಿಎಸ್ ಘೋಷಿಸಿಕೊಂಡಿದೆ. ಈ ಸಂಬಂಧ ತಮ್ಮ ಪಕ್ಷದ ಶಕ್ತಿ ವೃದ್ದಿಸಿಕೊಳ್ಳಲು ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಅಷ್ಟೆ ಅಲ್ಲದೇ ಕರ್ನಾಟಕದ ಎಲ್ಲ ವಿಧಾಸಭಾ ಕ್ಷೇತ್ರಗಳ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು, ಈ ಮೂಲಕ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲು ಭೀಷ್ಮ ಪ್ರತಿಜ್ಞೆ ಮಾಡಿದೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಇಂದು ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ; ನಗರದಲ್ಲಿ ಟ್ರಾಫಿಕ್ ಜಾಮ್ ಸಾಧ್ಯತೆ
Image
P Chidambaram: ಕಾಂಗ್ರೆಸ್ ನಾಯಕ ಪಿ ಚಿದಂಬರಂ ನಿವಾಸಗಳ ಮೇಲೆ ಸಿಬಿಐ ದಾಳಿ
Image
BSF Recruitment 2022: ಗಡಿ ಭದ್ರತಾ ಪಡೆಯಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪ್ರಿಯಕರನಿಗೆ ನೀಡಿದ ಆರೋಪ; ಮಗಳ ವಿರುದ್ಧ ದೂರು ನೀಡಿದ ತಾಯಿ

ಬಸವರಾಜ ಹೊರಟ್ಟಿ ಅವರು ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದು ಜೆಡಿಎಸ್ ಪಕ್ಷಕ್ಕೆ ಆಘಾತ ತಂದಿದೆ. ಏಕೆಂದರೆ ಜನತಾದಳ ದಿಂದ 2000ನೇ ಇಸವಿಯಲ್ಲಿ ಜೆಡಿಎಸ್ ಸೇರ್ಪಡೆಗೊಂಡ ನಂತರ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷಕ್ಕೆ ಬಲಬಂದಂತಾಗಿತ್ತು. ಆದರೆ ಈಗ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದು, ಜೆಡಿಎಸ್ ಪಕ್ಷಕ್ಕೆ ಉತ್ತರ ಕರ್ನಾಟಕದ ಭಾಗದಲ್ಲಿ ದೊಡ್ಡ ಹೊಡೆತ ಬೀಳುವ ಸಾಧ್ಯತೆಗಳಿವೆ.ಇನ್ನು ಬಿಜೆಪಿ ಸೇರ್ಪಡೆ ಕುರಿತು ಮಾತನಾಡಿರುವ ಬಸವರಾಜ ಹೊರಟ್ಟಿ ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ. ಆದರೆ ಅಮಿತ್ ಶಾ ಅವರ ಜೊತೆ ಏನೂ ವಿಶೇಷ ಚರ್ಚೆ ಮಾಡಿಲ್ಲ. ಯಾವುದೇ ಸ್ಥಾನಮಾನದ ಬಗ್ಗೆಯೂ ಚರ್ಚೆಯಾಗಿಲ್ಲ ಎಂದು ಹೇಳಿದರು.

ಅಲ್ಲದೇ 2000ನೇ ಇಸವಿಯಲ್ಲಿ ನಾನು ದೇವೇಗೌಡರ ಜೊತೆ ಸೇರಿಕೊಂಡೆ. ದೇವೇಗೌಡರ ಮಾರ್ಗದರ್ಶನದಲ್ಲಿ ಬೆಳೆದೆ. ಹೆಚ್​ಡಿ ಕುಮಾರಸ್ವಾಮಿ ಅವರೂ ಅಧಿಕಾರಕ್ಕೆ ಬರಲು ಸಹಕಾರ ನೀಡಿದರು. ದೇವೇಗೌಡರ ಕುಟುಂಬದ ಸದಸ್ಯನ ರೀತಿ ನನ್ನನ್ನು ನೋಡಿಕೊಂಡರು. ಮುಂದೆಯೂ ಅವರ ಮಾರ್ಗದರ್ಶನ ನನಗೆ ಸಿಗಲಿದೆ ಅಂತ ಭಾವಿಸಿದ್ದೇನೆ ಎಂದು ಹೇಳಿದ್ದಾರೆ.

ಪಕ್ಷ ಬದಲಾವಣೆ ಮಾಡಿ ಎಂದು ಕೆಲವರು ಒತ್ತಡ ಹಾಕಿದರು. ಆಕಸ್ಮಿಕವಾಗಿ ಕೆಲ ಬದಲಾವಣೆ ಆಗುತ್ತಿದೆ. ಅನಿವಾರ್ಯವಾಗಿ ಬಿಜೆಪಿಗೆ ಹೋಗುತ್ತಿದ್ದೇನೆ. ನಮ್ಮ ರಾಷ್ಟ್ರದಲ್ಲಿ ಯಾವ ಪಕ್ಷದಲ್ಲಿ ಜಾತಿ ಇಲ್ಲ ಹೇಳಿ? ಎಲ್ಲಾ ಪಕ್ಷಗಳಲ್ಲೂ ಜಾತಿಯನ್ನು ಮುಂದೆ ತಂದು, ಗೆಲ್ಲೋಕೆ ಎಷ್ಟು ದುಡ್ಡಿದೆ ಎಂದು ಕೇಳ್ತಾರೆ. ದೇವೇಗೌಡರ ಮೇಲೆ ಆಗಲಿ ಕುಮಾರಸ್ವಾಮಿ ಮೇಲೆ ಆಗಲಿ ನನಗೆ ಬೇಸರ ಇಲ್ಲ. ಆದರೆ ದೇವೇಗೌಡರನ್ನು ಭೇಟಿ ಮಾಡಿ ಮಾತನಾಡುವ ಧೈರ್ಯ ನನಗಿಲ್ಲ. ಹಾಗಾಗಿ ಹತ್ತು ಪುಟಗಳ ಒಂದು ಪತ್ರ ಬರೆದಿದ್ದೇನೆ. ಕುಮಾರಸ್ವಾಮಿ ಅವರಿಗೆ ಈ ವಿಚಾರ ತಿಳಿಸಿದ್ದೇನೆ. ಅವರೇ ಖುದ್ದಾಗಿ ನಮ್ಮ ಮನೆಗೆ ಬಂದು ಮಾತಾಡಿದ್ದಾರೆ. ಅವರಿಗೆ ನನ್ನ ನಿಲುವನ್ನು ತಿಳಿಸಿದ್ದೇನೆ ಎಂದು ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಘೋಷಿಸಿದ್ದೇನೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್