AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆ ಬಂದ್: ಸರ್ಕಾರಕ್ಕೆ ಮತ್ತೆ ಮುಜುಗರ ತಂದಿಟ್ಟ ರಾಯರೆಡ್ಡಿ..!

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಟಿತವಾಗುತ್ತಿದೆ ಎಂಬ ಆರೋಪಗಳ ನಡುವೆ, ಸಿಎಂರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಬಸವರಾಜ ರಾಯರೆಡ್ಡಿ ಹೇಳಿಕೆಯು ರಾಜ್ಯ ಸರ್ಕಾರವು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ.

ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆ ಬಂದ್: ಸರ್ಕಾರಕ್ಕೆ ಮತ್ತೆ ಮುಜುಗರ ತಂದಿಟ್ಟ ರಾಯರೆಡ್ಡಿ..!
ಬಸವರಾಜ ರಾಯರೆಡ್ಡಿ
ವಿವೇಕ ಬಿರಾದಾರ
|

Updated on:Jul 06, 2025 | 2:41 PM

Share

ಕೊಪ್ಪಳ, ಜುಲೈ 06: ರಾಜ್ಯ ಕಾಂಗ್ರೆಸ್​ (Congress) ಪಕ್ಷ ಚುನಾವಣೆಗೂ ಮುನ್ನ ನೀಡಿದ್ದ ಆಶ್ವಾಸನೆಯಂತೆ ಪಂಚ ಗ್ಯಾರಂಟಿಗಳನ್ನು (Guarantee) ನೀಡಿದೆ. ಈ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಟಿತ ಆಗುತ್ತಿದೆ ಎಂದು ವಿಪಕ್ಷಗಳು ಆರೋಪಿಸುತ್ತಿರುವ ನಡುವ ಆಗಾಗ ಸ್ವಾಪಕ್ಷದ ಶಾಸಕರುಗಳು ಕೂಡ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಸ್ವರ ಎತ್ತುತ್ತಿದ್ದಾರೆ. ಇದೀಗ, ಕಾಂಗ್ರೆಸ್​ನ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ (Basavaraj Rayareddy), “ನಿಮಗೆ ಅಕ್ಕಿ ಬ್ಯಾಡ, ಇನ್ನೊಂದು ಬ್ಯಾಡ ಅಂದ್ರ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ನಿಂಗೆ ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿದಂತೆ ಎಲ್ಲವೂ ಬಂದ್​ ಆಗತಾವ” ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿಗೆ ಹಣದ ಕೊರತೆ ಇದೆ ಎಂದು ಮತ್ತೊಮ್ಮೆ ಪರೋಕ್ಷವಾಗಿ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ರ್ಯಾವಣಿಕದಲ್ಲಿ ಶನಿವಾರ ಪ್ರೌಢಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಸವರಾಜ ರಾಯರೆಡ್ಡಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರೈತರೊಬ್ಬರು ‘ನಮ್ಮ ಹೊಲಕ್ಕೆ ಹೋಗುವ ರಸ್ತೆ ಮಾಡಿಕೊಡ್ರೀ’ ಎಂದು ಮನವಿ ಮಾಡಿದರು.

ರೈತನ ಮನವಿಗೆ ಪ್ರತಿಕ್ರಿಯಿಸಿದ ಬಸವರಾಜ ರಾಯರೆಡ್ಡಿ, “ನಿಂಗೆ ರಸ್ತೆ ಬೇಕು ಅಂದ್ರೆ ಅಕ್ಕಿ, ಎಲ್ಲವೂ ಬಂದ್ ಮಾಡೋಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ಕೊಡುತ್ತೇನೆ ಎಂದು ಹೇಳಿದರು. ಸದ್ಯ ಬಸವರಾಜ ರಾಯರೆಡ್ಡಿಯವರ ಈ ಹೇಳಿಕೆ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬೀಳಲು ದಾರಿ ಮಾಡಿಕೊಟ್ಟಿದೆ.

ಇದನ್ನೂ ಓದಿ
Image
ಒಬಿಸಿ ಸಮಿತಿಗೆ ನೇಮಕ: ಸಿದ್ದರಾಮಯ್ಯ ಬಗ್ಗೆ ಭವಿಷ್ಯ ನುಡಿದ ವಿಪಕ್ಷ ನಾಯಕರು
Image
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
Image
ಗಾಣಿಗ ಮಠಕ್ಕೆ ಅನುದಾನ ಬಿಡುಗಡೆಗೆ ಕಮಿಷನ್​ ಕೇಳಿದ ಸಚಿವ: ಸ್ವಾಮೀಜಿ ಆರೋಪ
Image
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ

ರಾಯರೆಡ್ಡಿ ಹೇಳಿಕೆಗೆ ತೇಪೆ ಹಚ್ಚಿದ ಸಿಎಂ

ಶಾಸಕ ರಾಯರೆಡ್ಡಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ. ಬಡವರ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕಾರ್ಯಕ್ರಮವಾಗಿದೆ. ಗ್ಯಾರಂಟಿ ಯೋಜನೆ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಬ್ರಿಡ್ಜ್​, ರಸ್ತೆಗಳ ದುರಸ್ತಿಗಾಗಿ ಶಾಸಕರಿಗೆ ಸ್ವಲ್ಪ ಹಣ ಕೊಡುತ್ತಿದ್ದೇವೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೂ ಅನುದಾನ ಕೊಡುತ್ತಿದ್ದೇವೆ ಎಂದು ತೇಪೆ ಹಚ್ಚಿದರು.

ಇದನ್ನೂ ಓದಿ: ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ: ಇದು ಸೆಪ್ಟೆಂಬರ್ ಕ್ರಾಂತಿ ಮುನ್ನುಡಿ ನಾ

ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ ನಾಯಕರು

ಗ್ಯಾರಂಟಿ ಯೋಜನೆ ಕುರಿತು ರಾಯರೆಡ್ಡಿ ಹೇಳಿಕೆಗೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ವ್ಯಂಗ್ಯವಾಡಿದ್ದಾರೆ. ಬಸವರಾಜ ರಾಯರೆಡ್ಡಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರರು. ರಾಜ್ಯ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಅನ್ನೋದಕ್ಕೆ ಹೀಗೆ ಹೇಳಿದ್ದಾರೆ. ಬಡವರಿಗೆ ಗ್ಯಾರಂಟಿ ಸಿಗುತ್ತಿದೆ, ಇವರು ಲೂಟಿ ಹೊಡೆಯುತ್ತಿದ್ದಾರೆ ಇದರ ಬಗ್ಗೆಯೂ ಶಾಸಕ ಬಸವರಾಜ ರಾಯರೆಡ್ಡಿ ಮಾತನಾಡಲಿ. ಲೂಟಿ ಹೊಡೆಯುವುದನ್ನ ನಿಲ್ಲಿಸಿದರೆ ತಾನಾಗಿಯೇ ಅಭಿವೃದ್ಧಿ ಆಗುತ್ತೆ ಎಂದು ಹೇಳಿದರು.

ಬಸವರಾಜ ರಾಯರೆಡ್ಡಿ ಹೇಳಿಕೆಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ರಾಯರೆಡ್ಡಿ ನೂರಾರು ಬಾರಿ ಹೇಳಿಕೆ ಕೊಟ್ಟಿರುವುದು ನೋಡಿದ್ದೇವೆ. ನಂತರ ಅದಕ್ಕೆ ಇನ್ನೊಂದು ಸ್ಪಷ್ಟೀಕರಣ ಕೊಡುತ್ತಾರೆ. ಓಪನ್ ಆಗಿ ರಸ್ತೆ ಬೇಕು ಅಂದ್ರೆ ಅಕ್ಕಿ ಕೊಡುವುದು ನಿಲ್ಲಿಸಿ ಅಂತಾರೆ. ಸರ್ಕಾರದ ಪರಿಸ್ಥಿತಿ ಎಲ್ಲಿದೆ ಅಂತಾ ಅವರ ಹೇಳಿಕೆಯಲ್ಲಿ ತಿಳಿಯುತ್ತೆ. ಈ ಸರ್ಕಾರದಿಂದ ಅಭಿವೃದ್ಧಿಯನ್ನು ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Sun, 6 July 25