ಬಾಗಲಕೋಟೆ: ಇಲ್ಲಿ ನಡೆದ ಪರಿಷತ್ ಚುನಾವಣಾ ಸಭೆಯಲ್ಲಿ ಕಾಂಗ್ರೆಸ್ ನಾಯಕ ಬಿ.ಬಿ ಚಿಮ್ಮನಕಟ್ಟಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನನ್ನನ್ನು ಪರಿಷತ್ ಸದಸ್ಯರಾಗಿ ಮಾಡುವುದಾಗಿ ಹೇಳಿದ್ದರು. ಆದರೆ ಪರಿಷತ್ ಸದಸ್ಯರನ್ನಾಗಿ ಮಾಡಿದರಾ? ಈ ಬಗ್ಗೆ ಎಷ್ಟು ನೋವು ಅನುಭವಿಸಿದ್ದೇನೆ ಎಂದು ನನಗೆ ಗೊತ್ತು. ನಾನು ಐದಾರು ಸಲ ಶಾಸಕ ಆಗಿದ್ದೆ. ಮಂತ್ರಿ ಆಗಿದ್ದೆ. ನನ್ನ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಂದು ನಿಂತ್ರು. ಈಗ ಅವರು ತಮ್ಮೂರು ಇರುವ ವರುಣಾ ಕ್ಷೇತ್ರದಲ್ಲಿ ನಿಲ್ಲಲಿ ಎಂದು ಚಿಮ್ಮನಕಟ್ಟಿ ಹೇಳಿದ್ದಾರೆ.
ಸಿದ್ದರಾಮಯ್ಯ ಹಾಗೂ ಬೆಂಬಲಿಗರು ತಮ್ಮನ್ನು ಕಡೆಗಣಿಸಿದ್ದಾರೆ ಎಂಬ ವಿಚಾರಕ್ಕಾಗಿ ಅಸಮಾಧಾನಗೊಂಡಿರುವ ಚಿಮ್ಮನಕಟ್ಟಿ, ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರಿಷತ್ ಚುನಾವಣಾ ಪ್ರಚಾರ ವೇದಿಕೆಯಲ್ಲಿ ಭಾವುಕರಾಗಿದ್ದಾರೆ.
ನಮ್ಮನ್ನ ಹುಲಿ ಹೋಗಿ ಇಲಿ ಮಾಡಿದ್ದೀರಿ. ಮುಂದಿನ ಸಲ ಸಿದ್ದರಾಮಯ್ಯ ವರುಣ ಕ್ಷೇತ್ರದಲ್ಲಿ ನಿಲ್ತಾರೆ. ಸಿದ್ದರಾಮಯ್ಯ ಮಗನ ಬಿಟ್ಟು ತಾವೇ ಸ್ಪರ್ಧಿಸಿದ್ರೆ ಗೆಲ್ತಿದ್ರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ಯೋಗ್ಯತೆ ಇಲ್ಲದಿದ್ರೆ ಅವರು ಯಾಕೆ ಸ್ಪರ್ಧಿಸಬೇಕಿತ್ತು. ಸ್ವಕ್ಷೇತ್ರದಲ್ಲೇ ಸಿದ್ದರಾಮಯ್ಯ ಗೆಲ್ಲಬೇಕು ಎಂದು ಚಾಲೆಂಜ್ ಮಾಡಿದ್ದಾರೆ. ಅದನ್ನ ಬಿಟ್ಟು ನಮಗೆ ಗಂಟುಬಿದ್ದರೆ ನಾವೇನು ಮಾಡಬೇಕು ಎಂದು ಮಾಜಿ ಶಾಸಕ ಚಿಮ್ಮನಕಟ್ಟಿ ಪ್ರಶ್ನೆ ಮಾಡಿದ್ದಾರೆ.
ಬಿ.ಬಿ. ಚಿಮ್ಮನಕಟ್ಟಿ ಭಾಷಣದಿಂದ ಸಿದ್ದರಾಮಯ್ಯಗೆ ಮುಜುಗರ ಉಂಟಾಗಿದೆ. ಬಾದಾಮಿಯಿಂದ ಸ್ಪರ್ಧಿಸುವುದಾಗಿ ಬಿ.ಬಿ. ಚಿಮ್ಮನಕಟ್ಟಿ ಹೇಳಿದ್ದಾರೆ. ಬಾದಾಮಿಯಿಂದ ಸ್ಪರ್ಧೆ ಮಾಡಿ ಗೆದ್ದು, ಮಂತ್ರಿಯಾಗುತ್ತೇನೆ ಎಂದು ಪ್ರಚಾರದ ವೇದಿಕೆಯಲ್ಲಿ ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ತಿಳಿಸಿದ್ದಾರೆ. ಘಟನೆಯಿಂದ ಸಿದ್ದರಾಮಯ್ಯಗೆ ಮುಜುಗರ ಉಂಟಾಗಿದೆ.
ಇದನ್ನೂ ಓದಿ: ಎಪಿಎಂಸಿ ವ್ಯಾಪ್ತಿಯ ಮನೆಗಳ ಕರೆಂಟ್ ಕಟ್; ಹೆಸ್ಕಾಂ ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ
ಇದನ್ನೂ ಓದಿ: ಬಾಯಿತಪ್ಪಿ ನರೇಂದ್ರ ಮೋದಿಯನ್ನು ಹೊಗಳಿದ ಸಿದ್ದರಾಮಯ್ಯ: ಸಾಲಮನ್ನಾ ಮಾಡಿದ್ದು ಮೋದಿ
Published On - 3:12 pm, Mon, 6 December 21