BBMP Election: ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಠಕ್ಕರ್ ನೀಡಲು ಕಾಂಗ್ರೆಸ್ ಹೊಸ ತಂತ್ರ; ಏನದು?

ಬಿಜೆಪಿ ವಿಗಂಡಿಸಿದ್ದ 243 ವಾರ್ಡ್​​ಗಳನ್ನ 250 ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ವಾರ್ಡ್​​​ಗಳನ್ನು ಹೆಚ್ಚಿಸುವ ಬಗ್ಗೆ ಬೆಂಗಳೂರಿನ ಸಚಿವರು, ಶಾಸಕರು ಹಾಗೂ ಹಿರಿಯ ಮಾಜಿ ಮೇಯರ್​​​ಗಳು ಸಲಹೆ ನೀಡಿದ್ದಾರೆ.

BBMP Election: ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಠಕ್ಕರ್ ನೀಡಲು ಕಾಂಗ್ರೆಸ್ ಹೊಸ ತಂತ್ರ; ಏನದು?
ಬಿಬಿಎಂಪಿ
Follow us
Ganapathi Sharma
|

Updated on:Jun 05, 2023 | 4:18 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಯಲ್ಲಿ ಬಿಜೆಪಿಗೆ ಠಕ್ಕರ್ ನೀಡಲು ಹೊಸ ರಣತಂತ್ರ ಹೆಣೆಯಲು ಕಾಂಗ್ರೆಸ್ ಮುಂದಾಗಿದೆ. ಬಿಬಿಎಂಪಿ ವಾರ್ಡ್​ಗಳ ಸಂಖ್ಯೆಯನ್ನು 250 ಕ್ಕೇರಿಸಲು ಕಾಂಗ್ರೆಸ್ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ಬಿಜೆಪಿ ಆಡಳಿತದಲ್ಲಿದ್ದಾಗ ಪಾಲಿಕೆಯ ವಾರ್ಡ್​​ಗಳನ್ನು ಅನಕ್ಕೂಲಕ್ಕೆ ತಕ್ಕಂತೆ ವಿಗಂಡಿಸಿ, 198 ವಾರ್ಡ್​​​ಗಳನ್ನು 243 ಕ್ಕೇ ಏರಿಸಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಮರು ವಿಗಂಡನೆಗೆ ಯೋಜನೆ ರೂಪಿಸಿದೆ ಎನ್ನಲಾಗಿದೆ.

ಬಿಜೆಪಿ ವಿಗಂಡಿಸಿದ್ದ 243 ವಾರ್ಡ್​​ಗಳನ್ನ 250 ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ವಾರ್ಡ್​​​ಗಳನ್ನು ಹೆಚ್ಚಿಸುವ ಬಗ್ಗೆ ಬೆಂಗಳೂರಿನ ಸಚಿವರು, ಶಾಸಕರು ಹಾಗೂ ಹಿರಿಯ ಮಾಜಿ ಮೇಯರ್​​​ಗಳು ಸಲಹೆ ನೀಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಸಮಿತಿ ಮುಂದೆ ಕೈ ನಾಯಕರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ವಾರ್ಡ್​​​ಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಲು ಸರ್ಕಾರ ಮುಂದಾಗಿದೆ.

ಸರ್ಕಾರ ರಚನೆ ಬೆನ್ನಲ್ಲೆ ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಲಾಭ ಪಡಯುವುದಕ್ಕಾಗಿ ತುರ್ತಾಗಿ ಚುನಾವಣೆ ನಡೆಸಲು ಪಕ್ಷವು ಆತುರ ತೋರುತ್ತಿದೆ. ಡಿ ಲಿಮಿಟೇಷನ್ ನಡೆಸಿ ವೋಟ್ ಬ್ಯಾಂಕ್ ಗಟ್ಟಿಮಾಡಿಕೊಂಡಿದ್ದ ಬಿಜೆಪಿಗೆ ಅದೇ ತಂತ್ರ ಅನುಸರಿಸಿ ತಿರುಗೇಟು ನೀಡುವುದು ಕಾಂಗ್ರೆಸ್ ಪ್ರತಿತಂತ್ರ ಎನ್ನಲಾಗಿದೆ. ಇದರಿಂದ 198 ವಾರ್ಡ್​​ಗಳನ್ನು 243ಕ್ಕೆ ವಿಗಂಡಿಸಿ ಚುನಾವಣೆ ಗೆಲ್ಲುವ ಲೆಕ್ಕ ಹಾಕಿಕೊಂಡಿದ್ದ ಬಿಜೆಪಿ ಆಘಾತ ಎದುರಾಗಲಿದೆ.

ಇದನ್ನೂ ಓದಿ: BBMP Election: 8 ವರ್ಷದಿಂದ ನಡೆಯದ ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್

ಬಿಬಿಎಂಪಿ ಕಾರ್ಪೊರೇಟರ್​ಗಳ ಅಧಿಕಾರಾವಧಿ ಮುಗಿದು ಎರಡು ವರ್ಷಗಳೇ ಕಳೆದಿದ್ದರೂ ಹಿಂದಿನ ಬಿಜೆಪಿ ಸರ್ಕಾರ ಒಂದಲ್ಲ ಒಂದು ನೆಪವೊಡ್ಡಿ ಬಿಬಿಎಂಪಿ ಚುನಾವಣೆಯನ್ನೂ ಮುಂದೂಡುತ್ತಾ ಬಂದಿತ್ತು. ವಾರ್ಡ್​​ ವಿಣಗಡಣೆ ನೆಪ ನೀಡಿ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಿರಲಿಲ್ಲ. ಚುನಾವಣೆ ನಡೆಸಿ ಅಂತ ಹೈಕೋರ್ಟ್ ಅದೇಶ ನೀಡಿದ್ದರೂ, ಮತ್ತೆ ಮೀಸಲಾತಿ ಹೆಸರಲ್ಲಿ 6 ತಿಂಗಳ ಗಡುವು ಕೇಳಿತ್ತು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:17 pm, Mon, 5 June 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್