ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು, ಅದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ: ಬೆಂಬಲಿಗ ವೇಲು ಗಂಭೀರ ಆರೋಪ

ಮುನಿರತ್ನ ವಿರುದ್ಧ ಅವರ ಬೆಂಬಲಿಗರೇ ಇದೀಗ ತಿರುಗಿಬಿದ್ದಿದ್ದಾರೆ. ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು, ಅದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಅಂತೆಲ್ಲ ಮಾಜಿ ಕಾರ್ಪೋರೇಟರ್​ ಗಂಭೀರ ಆರೋಪ ಮಾಡಿದ್ದಾರೆ.

ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು, ಅದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ: ಬೆಂಬಲಿಗ ವೇಲು ಗಂಭೀರ ಆರೋಪ
ಆರ್​ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on:Jul 24, 2023 | 7:33 AM

ಬೆಂಗಳೂರು, (ಜುಲೈ 24): ಸಚಿವರಾಗಿದ್ದಾಗ ಮುನಿರತ್ನ (munirathna) ಹನಿಟ್ರ್ಯಾಪ್(honeytrap) ಮಾಡಿಸುತ್ತಿದ್ದರು. ಹನಿಟ್ರ್ಯಾಪ್ ಮಾಡಲೆಂದೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಅವರ ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ನಿನ್ನೆ (ಜುಲೈ 23) ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವೇಲು ನಾಯ್ಕರ್, ಕರೆಯಿಸುವುದು ಹನಿಟ್ರ್ಯಾಪ್ ಮಾಡುವುದು ಹೆದರಿಸುವುದು. ಜೆ.ಪಿ.ಪಾರ್ಕ್‌, ಡಾಲರ್ಸ್‌ ಕಾಲೋನಿಯಲ್ಲಿ ಇದಕ್ಕಾಗಿ ಸ್ಟುಡಿಯೋ ಇದೆ. ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ ಎಂದರು.

ಇದನ್ನೂ ಓದಿ: BBMP Election: ವಾರ್ಡ್ ಪುನರ್ವಿಂಗಡಣೆ ಅನಿವಾರ್ಯ, ಬಿಬಿಎಂಪಿ ಚುನಾವಣೆ ಮುಂದೂಡಿಕೆ ಖಚಿತ

ಮುನಿರತ್ನಗೆ ಚುನಾವಣೆ ಎದುರಿಸುವುದು ಹೇಗೆ ಎಂದು ಕೇಳಿದೆವು. ನಿಮ್ಮದು ಈಸ್ಟ್‌ಮನ್ ಕಲರ್ ಪಿಕ್ಚರ್‌ ಇದೆ ತೋರಿಸಲಾ? ಇಲ್ಲ ಕೆಲಸ ಮಾಡುತ್ತೀರಾ ಅಂತಾ ಮುನಿರತ್ನ ಹೆದರಿಸುತ್ತಿದ್ದರು. ಮುನಿರತ್ನ ನಿರ್ಮಾಪಕನಾಗಿ ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹೀಗಾಗಿ ಮುನಿರತ್ನ ಸಚಿವರಾದ ಮೇಲೂ ಬರೀ ಆಂಟಿಗಳೇ ಇರುತ್ತಿದ್ದರು. ವಿಕಾಸಸೌಧ, ವಿಧಾನಸೌಧ ಚೇಂಬರ್‌ನಲ್ಲೆಲ್ಲಾ ಬರೀ ಆಂಟಿಗಳೇ ಇರುತ್ತಿದ್ದರು ಎಂದು ಆರೋಪಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗುತ್ತಿದ್ದು, ಇದಕ್ಕಾಗಿ ಆಡಳಿತರೂಢ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಅದರಲ್ಲೂ ಮುಖ್ಯವಾಗಿ ಬಿಬಿಎಂಪಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಡಿಕೆ ಶಿವಕುಮಾರ್ ಸದ್ದಿಲ್ಲದೇ ಆಪರೇಷನ್ ಹಸ್ತ ಮಾಡಿದ್ದಾರೆ. ಹೌದು…ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಬೆಂಬಲಿಗರನ್ನು ಕಾಂಗ್ರೆಸ್​ಗೆ ಸೆಳೆಯುವಲ್ಲಿ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಯಶಸ್ವಿಯಾಗಿದ್ದಾರೆ.

ಶಾಸಕ ಮುನಿರತ್ನ ಪರಮಾಪ್ತರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಮಾಜಿ ಬಿಬಿಎಂಪಿ ಸದಸ್ಯರುಗಳಾದ ವೇಲು ನಾಯ್ಕರ್​, ಮೋಹನ್​ ಕುಮಾರ್​ ಹಾಗೂ ಶ್ರೀನಿವಾಸ ಮೂರ್ತಿ ಬಿಜೆಪಿ ತೊರೆದು ಜುಲೈ 23ರಂದು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಡಿಕೆ ಬ್ರದರ್ಸ್, ಮುನಿರತ್ನಗೆ ಮತ್ತೊಂದು ಶಾಕ್ ಕೊಟ್ಟಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:28 am, Mon, 24 July 23

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು