AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ರೂಪಾಯಿಗೆ ಕನಕಪುರದಲ್ಲಿ ಬ್ಲೂ ಫಿಲ್ಮ್ ತೋರಿಸಿದ್ದ ಡಿ.ಕೆ.ಶಿವಕುಮಾರ್: ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸಿಡಿ ತಯಾರಿಸಿ ಬ್ಯ್ಲಾಕ್​ ಮೇಲ್​ ಮಾಡುತ್ತಿದ್ದಾರೆ ಎಂದು ಹೇಳಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇದೀಗ ಡಿ.ಕೆ.ಶಿವಕುಮಾರ್ ಕನಕಪುರದಲ್ಲಿ 100 ರೂಪಾಯಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸುತ್ತಿದ್ದರು ಎಂಬ ಗಂಭೀರ ಆರೋಪ ಮಾಡಿದ್ದಾರೆ.

100 ರೂಪಾಯಿಗೆ ಕನಕಪುರದಲ್ಲಿ ಬ್ಲೂ ಫಿಲ್ಮ್ ತೋರಿಸಿದ್ದ ಡಿ.ಕೆ.ಶಿವಕುಮಾರ್: ರಮೇಶ್ ಜಾರಕಿಹೊಳಿ ಗಂಭೀರ ಆರೋಪ
ರಮೇಶ ಜಾರಕಿಹೊಳಿ (ಎಡ ಚಿತ್ರ) ಮತ್ತು ಡಿ.ಕೆ.ಶಿವಕುಮಾರ್ (ಬಲ ಚಿತ್ರ)
TV9 Web
| Edited By: |

Updated on:Jan 30, 2023 | 3:43 PM

Share

ಬೆಳಗಾವಿ: ರಾಜಕೀಯಕ್ಕೆ ಬರುವ ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಕನಕಪುರದಲ್ಲಿ 100 ರೂಪಾಯಿಗೆ ಅಶ್ಲೀಲ ಚಿತ್ರಗಳನ್ನು (ಬ್ಲ್ಯೂಫಿಲ್ಮ್)​ ತೋರಿಸುತ್ತಿದ್ದರು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarakiholi) ಗಂಭೀರ ಆರೋಪ ಮಾಡಿದ್ದಾರೆ. ಸಿಡಿ ಪ್ರಕರಣದ (CD Case) ವಿಚಾರವಾಗಿ ತನ್ನ ವಿರುದ್ಧ ನಡೆದ ಷಡ್ಯಂತರದ ಬಗ್ಗೆ ಇಂದು ಸರಣಿ ಸುದ್ದಿಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರ ಈ ಪ್ರಕರಣದ ಬಗ್ಗೆ ಕಾಂಗ್ರೆಸ್​ನ ಯಾವೊಬ್ಬ ನಾಯಕ ಕೂಡ ಮಾತನಾಡುತ್ತಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಮಾತನಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ವಿರುದ್ಧ ಇದೀಗ ಜಿದ್ದಾಜಿದ್ದಿಗೆ ಬಿದ್ದಿರುವ ರಮೇಶ್ ಜಾರಕಿಹೊಳಿ, ಮೇಲಿಂದ ಮೇಲೆ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಐಟಿ, ಇಡಿ ದಾಳಿಗಳಲ್ಲಿಕೋಟ್ಯಾಂತರ ರೂಪಾಯಿ ಹಣ ಜಪ್ತಿ ಮಾಡಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಬಿಡುಗಡೆ ಮಾಡಿದರು. ಇದಕ್ಕೂ ಮುನ್ನ ತನ್ನ ವಿರುದ್ಧ ಮಾಡಿದ ಸಿಡಿ ಷಡ್ಯಂತರದ ಹಿಂದೆ ಡಿ.ಕೆ.ಶಿವಕುಮಾರ್ ಮತ್ತು ಕಂಪನಿ ಇದೆ ಎಂದು ಆರೋಪಿಸಿದ್ದರು. ಇದೀಗ ಅಶ್ಲೀಲ ಸಿನಿಮಾ ಪ್ರದರ್ಶನದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Ramesh Jarkiholi: ಅಣ್ಣ ತಮ್ಮಂದಿರಂತಿದ್ದ ಡಿಕೆಶಿ ಮತ್ತು ನನ್ನ ಸಂಬಂಧ ಹಾಳಾಗಿದ್ದೇ ಬೆಳಗಾವಿ ಗ್ರಾಮಾಂತರ ಶಾಸಕಿ, ವಿಷಕನ್ಯೆಯಿಂದ – ರಮೇಶ್ ಜಾರಕಿಹೊಳಿ

ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಸುದ್ದಿಗೋಷ್ಠಿ ನಡೆಸಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ರಮೇಶ್ ಜಾರಕಿಹೊಳಿ ಮಾಡಿದ ಆರೋಪದ ಬಗ್ಗೆ ಖಂಡನೆ ವ್ಯಕ್ತಪಡಿಸಿದರು. ಇದಕ್ಕೆ ಎರಡನೇ ಸುದ್ದಿಗೋಷ್ಠಿ ನಡೆಸಿ ತಿರುಗೇಟು ನೀಡಿದ ರಮೇಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಚನ್ನರಾಜ ಹಟ್ಟಿಹೊಳಿಗೆ ನೈತಿಕತೆ ಇಲ್ಲ. ಸಿಡಿ ಗ್ಯಾಂಗ್ ಕ್ಯಾಪ್ಟನ್ ಇಟ್ಟುಕೊಂಡು ರಾಜಕೀಯ ಮಾಡುತ್ತೀರಾ ಎಂದು ಪ್ರಶ್ನಿಸಿದರು.

ಇಂತಹ ಫ್ರಾಡ್ ಇಟ್ಟುಕೊಂಡು ಕಾಂಗ್ರೆಸ್‌ ಪಕ್ಷದಿಂದ ರಾಜಕೀಯ ಮಾಡಲಾಗುತ್ತಿದೆ. ಸಿಡಿ ಮಾಸ್ಟರ್‌ಗೆ ಅಧಿಕಾರ ಸಿಕ್ಕರೆ ರಾಜ್ಯದ ಗತಿ ಏನು ಅಂತಾ ಪ್ರಶ್ನೆ ಮಾಡಿದ ರಮೇಶ್, ಸಿಡಿ ಬ್ಲ್ಯಾಕ್​ಮೇಲ್​ ಮಾಡುವವನಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಆತನನ್ನು ರಾಜಕೀಯವಾಗಿ ಮುಗಿಸಲು ಇದು ನನ್ನ ಮೊದಲ ಅಸ್ತ್ರ. ಸಿಡಿ ಇಟ್ಟುಕೊಂಡು ಎಲ್ಲರನ್ನು ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಾನೆ. ರಾಜಕೀಯಕ್ಕೆ ಬರುವ ಮೊದಲು ಕನಕಪುರದಲ್ಲಿ ಡಿಕೆಶಿ 100 ರೂ.ಗೆ ಬ್ಲ್ಯೂಫಿಲ್ಮ್​ ತೋರಿಸುತ್ತಿದ್ದ. ಈ ಬಗ್ಗೆ ಕಾಂಗ್ರೆಸ್​ನ ಯಾವೊಬ್ಬ ನಾಯಕ ಕೂಡ ಮಾತನಾಡುತ್ತಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಡಿಕೆಶಿ ಬಗ್ಗೆ ಮಾತನಾಡುತ್ತಿಲ್ಲ. ನಾನು ಯಾವುದೇ ಗಿಮಿಕ್​ ಮಾಡುತ್ತಿಲ್ಲ ಎಂದರು.

ಸಿಡಿ ಮಾಸ್ಟರ್‌ಗೆ ಅಧಿಕಾರ ಸಿಕ್ಕರೆ ರಾಜ್ಯದ ಗತಿ ಏನು ಅಂತಾ ಪ್ರಶ್ನೆ ಮಾಡಿದ ರಮೇಶ್, ಡಿಕೆ ಶಿವಕುಮಾರ್ ಸಿಡಿ ಇಟ್ಕೊಂಡು ಬ್ಲಾಕ್‌ಮೇಲ್ ರಾಜಕಾರಣವನ್ನು ಮಾಡುತ್ತಿದ್ದಾರೆ. ಅವರ ಮುಂದೆ ಸಿದ್ದರಾಮಯ್ಯ ಅಂತವರೇ ಮಾತಾಡಲು ಆಗುತ್ತಿಲ್ಲ. ಎಲ್ಲರನ್ನೂ ಸಿಡಿ ಮೂಲಕವೇ ಆಪರೇಟ್ ಮಾಡುತ್ತಿರುವುದು ಡಿ.ಕೆ.ಶಿವಕುಮಾರ್ ಎಂದು ಆಪಾದನೆ ಮಾಡಿದರು.

ಇದನ್ನೂ ಓದಿ: Ramesh Jarkiholi Audio: ಡಿ.ಕೆ.ಶಿವಕುಮಾರ್​​ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ ರಮೇಶ್​ ಜಾರಕಿಹೊಳಿ: ಆ 18 ಸೆಕೆಂಡ್​ ಆಡಿಯೋದಲ್ಲೇನಿದೆ?

ನನ್ನ ವ್ಯಕ್ತಿತ್ವ ಇಡೀ ರಾಜ್ಯಕ್ಕೆ ಗೊತ್ತಿದೆ. ಪಕ್ಷದ ವರಿಷ್ಠರ ಜೊತೆ ಚರ್ಚಿಸಿದ ಬಳಿಕ ನಾನು ಮಾತನಾಡುತ್ತೇನೆ. ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ನನ್ನ ನೈತಿಕತೆ ಬಗ್ಗೆ ಮಾತನಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಚನ್ನರಾಜ ವ್ಯಕ್ತಿತ್ವ ಎಲ್ಲರಿಗೂ ಗೊತ್ತಿದೆ. ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಬಗ್ಗೆ ಸಿಬಿಐ ತನಿಖೆ ಆಗಲಿ. ಕಾಂಗ್ರೆಸ್​ ಪಕ್ಷಕ್ಕೆ ನಾನು ಸವಾಲು ಹಾಕುತ್ತೇನೆ ಎಂದರು.

ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

ಯಾವ ಕಾರಣಕ್ಕೆ ಸುದ್ದಿಗೋಷ್ಠಿ ಮಾಡಿದ್ರೋ ಅವರಿಗೆ ಗೊತ್ತಿಲ್ಲ. ವೈಯಕ್ತಿಕ ಹೇಳಿಕೆ ಮಾಧ್ಯಮಗಳಲ್ಲಿ ಕೊಡಬಾರದು. ಅಸಭ್ಯವಾಗಿ ಮಾತನಾಡುವ ಚಟವನ್ನು ಜಾರಕಿಹೊಳಿ ಬಿಡಬೇಕು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಬಗ್ಗೆ ರಮೇಶ್​ ಹೇಳಿಕೆಯನ್ನು ಖಂಡಿಸುತ್ತೇನೆ. ಅಸಭ್ಯವಾಗಿ ಮಾತಾಡುವ ಚಟ ಬಿಡದಿದ್ದರೆ ಜನ ತಕ್ಕಪಾಠ ಕಲಿಸುತ್ತಾರೆ ಎಂದು ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಸುಳ್ಳು ಹೇಳುವ ಅಭ್ಯಾಸ ಮಾಡಿಕೊಂಡಿದ್ದಾರೆ. ಆರೋಪ ಮಾಡುವುದು ಬಿಟ್ಟು ದಾಖಲೆ ಮೂಲಕ ಬರಲಿ ಎಂದು ಹೇಳಿ ಸಿಡಿ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ.

ಚನ್ನಮ್ಮನ ಬಗ್ಗೆ ಅಪಮಾನ ಮಾಡಿ ಮಾತಾಡಿದ ಆಡಿಯೋ ಇದೆ ಎಂಬ ರಮೇಶ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರು, ನಮ್ಮ ಬಳಿ ಯಾವುದೇ ಆಡಿಯೋ, ಸಿಡಿ ಇಲ್ಲ. ಅವರ ಅಪರಾಧವನ್ನು ನಮ್ಮ ಮೇಲೆ ತಿರುಗಿಸುವ ಯತ್ನ ನಡೆದಿದೆ. ಅಂತಹ ಕೀಳು ರಾಜಕೀಯ ನಾವು ಎಂದು ಮಾಡಲ್ಲ. ಅವರ ಅಪರಾಧವನ್ನು ನಮ್ಮ ಮೇಲೆ ತಿರುಗಿಸುವ ಯತ್ನ ನಡೆದಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Mon, 30 January 23

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು