AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ​: ಸಮಿತಿ ರಚಿಸಿದ ಜೆಪಿ ನಡ್ಡಾಗೆ ಜಾಡಿಸಿದ ಸಿದ್ದರಾಮಯ್ಯ

belagavi woman stripped And assault case: ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಕ್ಕಿಳಿದಿದ್ದಾರೆ. ಈ ಪ್ರಕರಣ ಸಂಬಂಧ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯೊಂದನ್ನು ರಚನೆ ಮಾಡಿದ್ದು. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ​: ಸಮಿತಿ ರಚಿಸಿದ ಜೆಪಿ ನಡ್ಡಾಗೆ ಜಾಡಿಸಿದ ಸಿದ್ದರಾಮಯ್ಯ
ಜೆಪಿ ನಡ್ಡಾ,ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: Dec 15, 2023 | 8:33 PM

Share

ಬೆಂಗಳೂರು, (ಡಿಸೆಂಬರ್ 15): ಭಾರತೀಯ ಜನತಾ ಪಕ್ಷದ (ಬಿಜೆಪಿ) ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಕಣ್ಣು ಮುಚ್ಚಿ ಕೂತಿದ್ದರು. ಈಗ ಅವರ ನಿದ್ದೆಗಣ್ಣಿಗೆ ಬೆಳಗಾವಿಯಲ್ಲಿ (Belagavi) ಇತ್ತೀಚೆಗೆ ಮಹಿಳೆಯೊಬ್ಬರ ಮೇಲೆ ನಡೆದಿರುವ ದೌರ್ಜನ್ಯ ಮಾತ್ರ ಕಾಣಿಸಿಕೊಂಡಿದ್ದು,  ಅದರಲ್ಲಿ ರಾಜಕೀಯ ಬೇಳೆ ಬೇಯಿಸಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ ಸಂಬಂಧ ಜೆಪಿ ನಡ್ಡಾ ಅವರು ಸತ್ಯಾಶೋಧನಾ ಸಮಿತಿ ರಚಿಸಿದ್ದಾರೆ. ಇದೀಗ ಇದಕ್ಕೆ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕರಣ ಹೊರಡಿಸಿ ಜೆಪಿ ನಡ್ಡಾ ನಡೆಯನ್ನು ಟೀಕಿಸಿದ್ದಾರೆ.

ಬೆಳಗಾವಿಯಲ್ಲಿ ಮಹಿಳೆ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ನಡೆದಿರುವ ದೌರ್ಜನ್ಯ ಅತ್ಯಂತ ಖಂಡನೀಯ. ಮನುಷ್ಯರೆಲ್ಲರೂ ತಲೆತಗ್ಗಿಸುವಂತಹ ಆ ಘಟನೆಯನ್ನು ಬಳಸಿಕೊಂಡು ರಾಜಕೀಯ ಮಾಡಲು ಹೊರಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕೀಳು ಮನಸ್ಥಿತಿ ಇನ್ನೂ ಖಂಡನೀಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್​: 5 ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದ ಜೆಪಿ ನಡ್ಡಾ

ಬೆಳಗಾವಿಯ ಘಟನೆ ಗೊತ್ತಾದ ಕ್ಷಣವೇ ನಮ್ಮ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಂತ್ರಸ್ತೆಯ ಮನೆಗೆ ಭೇಟಿಕೊಟ್ಟು ಸಾಂತ್ವನ ನೀಡಿದ್ದು ಮಾತ್ರವಲ್ಲ ಪರಿಹಾರವನ್ನೂ ನೀಡಿದ್ದಾರೆ. ಪೊಲೀಸರು ಇಪ್ಪತ್ತನಾಲ್ಕು ಗಂಟೆಗೊಳಗೆ ದೌರ್ಜನ್ಯ ನಡೆಸಿದ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಿದ್ದಾರೆ. ನಾನೇ ಖುದ್ದಾಗಿ ಈ ಪ್ರಕರಣದ ತನಿಖೆಯ ಮೇಲೆ ನಿಗಾ ಇಟ್ಟಿದ್ದೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಇಂತಹ ಅಮಾನುಷ ಕೃತ್ಯಗಳು ನಡೆಯದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ದವಾಗಿದೆ ಎಂದರು.

ರಾಜ್ಯ ಸರ್ಕಾರ ಕೈಗೊಂಡ ಕ್ರಮದಿಂದ ರಾಜ್ಯದ ಬಿಜೆಪಿ ನಾಯಕರಿಗೂ ಸಮಾಧಾನವಾಗಿದೆ. ಹೀಗಿರುವಾಗ ಘಟನೆ ನಡೆದು ನಾಲ್ಕು ದಿನಗಳನಂತರ ಇದ್ದಕ್ಕಿದ್ದ ಹಾಗೆ ಜೆ.ಪಿ.ನಡ್ಡಾ ಅವರು ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಕೆದಕಲು ಹೊರಟಿರುವುದಕ್ಕೆ ರಾಜಕೀಯ ದುರುದ್ದೇಶ ಕಾರಣವೇ ಹೊರತು ಮಹಿಳೆಯರ ಮೇಲಿನ ಕಾಳಜಿ ಖಂಡಿತ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಡ್ಡಾ ಅವರು ಮಹಿಳೆಯರ ಮೇಲೆ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಮಹಿಳೆಯರ ರಕ್ಷಣೆಯಲ್ಲಿ ವಿಫಲವಾಗಿದ್ದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ದವೇ ಕ್ರಮ ಕೈಗೊಳ್ಳಬೇಕಾಗಿತ್ತು. ಕೇಂದ್ರ ಸರ್ಕಾರದ ಅಧೀನದಲ್ಲಿರುವ ನ್ಯಾಷನಲ್ ಕ್ರೈಮ್ ಬ್ಯುರೋ ವರದಿ ಪ್ರಕಾರ, ಕಳೆದ ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಕರ್ನಾಟಕದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದ 17,813 ಪ್ರಕರಣಗಳು ದಾಖಲಾಗಿವೆ. ಅದರ ಹಿಂದಿನ ವರ್ಷ 2012ರಲ್ಲಿ 14,468 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಏನು ಮಾಡುತ್ತಿದ್ದರು? ವನವಾಸದಲ್ಲಿದ್ದರಾ? ಅವರದ್ದೇ ಸರ್ಕಾರದ ಮೂಗಿನಡಿಯಲ್ಲಿ ವರ್ಷದಿಂದ ವರ್ಷಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿದ್ದದ್ದು ಗಮನಕ್ಕೆ ಬಂದಿರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಮಣಿಪುರದಿಂದ ಗುಜರಾತ್ ವರೆಗೆ, ಉತ್ತರಪ್ರದೇಶದಿಂದ ಮಧ್ಯಪ್ರದೇಶದ ವರೆಗೆ ಎಲ್ಲೆಲ್ಲಿ ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ನ್ಯಾಷನಲ್ ಕ್ರೈಮ್ ಬ್ಯುರೋ ವರದಿಗಳೇ ಹೇಳುತ್ತಿವೆ. ಬಿಜೆಪಿ ಸ್ವಭಾವತಃ ಮಹಿಳಾ ವಿರೋಧಿ ಎನ್ನುವುದನ್ನು ಈ ಪ್ರಕರಣಗಳು ಸಾಬೀತು ಪಡಿಸಿವೆ ಎಂದು ತಿಳಿಸಿದ್ದಾರೆ.

ರಾಜ್ಯ ಬಿಜೆಪಿಯೊಳಗಿನ ಒಳಜಗಳ ತಾರಕಕ್ಕೇರಿದ್ದು ಪಕ್ಷದ ಮಾನಮರ್ಯಾದೆ ಬೀದಿಬೀದಿಗಳಲ್ಲಿ ಹರಾಜಾಗುತ್ತಿದೆ. ಪಕ್ಷದ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರ ವಿರುದ್ದ ಪಕ್ಷದ ಹಿರಿಯ ನಾಯಕರೇ ಗಂಭೀರ ಸ್ವರೂಪದ ಆರೋಪಗಳನ್ನ ಮಾಡುತ್ತಿದ್ದಾರೆ. ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ ಎಂದು ಸವಾಲು ಹಾಕಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ