ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲೆಲ್ಲ ಬೆಳಗಾವಿಯಂಥ ಘಟನೆ: ಸಚಿವ ಪ್ರಲ್ಹಾದ್ ಜೋಶಿ ಟೀಕೆ

ಬೆಳಗಾವಿ ಘಟನೆಯನ್ನು ವಿಧಾನಸಭೆ ಅಧಿವೇಶನದಲ್ಲಿ ಸೂಕ್ತ ರೀತಿಯಲ್ಲಿ ಪ್ರಸ್ತಾಪಿಸದ್ದಕ್ಕೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ಮೇಲೆ ಗರಂ ಆಗಿತ್ತು. ನಂತರ ಘಟನೆ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಐವರು ಸದಸ್ಯರ ಸತ್ಯಶೋದನಾ ಸಮಿತಿ ರಚನೆ ಮಾಡಿದ್ದರು.

ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲೆಲ್ಲ ಬೆಳಗಾವಿಯಂಥ ಘಟನೆ: ಸಚಿವ ಪ್ರಲ್ಹಾದ್ ಜೋಶಿ ಟೀಕೆ
ಪ್ರಲ್ಹಾದ್ ಜೋಶಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Ganapathi Sharma

Updated on: Dec 16, 2023 | 12:36 PM

ಹುಬ್ಬಳ್ಳಿ, ಡಿಸೆಂಬರ್ 16: ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿದ ಘಟನೆ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದರು. ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಅವರು, ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಇದ್ದಾಗ ಇದೇ ಪರಿಸ್ಥಿತಿ ಇತ್ತು. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲೆಲ್ಲಾ ಇಂತಹ ಘಟನೆಗಳು ನಡೆಯುತ್ತವೆ. ಅಪರಾಧಿ ಜಗತ್ತು ಮತ್ತು ಕಾಂಗ್ರೆಸ್​​ಗೂ ಅವಿನಾಭಾವ ಸಂಬಂಧ ಇದೆ ಎಂದು ಟೀಕಿಸಿದರು.

ಬೆಳಗಾವಿಯ ವಂಟಮೂರಿಯಲ್ಲಿ ನಡೆದ ಘಟನೆಯನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವರು ಹೇಳಿದರು.

ಬೆಳಗಾವಿ ಘಟನೆಯನ್ನು ವಿಧಾನಸಭೆ ಅಧಿವೇಶನದಲ್ಲಿ ಸೂಕ್ತ ರೀತಿಯಲ್ಲಿ ಪ್ರಸ್ತಾಪಿಸದ್ದಕ್ಕೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ಮೇಲೆ ಗರಂ ಆಗಿತ್ತು. ನಂತರ ಘಟನೆ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಐವರು ಸದಸ್ಯರ ಸತ್ಯಶೋದನಾ ಸಮಿತಿ ರಚನೆ ಮಾಡಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕರ್ನಾಟಕ ಬಿಜೆಪಿ ನಾಯಕರು ಬೆಳಗಾವಿ ಘಟನೆ ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ಸಂಸತ್​ನಲ್ಲಿ ನಡೆದ ಘಟನೆ ಹಿಂದೆ ವ್ಯವಸ್ಥಿತ ಪಿತೂರಿ: ಜೋಶಿ

ಸಂಸತ್​​​ನಲ್ಲಿ ನಡೆದ ಘಟನೆ ಕಿಡಿಗೇಡಿಗಳು ಮಾಡಿದ ಘಟನೆ ಅಲ್ಲ. ಅದರ ಹಿಂದೆ ವ್ಯವಸ್ಥಿತ ಪಿತೂರಿ ಇದೆ. ಪ್ರಜಾಪ್ರಭುತ್ವಕ್ಕೆ ಧಕ್ಕೆ ತರಲು ಪಕ್ಕಾ ಪ್ಲ್ಯಾನ್ ಮಾಡಿದ್ದಾರೆ. ಇಂಥ ವಿಚಾರಗಳಲ್ಲಿ ರಾಜಕಾರಣ ಮಾಡಬಾರದು ಎಂದು ಜೋಶಿ ಹೇಳಿದರು.

ಕಳೆದ ಎರಡು ದಿನಗಳಿಂದ ಸದನ ನಡೆಯಲು ಅವಕಾಶ ಕೊಡಲಿಲ್ಲ. ಈ ಹಿಂದೆ ಪಿಸ್ತೂಲ್ ಹಿಡಿದುಕೊಂಡು ಒಬ್ಬರು ಒಳ ಪ್ರವೇಶಿಸಿದ ಘಟನೆಯೂ ನಡೆದಿತ್ತು. ಡ್ರ್ಯಾಗನ್ ತಗೆದುಕೊಂಡು ಎಂಟ್ರಿ ಆಗಿದ್ದರು. ಆವಾಗಲೆಲ್ಲ ಯಾರು ಪಾಸ್ ಕೊಟ್ಟಿದ್ದರು ಎಂಬುದನ್ನೇ ಬಹಿರಂಗಪಡಿಸಿರಲಿಲ್ಲ. ನಾವು ಇದನ್ನು ಅತ್ಯಂತ ಸಂವೇದನೆ ಶೀಲವಾಗಿ ತಗೆದುಕೊಂಡಿದ್ದೇವೆ. ಸ್ವೀಕರ್ ಉನ್ನತ ತನಿಖೆಗೆ ಆದೇಶ ಮಾಡಿದ್ದಾರೆ. ದೆಹಲಿ ಪೊಲೀಸರು ಹೈಲೇವಲ್ ತನಿಖೆ ಮಾಡ್ತಿದ್ದಾರೆ‌. ಮುಂದೆ ಈ ರೀತಿ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಬಹಳ ದುಃಖ ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರಿನವರು ಎನ್ನುವ ಕಾರಣಕ್ಕೆ ಪ್ರತಾಪ್ ಸಿಂಹ ಪಾಸ್ ಕೊಟ್ರಾ? ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಿಷ್ಟು

ಕಳೆದ 10 ವರ್ಷದಿಂದ ದೇಶದಲ್ಲಿ ಭಯೋತ್ಪಾದಕ ದಾಳಿ ನಿಂತುಹೋಗಿದೆ. ಮೋದಿ ಸರ್ಕಾರ ಝೀರೋ ಟಾಲರೆನ್ಸ್ ಟೆರರಿಸ್ಟ್ ಪಾಲಿಸಿ ಹೊಂದಿದೆ. ಸಂಸತ್ ಘಟನೆ ಬಗ್ಗೆ ಸ್ಪೀಕರ್ ಕಟ್ಟುನಿಟ್ಟಿನ ತನಿಖೆಗೆ ಆದೇಶಿಸಿದ್ದಾರೆ. ವಿಪಕ್ಷಗಳು ಇವತ್ತಿನವರೆಗೂ ಸದನ ನಡೆಯೋಕೆ ಅವಕಾಶ ಕೊಟ್ಟಿಲ್ಲ. ಬಹಳ ಮಹತ್ತರ ಮಸೂದೆಗಳನ್ನು ಮಂಡಿಸಿ ಅನುಮೋದನೆ ಪಡೆಯಬೇಕಿದೆ. ಬ್ರಿಟಿಷ್ ಕಾನೂನು ತಗೆದು ಹೊಸ ಕಾನೂನು ತರಬೇಕಿದೆ ಎಂದು ಜೋಶಿ ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ