ಬೆಳಗಾವಿ, ಡಿ.07: ಬೆಳಗಾವಿ(Belagavi)ಯಲ್ಲಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಭಾರಿ ಚರ್ಚೆ ಆಗುತ್ತಿದ್ದು, ಸರ್ಕಾರದ ಉತ್ತರಕ್ಕೆ ತೃಪ್ತರಾಗದೆ ವಿಪಕ್ಷ ಬಿಜೆಪಿ(BJP) ಸಭಾತ್ಯಾಗ ಮಾಡಿದ್ದಾರೆ. ಧರಣಿ ಮಾಡಿದರೆ ಉತ್ತರ ಕರ್ನಾಟಕ ಚರ್ಚೆಗೆ ಬಿಜೆಪಿ ಅಡ್ಡಿ ಆರೋಪಿಸಿ ಆಡಳಿತ ಪಕ್ಷ ಲಾಭ ಪಡೆಯುತ್ತಾರೆ. ಈ ಹಿನ್ನಲೆ ಸದನದಲ್ಲಿ ಧರಣಿ ಬೇಡವೆಂದು ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ್ದಾರೆ.
ಡಿ.4 ರಂದು ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರೂ ಆಗಿರುವ ಶಾಸಕ ರಮೇಶ್ ಜಾರಕಿಹೊಳಿ ಅತ್ಯಾಪ್ತ ಹಾಗೂ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ (55) ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನಾಗಿರುವ ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಆಪ್ತರು ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಜಯನಗರದಲ್ಲಿ ನಡೆದಿತ್ತು. ಪೃಥ್ವಿ ಸಿಂಗ್ ಅವರ ಕ, ಬೆನ್ನಿಗೆ ಗಾಯಗಳಾಗಿದ್ದು, ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ:ಬಿಜೆಪಿ ಮುಖಂಡನಿಗೆ ಚಾಕು ಇರಿತ: ‘ಪೃಥ್ವಿ ಸಿಂಗ್ ಮೋಸ್ಟ್ ಬೋಗಸ್’: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಹೌದು, ಚನ್ನರಾಜ ಹಟ್ಟಿಹೊಳಿ ಅವರು ತಮ್ಮ ಆಪ್ತರಾಗಿರುವ ಸದ್ದಾಂ, ಸುಜಯ್ ಜಾಧವ್, ಚನ್ನರಾಜ ಅವರ ಬಾಡಿಗಾರ್ಡ್ ಅವರಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿತ್ತು. ಪೃಥ್ವಿ ಜೊತೆ ಅವರ ಮನೆ ಸಮೀಪ ಚನ್ನರಾಜ್ ಆಪ್ತರು ಚರ್ಚೆ ನಡೆಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲೂ ಸೆರೆಯಾಗಿತ್ತು. ಇನ್ನು ವಿಷಯ ತಿಳಿಯುತ್ತಿದ್ದಂತೆ ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ಬಿಜೆಪಿ ಶಾಸಕ, ಸಚಿವರುಗಳು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ಪೃಥ್ವಿ ಸಿಂಗ್ ಅವರ ಆರೋಗ್ಯ ವಿಚಾರಿಸಿದ್ದರು.
ಇದಾದ ಬಳಿಕ ಪೃಥ್ವಿ ಸಿಂಗ್ ನಿವಾಸಕ್ಕೆ ಬೆಳಗಾವಿಯ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿದ್ದರು. ಜೊತೆಗೆ ಘಟನೆ ನಡೆದ ಸ್ಥಳಕ್ಕೆ ಡಿಸಿಪಿ, ಎಸಿಪಿ ಬಂದು ವಿಚಾರಣೆ ಶುರು ಮಾಡಿದ್ದರು. ಇದೀಗ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಆಪ್ತ ಸುಜಿತ್ ಜಾಧವ್, ಸದ್ದಾಂ, ಚನ್ನರಾಜ ಹಟ್ಟಿಹೊಳಿಯ ಇಬ್ಬರು ಗನ್‌ಮ್ಯಾನ್‌ಗಳ ವಿರುದ್ಧ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 1860 (U/s 143, 147, 148, 323, 324, 379, 504, 506), ಅಟ್ರಾಸಿಟಿ ಕೇಸ್, ಐಪಿಸಿ ಸೆಕ್ಷನ್ 1989 (u/s-3(1), (r)(s), 3(2)(v-a), IPC 1860(u/s-149 ರಡಿ ಪ್ರಕರಣ ದಾಖಲಿಸಲಾಗಿದೆ.
ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:01 pm, Thu, 7 December 23