ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್​​​ ಆಗಿ ಡಿ. ತ್ರಿವೇಣಿ ಆಯ್ಕೆ: ರಾಜ್ಯದ ಅತಿ ಕಿರಿಯ ಮೇಯರ್​ ಇವರೇ ನೋಡಿ

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ (Mayor) ಆಗಿ ಕಾಂಗ್ರೆಸ್ ಸದಸ್ಯೆಯಾಗಿರುವ ಡಿ. ತ್ರಿವೇಣಿ ಆಯ್ಕೆ ಆಗಿದ್ದು,  ರಾಜ್ಯದಲ್ಲೇ ಅತಿ ಕಿರಿಯ ವಯಸ್ಸಿನ ಮೇಯರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Follow us
|

Updated on:Mar 29, 2023 | 3:44 PM

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ (Mayor) ಆಗಿ ಕಾಂಗ್ರೆಸ್ ಸದಸ್ಯೆಯಾಗಿರುವ ಡಿ. ತ್ರಿವೇಣಿ ಆಯ್ಕೆ ಆಗಿದ್ದು, ರಾಜ್ಯದಲ್ಲೇ ಅತಿ ಕಿರಿಯ ವಯಸ್ಸಿನ ಮೇಯರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಮ್ಮ 23ನೇ ವಯಸ್ಸಿಗೆ ಬಳ್ಳಾರಿಯ 4ನೇ ವಾರ್ಡ್​ನ ಸದಸ್ಯೆ ಆಗಿ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಆಗಿ ಬಿ.ಜಾನಕಿ ಅವಿರೋಧ ಆಯ್ಕೆ ಆಗಿದ್ದಾರೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಳ್ಳಾರಿ ಮೇಯರ್​​ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಿ.ತ್ರಿವೇಣಿ ಪರ 28 ಮತ ಚಲಾವಣೆ ಆಗಿದ್ದರೆ, ಬಿಜೆಪಿಯಿಂದ ಮೇಯರ್ ಅಭ್ಯರ್ಥಿಯಾಗಿದ್ದ ನಾಗರತ್ನಗೆ 16 ಮತ ಚಲಾವಣೆ ಮಾಡಲಾಗಿದೆ. ಅತ್ಯಂತ ಕಿರಿಯ ವಯಸ್ಸಿನಲ್ಲೇ ಬಳ್ಳಾರಿ ಮೇಯರ್​ ಪಟ್ಟಕ್ಕೇರುವ ಮೂಲಕ ತ್ರಿವೇಣಿ ದಾಖಲೆ ಬರೆದಿದ್ದಾರೆ. ಪ್ಯಾರಾ ಮೆಡಿಕಲ್​ ವಿದ್ಯಾಭ್ಯಾಸ ಮಾಡಿರುವ ಡಿ. ತ್ರಿವೇಣಿ, 2022ರಲ್ಲಿ ನಡೆದಿದ್ದ ಪಾಲಿಕೆ ಚುನಾವಣೆಯಲ್ಲಿ 4ನೇ ವಾರ್ಡ್​​ನಿಂದ  ಸ್ಪರ್ಧಿಸುವ ಮೂಲಕ 501 ಮತಗಳಿಂದ ಗೆದಿದ್ದರು. ಇನ್ನೊಂದು ವಿಶೇಷವೆಂದರೆ ತ್ರಿವೇಣಿ ಅವರ ಸುಶೀಲಾ ಬಾಯಿ ಕೂಡ ಈ ಹಿಂದೆ ಮೇಯರ್​ ಆಗಿದ್ದರು.

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್​​ನಿಂದ 6 ಜನ ಆಕಾಂಕ್ಷಿಗಳ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಉಮಾದೇವಿ ಶಿವರಾಜ್, ತ್ರೀವೇಣಿ, ಕುಬೇರ, ಮಿಂಚು ಶ್ರೀನಿವಾಸ್ ಹಾಗೂ ಶ್ವೇತಾರಿಂದ ಮೇಯರ್ ಸ್ಥಾನಕ್ಕೆ ರೇಸ್​ನಲ್ಲಿದ್ದರು. ಇವರೆಲ್ಲರನ್ನು ಹಿಂದಿಕ್ಕಿ ತ್ರೀವೇಣಿ ಅವರು ಮೇಯರ್​ ಆಗಿದ್ದಾರೆ.

ಇದನ್ನೂ ಓದಿ: Bellary Mayor Election: ಇಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್​ ಎಲೆಕ್ಷನ್​

ಕಳೆದ ವರ್ಷ 2022ರ ಮಾರ್ಚ್​​ನಲ್ಲಿ ಮಹಾನಗರ ಪಾಲಿಕೆ ಚುನಾವಣೆ ನಡೆದಿದ್ದು, ಮೇಯರ್​ ಆಗಿ 34ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಎಂ. ರಾಜೇಶ್ವರಿ ಸುಬ್ಬರಾಯುಡು, ಉಪಮೇಯರ್​ ಆಗಿ 37ನೇ ವಾರ್ಡ್‌ನ ಮಾಲನ್ ಬೀ ಆಯ್ಕೆಯಾಗಿದ್ದರು. ಈಗ ಮೇಯರ್​, ಉಪಮೇಯರ್ ಅಧಿಕಾರವಧಿ 1 ವರ್ಷ ಪೂರೈಸಿದ ಹಿನ್ನೆಲೆ ಇಂದು ಚುನಾವಣೆ ನಡೆದಿದೆ. ಸದ್ಯ ಮಹಾನಗರ ಪಾಲಿಯ 39 ವಾರ್ಡ್‌ಗಳ ಪೈಕಿ 21 ಕಾಂಗ್ರೆಸ್ (Congress), 13 ಬಿಜೆಪಿ (BJP), 05 ಜನ ಪಕ್ಷೇತರರು ಸದಸ್ಯರು ಗೆಲವು ಸಾಧಿಸಿದ್ದಾರೆ.

ಉಪ ಮೇಯರ್ ಸ್ಥಾನಕ್ಕೆ 3 ಜನ ಪಾಲಿಕೆ ಸದಸ್ಯರ ಮಧ್ಯೆ ಪೈಪೋಟಿ ನಡೆದಿತ್ತು. ಉಪ ಮೇಯರ್ ಸ್ಥಾನಕ್ಕೆ ಶಶಿಕಲಾ ಜಗನ್ನಾಥ, ಜಾನಕಿ,‌ ರತ್ನಮ್ಮ ಪ್ರಬಲ ಆಕಾಂಕ್ಷಿಗಳಾಗಿದ್ದರು. ಮೇಯರ್ ಎಲೆಕ್ಷನ್‌ಗೆ ಬಿಜೆಪಿಯಿಂದಲೂ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಇದನ್ನೂ ಓದಿ: ಕೇಸರಿ ಪಡೆಗೆ ಮತ್ತೊಂದು ಶಾಕ್​: ಕಾಂಗ್ರೆಸ್​ನತ್ತ ಮುಖ ಮಾಡಿದ ಬಿಜೆಪಿ ಹಾಲಿ ಶಾಸಕ, ಮಾತುಕತೆ ಫೈನಲ್​

ಮೇಯರ್ ಸ್ಥಾನಕ್ಕೆ ಎಸ್​ಸಿ, ಉಪ ಮೇಯರ್ ಸ್ಥಾನಕ್ಕೆ ಎಸ್​ಟಿ ಮೀಸಲು ಘೋಷಣೆ ಮಾಡಲಾಗಿದೆ. ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್​ ಬಹುಮತ ಬಂದಿದ್ದು, ಇದರ ಜೊತೆಗೆ ಐವರು ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗ 26 ಸದಸ್ಯರ ಬಲ ಹೊಂದಿರುವ ಕಾಂಗ್ರೆಸ್‌ಗೆ ಮೇಯರ್ ಗದ್ದುಗೆ ಎರೆದಿದೆ.

ವಿಧಾನಸಭೆ ಚುನಾವಣೆ ಹೊತ್ತಲ್ಲಿ ಪ್ರತಿಷ್ಠೆಯಾದ ಮೇಯರ್​ ಚುನಾವಣೆ

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮಧ್ಯೆ ಗಣಿ ನಾಡಲ್ಲಿ ಪೈಪೋಟಿ ಏರ್ಪಟ್ಟಿತ್ತು. ನಾಯಕರು ಚುನಾವಣೆ ಅಖಾಡಕ್ಕಿಳಿದಿದ್ದು, ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್​ ಮಧ್ಯೆ ತೀರ್ವ ಪೈಪೋಟಿ ಏರ್ಪಟ್ಟಿತ್ತು. ಕಳೆದ ಮೇಯರ್​ ಚುನಾವಣೆಯಲ್ಲಿ ಆಪರೇಷನ್​ ಕಲಮದ ಭಯದಲ್ಲಿ ಕಾಂಗ್ರೆಸ್​ ತನ್ನ ಸದಸ್ಯರನ್ನು ರೆಸಾರ್ಟ್​​ಗೆ ಕರೆದೊಯ್ದು ಹಿಡಿದಿಟ್ಟುಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:19 pm, Wed, 29 March 23

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ