AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ವಿದೇಶಾಂಗ ಸಚಿವರ ಹೇಳಿಕೆ ಖಂಡಿಸಿ ಕರ್ನಾಟಕದಲ್ಲಿ ಬಿಜೆಪಿ ಪ್ರತಿಭಟನೆ; ಡಿ.ಕೆ.ಶಿವಕುಮಾರ್ ವಿರುದ್ಧವೂ ಆಕ್ರೋಶ

ಪಾಕಿಸ್ತಾನದ ಬಗ್ಗೆ ಎಸ್ ಜೈಶಂಕರ್ ಅವರ ಟೀಕೆಯ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ ಪಾಕ್ ವಿದೇಶಾಂಗ ಸಚಿವರ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಪಾಕ್ ವಿದೇಶಾಂಗ ಸಚಿವರ ಹೇಳಿಕೆ ಖಂಡಿಸಿ ಕರ್ನಾಟಕದಲ್ಲಿ ಬಿಜೆಪಿ ಪ್ರತಿಭಟನೆ; ಡಿ.ಕೆ.ಶಿವಕುಮಾರ್ ವಿರುದ್ಧವೂ ಆಕ್ರೋಶ
ಪಾಕ್ ವಿದೇಶಾಂಗ ಸಚಿವರ ವಿರುದ್ಧ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ
TV9 Web
| Edited By: |

Updated on: Dec 17, 2022 | 3:06 PM

Share

ಬೆಂಗಳೂರು: ಭಯೋತ್ಪಾದನೆಯನ್ನು ಬೆಂಬಲಿಸುವ ದೇಶ ಎಂದು ಪಾಕಿಸ್ತಾನ (Pakistan)ದ ವಿರುದ್ಧ ವಿಶ್ವಸಂಸ್ಥೆ (United Nations)ಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ (S.Jaishankar) ಗುಡುಗಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto Zardari) ಅವರು ನ್ಯೂಯಾರ್ಕ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಪಾಕಿಸ್ತಾನದ ಬಗ್ಗೆ ಎಸ್ ಜೈಶಂಕರ್ ಅವರ ಟೀಕೆಯ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದರು. ಈ ಬಗ್ಗೆ ಖಂಡನೆ ವ್ಯಕ್ತಪಡಿಸುತ್ತಿರುವ ಬಿಜೆಪಿ ಪ್ರತಿಭಟನೆ (BJP Protest)ಗಳನ್ನು ನಡೆಸುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪ್ರತಿಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಬಿಲಾವಲ್ ಭುಟ್ಟೋ ಹೇಳಿಕೆಗೆ ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಯಿತು. ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಕ್ ಬಗ್ಗೆ ಮೃಧು ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧವೂ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕತ್ವ ರದ್ದು ಪಡಿಸಿ ಡಿಕೆಶಿ ಬಂಧನಕ್ಕೆ ಆಗ್ರಹ

ಶಿವಮೊಗ್ಗ: ಮೋದಿಯವರ ಮೇಲೆ ವೈಯಕ್ತಿಕ ದಾಳಿ ನಡೆಸಿದ ಭುಟ್ಟೋ ಮತ್ತು ಶಂಕಿತ ಉಗ್ರ ಶಾರೀಕ್ ಬಗ್ಗೆ ಹೇಳಿಕೆ ನೀಡಿದ ಡಿ.ಕೆ ಶಿವಕುಮಾರ್ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಶಿವಪ್ಪನಾಯಕ ವೃತ್ತದಲ್ಲಿ ಯುವ ಮೋರ್ಚಾ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಕುಕ್ಕರ್ ಬ್ಲಾಸ್ಟ್​​ನ ರೂವಾರಿ ಶಾರೀಕ್ ಮತ್ತು ಉಗ್ರವಾದಕ್ಕೆ ಡಿಕೆಶಿ ಬೆಂಬಲ ನೀಡಿದ್ದಾರೆ. ಇದು ವ್ಯಕ್ತಿಯ ಮಾನಸಿಕತೆ ಅಲ್ಲ, ಒಂದು ಪಕ್ಷದ ಮಾನಸಿಕತೆ ಎಂದು ಟೀಕಿಸಿದರು. ಇದೇ ವೇಳೆ ಡಿಕೆಶಿ ಶಾಸಕತ್ವ ರದ್ದು ಪಡಿಸಿ ಯುಎಪಿಎ ಕಾಯ್ದೆಯಡಿ ಬಂಧಿಸಲು ಒತ್ತಾಯಿಸಲಾಯಿತು.

ಇದನ್ನೂ ಓದಿ: ಭಾರತದ ಟೀಕೆಗೆ ಪ್ರತಿಕ್ರಿಯೆಯಾಗಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ಮಾಡಿದ ಪಾಕ್ ವಿದೇಶಾಂಗ ಸಚಿವ

ಇಂತಹ ಹೇಳಿಕೆ ನೀಡಿದರೆ ಪರಿಣಾಮ ನೆಟ್ಟಗಿರಲ್ಲ

ರಾಯಚೂರು: ಮೋದಿ ವಿರುದ್ಧ ಪಾಕ್ ಸಚಿವ ವಿವಾದಿತ ಹೇಳಿಕೆ ವಿಚಾರವಾಗಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ನಗರದ ಅಂಬೇಡ್ಕರ್ ಸರ್ಕಲ್​ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಭುಟೋ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು. ಇದೇ ವೇಳೆ ಪಾಕ್ ವಿರುದ್ಧ ಘೋಷಣೆ ಕೂಗಲಾಯಿತು.

ಈ ವೇಳೆ ಮಾತನಾಡಿದ ರಾಯಚೂರು ನಗರ ಶಾಸಕ‌‌ ಡಾ.ಶಿವರಾಜ್ ಪಾಟೀಲ್, ಭಯೋತ್ಪಾದನೆ ಪರ ಮಾತನಾಡಿರುವುದು ಖಂಡನೀಯ. ಪಕ್ಷಾತೀತವಾಗಿ ನಾವೆಲ್ಲರೂ ಈ ಹೇಳಿಕೆ ಖಂಡಿಸುತ್ತೇವೆ. ಜಗತ್ತಿನಲ್ಲೇ ನಮ್ಮತ್ತ ತಿರುಗಿ ನೋಡುವಂತೆ ‌ಮಾಡಿದ ನಾಯಕನ ಜನಪ್ರೀಯತೆ ನೋಡಿ ಪಾಕ್ ಕಂಗಾಲಾಗಿದೆ. ಪಾಕ್ ಆರ್ಥಿಕ ಮತ್ತು ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜನರ ದಿಕ್ಕು ತಪ್ಪಿಸಲು ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಇಂತಹ ಹೇಳಿಕೆ ಕೊಟ್ಟರೆ ಮುಂದೆ ಪರಿಣಾಮ ನೆಟ್ಟಗೆ ಇರಲ್ಲ ಎಂದರು.

ಮಂಡ್ಯದಲ್ಲಿ ಭುಟ್ಟೋ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು

ಮಂಡ್ಯ: ಬಿಲಾವಲ್ ಭುಟ್ಟೋ ಹೇಳಿಕೆ ಖಂಡಿಸಿ ಬೀದಿಗಿಳಿದ ಮಂಡ್ಯದ ಬಿಜೆಪಿ ಕಾರ್ಯಕರ್ತರು, ಮಾನವ ಸರಪಳಿ ಮೂಲಕ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಬಿಲಾವಲ್ ಭುಟ್ಟೋ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಭುಟ್ಟೋರನ್ನ ವಜಾಮಾಡುವಂತೆ ಆಗ್ರಹಿಸಿದರು. ಇದೇ ವೇಳೆ ಬಿಲಾವಲ್ ಭುಟ್ಟೋ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ ಕ್ಷಮೆಯಾಚಿಸುವಂತೆ ಆಗ್ರಹಿಸಿದರು. ಬಿಜೆಪಿ ಮುಖಂಡ ಮಂಜುನಾಥ್ ಚಂದಗಾಲು ಶಿವಣ್ಣ, ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿಯಾದರು.

ಇದನ್ನೂ ಓದಿ: ಚೀನಾದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣದಲ್ಲಿ ಭಾರಿ ಹೆಚ್ಚಳ, ಲಾಕ್​ಡೌನ್ ವಿರುದ್ಧ ನಡೆದ ಪ್ರತಿಭಟನೆಗಳಿಗೆ ‘ವಿದೇಶಿ ಶಕ್ತಿಗಳನ್ನು’ ದೂರಿದ ಉನ್ನತಾಧಿಕಾರಿ

ಹಾಸನದಲ್ಲಿ ಭುಟೋ ಮತ್ತು ಡಿಕೆಶಿ ವಿರುದ್ಧ ಆಕ್ರೋಶ

ಹಾಸನ: ಪಾಕಿಸ್ತಾನ ಸರ್ಕಾರದ ಮಂತ್ರಿ ಬಿಲಾವಲ್ ಭುಟ್ಟೋ ಹಾಗೂ ಶಾರಿಕ್ ಪರ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಹಾಸನದಲ್ಲಿ ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಬಿಲಾವಲ್ ಭುಟೋ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಪ್ರೀತಂಗೌಡ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸಿ ಕೂಡಲೇ ಕ್ಷಮೆ ಕೇಳುವಂತೆ ಆಗ್ರಹಿಸಲಾಯಿತು.

ಪ್ರಧಾನಿ ‌ನರೇಂದ್ರ ಮೋದಿ ಪರ ಘೋಷಣೆ

ಬಾಗಲಕೋಟೆ: ಪ್ರಧಾನಿ ಮೋದಿ ಬಗ್ಗೆ ಪಾಕ್ ವಿದೇಶಾಂಗ ಸಚಿವ ಅವಹೇಳನಕಾರಿ ಖಂಡಿಸಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ತಕರ್ತರಿಂದ ಪ್ರತಿಭಟನೆ ನಡೆಯಿತು. ಬಸವೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ‌ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗಿದರು. ಈ ವೇಳೆ ಬಿಜೆಪಿ ಜಿಲ್ಲಾ ಮುಖಂಡರು ಇದ್ದರು.

ರಸ್ತೆ ತಡೆಮಾಡಿ ಪ್ರತಿಭಟಿಸಿದ ಬಿಜೆಪಿ

ಕೋಲಾರ: ಪಾಕಿಸ್ತಾನದ ವಿದೇಶಾಂಗ ಸಚಿವರ ಹೇಳಿಕೆ ಖಂಡಿಸಿ ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಯಿತು. ಕೋಲಾರ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ರಸ್ತೆಯನ್ನೂ ತಡೆ ಮಾಡಲಾಯಿತು. ಇದೇ ವೇಳೆ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು.

ಇದನ್ನೂ ಓದಿ: DC ಕಚೇರಿ ಎದುರು ಪ್ರತಿಭಟನೆಗೆ ಬಂದವರು ಕಸ ಹಾಕಿ ಹೋದ್ರು, ಸ್ವಚ್ಛಗೊಳಿಸಿದ ಪೊಲೀಸ್ ಇನ್ಸ್​ಪೆಕ್ಟರ್

ರಾಯಲ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು

ಬಳ್ಳಾರಿ: ಪಾಕಿಸ್ತಾನದ ಸಚಿವ ಭುಟ್ಟೋ ಜರ್ದಾರಿ ನಿನ್ನೆ ಮೋದಿ ಬಗ್ಗೆ ಹಗುರವಾಗಿ ಮಾತನಾಡಿದ್ದರು. ಈ ಹೇಳಿಕೆ ಖಂಡಿಸಿ ಜಿಲ್ಲೆಯಲ್ಲೂ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು. ರಾಯಲ್ ವೃತ್ತದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ಭುಟ್ಟೋ ಜರ್ದಾರಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಧಿಕ್ಕಾರವೂ ಕೂಗಲಾಯಿತು.

ಭುಟ್ಟೋ ಪ್ರಧಾನಿ ಮೋದಿ ಕ್ಷಮೆ ಕೇಳಬೇಕೆಂದು ಆಗ್ರಹ

ಧಾರವಾಡ: ಪ್ರಧಾನಿ ಮೋದಿ ಬಗ್ಗೆ ಹೇಳಿಕೆ ನೀಡಿದ ಭುಟ್ಟೋ ವಿರುದ್ಧ ಆಕ್ರೋಶಗೊಂಡಿರುವ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಭುಟ್ಟೋ ಮೋದಿ ಅವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಪಾಕ್‌ ವಿರುದ್ಧ ಘೋಷಣೆ ಹಾಕಲಾಯಿತು.

ಇದೇ ರೀತಿ ಕಾರವಾರ, ದಾವಣಗೆರೆ, ಚಿತ್ರದುರ್ಗ, ವಿಜಯಪುರ ಜಿಲ್ಲೆಯ ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು, ಯುವ‌ ಮೋರ್ಚಾ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ ಪಾಕ್ ವಿರುದ್ಧ, ಪಾಕ್ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಭಾವ ಚಿತ್ರಕ್ಕೆ ಬೆಂಕಿಯೂ ಹಚ್ಚಲಾಯಿತು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ