AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ರಾಜ್ಯಾಧ್ಯಕ್ಷರನ್ನ ಬರಮಾಡಿಕೊಳ್ಳಲು ಶೃಂಗಾರಗೊಂಡ ಬಿಜೆಪಿ ಕಚೇರಿ, ಜಗನಾಥ್ ಭವನದಲ್ಲಿ ಹಬ್ಬದ ಸಂಭ್ರಮ

ಕರ್ನಾಟಕದ ಬಿಜೆಪಿಯಲ್ಲೀಗ ಯುವ ಹವಾ. ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಿಸಲಾಗಿದೆ. ಅವರು ಅಧಿಕಾರ ವಹಿಸಿಕೊಳ್ಳುವ ಕ್ಷಣ. ಬುಧವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯುವ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಭರ್ಜರಿ ಸಿದ್ದತೆಯನ್ನೇ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 6.30ರಿಂದಲೇ ಹೋಮ-ಹವನ ಶುರುವಾಗಿವೆ. ಹಾಗಾದ್ರೆ, ಇನ್ನು ನೂತನ ರಾಜ್ಯಾಧ್ಯಕ್ಷರನ್ನು ಬರಮಾಡಿಕೊಳ್ಳಲು ಬಿಜೆಪಿ ಕಚೇರಿ ಹೇಗೆಲ್ಲ ಸಿದ್ಧತೆಗೊಂಡಿದೆ ಎನ್ನುವುದನ್ನು ವಿಡಿಯೋಗಳನ್ನು ನೋಡಿ.

ನೂತನ ರಾಜ್ಯಾಧ್ಯಕ್ಷರನ್ನ ಬರಮಾಡಿಕೊಳ್ಳಲು ಶೃಂಗಾರಗೊಂಡ ಬಿಜೆಪಿ ಕಚೇರಿ, ಜಗನಾಥ್ ಭವನದಲ್ಲಿ ಹಬ್ಬದ ಸಂಭ್ರಮ
ಬಿಜೆಪಿ ಕಚೇರಿ
ರಮೇಶ್ ಬಿ. ಜವಳಗೇರಾ
|

Updated on: Nov 15, 2023 | 8:47 AM

Share

ಬೆಂಗಳೂರು, (ನವೆಂಬರ್ 03): ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ (BY Vijayendra) ಅವರು ಬುಧವಾರ (ನವೆಂಬರ್‌ 15) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಬಿ.ವೈ.ವಿಜಯೇಂದ್ರ ಅವರು ಪದಗ್ರಹಣ (Karnataka BJP President) ಮಾಡಲಿದ್ದು, ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ (BJP Office) ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಇನ್ನು ವಿಜಯೇಂದ್ರ ಅವರ ಪದಗ್ರಹಣ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಳಗ್ಗೆ 6.30ರಿಂದಲೇ ಹೋಮ-ಹವನ ಶುರುವಾಗಿವೆ. ಕರ್ನಾಟಕದ ಬಿಜೆಪಿ ಕಚೇರಿಯಲ್ಲಿ ಈಗ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಪಕ್ಷಕ್ಕೆ ಹೊಸ ಸಾರಥಿಯಾಗಿ ವಿಜಯೇಂದ್ರ ಅವರು ನೇಮಕಗೊಂಡು ಬುಧವಾರ ನಿರ್ಗಮಿತ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ಬಿಜೆಪಿ ಕಚೇರಿಯನ್ನು ತೋರಣದಿಂದ ಅಲಂಕರಿಸಲಾಗಿದೆ. ಹಾಗೇ ಜಗನಾಥ್ ಭವನದ ಮುಂದೆ ರಂಗೋಲಿ ಬಿಡಿಸಲಾಗಿದೆ. ಆರು ತಿಂಗಳ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಬಿಜೆಪಿ ಕಚೇರಿಯಲ್ಲಿ ಸಂಭ್ರಮವೇ ಮಾಯವಾಗಿತ್ತು. ಈಗ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆ ಸುಣ್ಣ ಬಣ್ಣಗಳ ಜತೆಗೆ ದೀಪಗಳಿಂದಲೂ ಕರ್ನಾಟಕ ಬಿಜೆಪಿ ಕಚೇರಿ ಕಂಗೊಳಿಸುತ್ತಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ