ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಬಿಜೆಪಿ ಕನಸಿನ ಕೂಸು: ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ
ಬಹುತೇಕರಿಗೆ ಕ್ಷೇತ್ರ ಮುಖ್ಯವಾಗಿದೆ, ಬರಲು ಆಗಲ್ಲ ಅಂದಿದ್ದಾರೆ. ತಮ್ಮ ಕ್ಷೇತ್ರಕ್ಕೆ ಬಂದಾಗ ಬರುವುದಾಗಿ ಶಾಸಕರು ಹೇಳಿದ್ದಾರೆ. ಬೆಂಗಳೂರಿನಲ್ಲೆ ಇರುತ್ತೇನೆ, ನಮಗೆ ಜವಾಬ್ದಾರಿ ಕೊಟ್ಟಿದ್ದಾರೆ. ನಾವೆಲ್ಲರೂ ಪ್ರಚಾರದಲ್ಲಿ ಭಾಗಿಯಾಗುತ್ತೇವೆ ಎಂದು ಚುನಾವಣಾ ಪ್ರಚಾರ ಸಮಿತಿಯಲ್ಲಿ ಕೆಲವರಿಗೆ ಅವಕಾಶ ನಿರಾಕರಣೆ ಮಾಡಿದ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ ಹೇಳಿದರು.
ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madalu Virupakshappa) ತಪ್ಪು ಮಾಡಿದ್ದಾರೆ, ಕಾನೂನಿನ ಪ್ರಕಾರ ಶಿಕ್ಷೆ ಆಗಲಿದೆ. ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಹೆಚ್ಚು ಮಾತನಾಡಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ (Shobha Karandlaje) ಹೇಳಿದ್ದಾರೆ. ಚುನಾವಣಾ ಪ್ರಚಾರ ಸಮಿತಿಯಲ್ಲಿ ಕೆಲವರಿಗೆ ಅವಕಾಶ ನಿರಾಕರಣೆ ಮಾಡಿದ ವಿಚಾರವಾಗಿ ಮಾತನಾಡಿದ ಅವರು ಬಹುತೇಕರಿಗೆ ಕ್ಷೇತ್ರ ಮುಖ್ಯವಾಗಿದೆ, ಬರಲು ಆಗಲ್ಲ ಅಂದಿದ್ದಾರೆ. ತಮ್ಮ ಕ್ಷೇತ್ರಕ್ಕೆ ಬಂದಾಗ ಬರುವುದಾಗಿ ಶಾಸಕರು ಹೇಳಿದ್ದಾರೆ. ಬೆಂಗಳೂರಿನಲ್ಲೆ ಇರುತ್ತೇನೆ, ನಮಗೆ ಜವಾಬ್ದಾರಿ ಕೊಟ್ಟಿದ್ದಾರೆ. ನಾವೆಲ್ಲರೂ ಪ್ರಚಾರದಲ್ಲಿ ಭಾಗಿಯಾಗುತ್ತೇವೆ ಎಂದು ಹೇಳಿದರು.
ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿಜೆಪಿ ತೊರೆದ ಬಳಿಕ ಎಂಎಲ್ಸಿ ಪುಟ್ಟಣ್ಣ ಮೂಲ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ವಿಚಾರವಾಗಿ ಮಾತನಾಡಿದ ಅವರು ಕೈಗೆಟುಕದ ದ್ರಾಕ್ಷಿ ಹುಳಿ ಅಂತಾ ಒಂದು ಗಾದೆ ಇದೆ. ಬಿಜೆಪಿಯಲ್ಲಿ ಪುಟ್ಟಣ್ಣ ವಿಧಾನಪರಿಷತ್ ಸದಸ್ಯ ಆಗಿದ್ದರು. ಯಾವುದೋ ಬೇರೆ ಲಾಭಕ್ಕಾಗಿ ಕಾಂಗ್ರೆಸ್ಗೆ ಹೋಗಿದ್ದಾರೆ. ಇನ್ನು ಸಚಿವ ವಿ.ಸೋಮಣ್ಣನವರು ಪಕ್ಷದಿಂದ ಅಂತರ ಕಾಯ್ದುಕೊಂಡಿಲ್ಲ. ಪಕ್ಷದಲ್ಲಿ ಸಚಿವ ಸೋಮಣ್ಣಗೆ ಯಾವುದೇ ಅಸಮಾಧಾನ ಇಲ್ಲ. ಚುನಾವಣೆ ಹಿನ್ನೆಲೆ ತಮ್ಮ ಕ್ಷೇತ್ರದಲ್ಲಿ ಹೆಚ್ಚು ಗಮನ ಕೊಟ್ಟಿದ್ದಾರೆ ಎಂದು ತಿಳಿಸಿದರು.
ನಾಳೆ ಪ್ರಧಾನಿ ಮೋದಿಯವರಿಂದ ದಶಪಥ ರಸ್ತೆ ಲೋಕಾರ್ಪಣೆ ವಿಚಾರವಾಗಿ ಮಾತನಾಡಿ ದಶಪಥ ಹೆದ್ದಾರಿಯಿಂದ ಮೈಸೂರು ಇನ್ನಷ್ಟು ಅಭಿವೃದ್ಧಿ ಆಗಲಿದೆ. ದಶಪಥ ಹೆದ್ದಾರಿ ಬಿಜೆಪಿಯ ಕನಸಿನ ಕೂಸು. ಮಾಜಿ ಪ್ರಧಾನಿ ದೇವೇಗೌಡರು ನೈಸ್ ಕಂಪನಿ ಹಿಡಿದು ತಂದರು. ಬೆಂಗಳೂರು ಬಿಟ್ಟು ನೈಸ್ ಮುಂದಕ್ಕೆ ಹೋಗಲೇ ಇಲ್ಲ. ಮೈಸೂರಿಗೆ ಆದ್ಯತೆ ನೀಡುವ ಬಗ್ಗೆ ನಮ್ಮ ನಾಯಕರ ಒತ್ತಾಯ ಇತ್ತು. 2018ರ ಫೆ.19ರಂದು ಹೆದ್ದಾರಿ ಯೋಜನೆಯನ್ನು ಪ್ರಧಾನಿ ಮೋದಿ ಘೋಷಿಸಿದ್ದರು. 2018ರ ಮಾ.24ರಂದು ಯಶವಂತಪುರ ಕ್ಷೇತ್ರದಲ್ಲಿ ಶಿಲಾನ್ಯಾಸ ಮಾಡಲಾಗಿತ್ತು. ದಶಪಥ ಹೆದ್ದಾರಿಯಿಂದ 6,500 ಉದ್ಯೋಗಗಳು ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ದಶಪಥದಲ್ಲಿ ಮಳಿಗೆ, ಇತರೆ ಸೌಕರ್ಯ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಉತ್ತರ ಭಾರತ, ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಚುನಾವಣೆ ಗೆದ್ದಿದ್ದೇವೆ. ಈಗ ದಕ್ಷಿಣ ಭಾರತದಲ್ಲಿ ಪಕ್ಷವನ್ನು ಗೆಲ್ಲಿಸುವ ಗುರಿ ಹೊಂದಿದ್ದೇವೆ. ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಕಾಣಿಸುತ್ತಿದೆ. ವಿಜಯ ಸಂಕಲ್ಪ ಯಾತ್ರೆಗೆ ನಿರೀಕ್ಷೆಗೂ ಮೀರಿ ಜನಸ್ಪಂದನೆ ಸಿಗುತ್ತಿದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:58 pm, Sat, 11 March 23