ಹೊಸಕೋಟೆ ಶಾಸಕ‌ ಶರತ್ ಬಚ್ಚೇಗೌಡ ಪ್ರತಿಭಟನೆಗೆ ಮಣಿದ ಸಿಎಂ ಬೊಮ್ಮಾಯಿ, ಅನುದಾನ ಬಿಡುಗಡೆಗೆ ಸೂಚನೆ

ತಮ್ಮ ಕ್ಷೇತ್ರದ 20 ಕ್ಕೂ ಹೆಚ್ಚು ರಸ್ತೆಗಳ ಕಾಮಗಾರಿಗಳಿಗೆ ಅನುದಾನ ಬೀಡುಗಡೆಗೆ ಮೀನಾಮೇಷ ಎನಿಸುತ್ತಿದ್ದ ಕರ್ನಾಟಕ ಸರ್ಕಾರಕ್ಕೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಪ್ರತಿಭಟನೆಯ ಬಿಸಿ ಮುಟ್ಟಿಸಿ ಅನುದಾನ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೊಸಕೋಟೆ ಶಾಸಕ‌ ಶರತ್ ಬಚ್ಚೇಗೌಡ ಪ್ರತಿಭಟನೆಗೆ ಮಣಿದ ಸಿಎಂ ಬೊಮ್ಮಾಯಿ, ಅನುದಾನ ಬಿಡುಗಡೆಗೆ ಸೂಚನೆ
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಶಾಸಕ ಶರತ್ ಬಚ್ಚೇಗೌಡ
Follow us
Rakesh Nayak Manchi
|

Updated on:Mar 04, 2023 | 4:24 PM

ಹೊಸಕೋಟೆ: ತಮ್ಮ ಕ್ಷೇತ್ರದ 20 ಕ್ಕೂ ಹೆಚ್ಚು ರಸ್ತೆಗಳ ಕಾಮಗಾರಿಗಳಿಗೆ (Hosakote Road Works) ಅನುದಾನ ಬೀಡುಗಡೆಗೆ ಮೀನಾಮೇಷ ಎನಿಸುತ್ತಿದ್ದ ಕರ್ನಾಟಕ ಸರ್ಕಾರಕ್ಕೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ (Sharath Bache Gowda) ಅವರು ಪ್ರತಿಭಟನೆಯ ಬಿಸಿ ಮುಟ್ಟಿಸಿ ಅನುದಾನ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 27 ರಸ್ತೆಗಳ ಕಾಮಗಾರಿಗೆ 10 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಆದೇಶಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಶಾಸಕ ಶರತ್ ಬಚ್ಚೇಗೌಡ ಅವರು ಅನುದಾನ ಬಿಡುಗಡೆಯಲ್ಲಿ ಆಗುತ್ತಿರುವ ತಾರತಮ್ಯದ ಬಗ್ಗೆ ಸಿಡಿದೆದ್ದಿರು. ಅಭಿವೃದ್ಧಿ ವಿಚಾರದಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ತಾರತಮ್ಯವಾಗುತ್ತಿದೆ. ಸಿಎಂ ಅವರೇ ಖುದ್ದು ಅನುದಾನ ನೀಡುವುದಾಗಿ ಸಹಿ ಹಾಕಿದ್ದರು. ಆದ್ರೆ ತಾಲೂಕಿಗೆ ಬಂದಿದ್ದ ಅನುದಾನವನ್ನ ಎಂಟಿಬಿ ನಾಗರಾಜ್ ತಡೆ ಹಿಡಿದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದರು. ಅಲ್ಲದೆ, ಅನುದಾನಕ್ಕೆ ತಡೆ ನೀಡಿದ ಆರೋಪ ಹಿನ್ನಲೆ ವಿಧಾನಸೌಧದ ಆವರಣದಲ್ಲಿ ಅಹೋರಾತ್ರಿ ಏಕಾಂಗಿ ಪ್ರತಿಭಟನೆ ಮಾಡುತ್ತಿದ್ದರು.

ಇದನ್ನೂ ಓದಿ: ಅಭಿವೃದ್ಧಿ ವಿಚಾರದಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ತಾರತಮ್ಯ: ಎಂಟಿಬಿ ನಾಗರಾಜ್ ವಿರುದ್ಧ ಆರೋಪ, ಶರತ್ ಬಚ್ಚೇಗೌಡ ಏಕಾಂಗಿ ಪ್ರತಿಭಟನೆ

10 ಕೋಟಿ ರೂಪಾಯಿ ಅನುದಾನದಲ್ಲಿ ಭಾರಿ ಅಭಿವೃದ್ಧಿ ಆಗುವುದಿಲ್ಲ. ನಾವು, ಸಚಿವ ಎಂಟಿಬಿ ಇಬ್ಬರೂ ಸೇರಿ ಕ್ಷೇತ್ರ ಅಭಿವೃದ್ಧಿ ಮಾಡೋಣ. ಯಾರಿಗೆ ಮತಹಾಕಬೇಕೆಂದು ಕ್ಷೇತ್ರದ ಜನ ತೀರ್ಮಾನ ಮಾಡುತ್ತಾರೆ. ಹೊಸಕೋಟೆ ಜನರು ಸ್ವತಂತ್ರ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದ್ದಾರೆ. ಇದೇ ಕಾರಣಕ್ಕೆ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದರು.

ಇನ್ನು, ಶರತ್ ಬಚ್ಚೇಗೌಡ ಪ್ರತಿಭಟನೆಗೆ ಮಣಿದ ಸಿಎಂ ಬೊಮ್ಮಾಯಿ ಅವರು 27 ರಸ್ತೆಗಳ ಕಾಮಗಾರಿಗೆ 10 ಕೋಟಿ ಬಿಡುಗಡೆಗೆ ಮಾಡುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಆದೇಶಿಸಿದ್ದಾರೆ. ಸದ್ಯ ಅನುದಾನ ಬಿಡುಗಡೆ ಮಾಡಿದ್ದಕ್ಕೆ ಶಾಸಕ ಶರತ್ ಬಚ್ಚೇಗೌಡ, ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:24 pm, Sat, 4 March 23

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ