AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ; ಮಾನನಷ್ಟ ಮೊಕದ್ದಮೆ ಹೂಡುವ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

ಬಿಜೆಪಿ ಮತ್ತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಟಾರ್ಗೆಟ್ ಮಾಡಿದ್ದು, ಟಿಪ್ಪು ನಿಜ ಕನಸುಗಳು ಪುಸ್ತಕದ ಮಾದರಿಯಲ್ಲಿ ‘ಸಿದ್ದು ನಿಜ ಕನಸು’ ಎನ್ನುವ ಪುಸ್ತಕ ಬಿಡುಗಡೆಗೆ ಮುಂದಾಗಿದೆ.

ಇಂದು ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ; ಮಾನನಷ್ಟ ಮೊಕದ್ದಮೆ ಹೂಡುವ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಇಂದು ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ; ಮಾನನಷ್ಟ ಮೊಕದ್ದಮೆ ಹೂಡುವ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
TV9 Web
| Edited By: Rakesh Nayak Manchi|

Updated on:Jan 09, 2023 | 11:43 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಬಿಜೆಪಿ (BJP) ಟಾರ್ಗೆಟ್ ಮಾಡಿಕೊಂಡಿದೆ. ಇಂದು ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು ‘ಸಿದ್ದು ನಿಜ ಕನಸುಗಳು’ ಪುಸ್ತಕ (Siddu Nija Kanasu Book) ಬಿಡುಗಡೆ ಮಾಡಲು ಬಿಜೆಪಿ ಮುಂದಾಗಿದ್ದು, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಸಿದ್ದರಾಮಯ್ಯ (Siddaramaiah) ಎಚ್ಚರಿಕೆ ನೀಡಿದ್ದಾರೆ. ಬಿಜೆಪಿಯವರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ. ಖಡ್ಗ ಹಿಡಿದುಕೊಂಡು ಡ್ರೆಸ್ ಹಾಕಿದ್ದವರು ಯಾರು? ನನ್ನ ತೇಜೋವಧೆ ಮಾಡಲು ಹೀಗೆಲ್ಲಾ ಮಾಡುತ್ತಿದ್ದಾರೆ. ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಬಿಜೆಪಿಯವರಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನೊಂದೆಡೆ, ಬಿಜೆಪಿಯ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ನಿಂತಿದೆ. ಪುಸ್ತಕ ಬಿಡುಗಡೆ ಸಂದರ್ಭದಲ್ಲೇ ಟೌನ್ ಹಾಲ್ ಮುಂದೆ ಬೃಹತ್ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ‘ಸಿದ್ದು ನಿಜ ಕನಸುಗಳು’ ಪುಸ್ತಕ ಸುಟ್ಟು ಪ್ರತಿಭಟಿಸಲು ಸಜ್ಜಾಗುತ್ತಿದ್ದಾರೆ. ಇದಕ್ಕಾಗಿ ಟೌನ್​ಹಾಲ್​ನತ್ತ ಸಿದ್ದರಾಮಯ್ಯ ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ.

ಸಿದ್ದರಾಮಯ್ಯ ಆಪ್ತರಿಂದಲೂ ಪುಸ್ತಕ ಬಿಡುಗಡೆಗೆ ಪ್ಲಾನ್

ಬಿಜೆಪಿಯ ಸಿದ್ದು ನಿಜ ಕನಸುಗಳು ಪುಸ್ತಕದ ಪ್ರತಿಯಾಗಿ  ಸಿದ್ದರಾಮಯ್ಯ ಆಪ್ತರಿಂದಲೂ ಪುಸ್ತಕ ಬಿಡುಗಡೆಗೆ ಪ್ಲ್ಯಾನ್ ಮಾಡಲಾಗುತ್ತಿದೆ. ‘ಸಿದ್ದು ನಿಜ ಕನಸು’ ಪುಸ್ತಕ ಬಿಡುಗಡೆಗೆ ಬೆಂಬಲಿಗರು ಮುಂದಾಗಿದ್ದಾರೆ. ಸದ್ಯ ಪೋಸ್ಟರ್ ಮೂಲಕ ಪುಸ್ತಕದ ಸಾರಾಂಶ ಪ್ರಕಟಿಸಿದ್ದು, ಸಿದ್ದರಾಮಯ್ಯ ಅವಧಿಯ ಕಾರ್ಯಕ್ರಮಗಳ ವಿವರವುಳ್ಳ ಪುಸ್ತಕ ಇದಾಗಿದೆ. ಈಗಾಗಲೇ ಸಿದ್ದರಾಮಯ್ಯ ಆಪ್ತರಿಂದ ಪುಸ್ತಕ ರಚನೆಯ ಕಾರ್ಯ ಆರಂಭವಾಗಿದೆ.

ಇದನ್ನೂ ಓದಿ: Siddu Nija Kanasugalu Book: ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ತಡೆಯುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕೆಪಿಸಿಸಿ

ಸಿದ್ದು ನಿಜ ಕನಸು ಪುಸ್ತಕದ ಸಾರಾಂಶಗಳೇನು?

ಕನ್ನಡರಾಮಯ್ಯನಾಗಿ ಸಿದ್ದು ಕನಸ್ಸು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಛೇರಿ ಮತ್ತು ಜಿಲ್ಲಾ ಕಛೇರಿಗಳನ್ನು ಸಂಪೂರ್ಣ ಗ್ರಾಹಕ ಸ್ನೇಹಿ ಮತ್ತು ಪರಿಸರ ಸ್ನೇಹಿ, ಪಾರದರ್ಶಕ ಆಡಳಿತ ವ್ಯವಸ್ಥೆಯಾದ ಇ-ಆಡಳಿತಕ್ಕೆ ಒಳಪಡಿಸಿದೆ. ಐದು ವರ್ಷಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅನುದಾನವನ್ನು 170 ಕೋಟ ರೂ.ಗಳಿಂದ 367 ಕೋಟಿಗಳಿಗೆ ಹೆಚ್ಚಿಸಿ, ನಾಡು ನುಡಿಯನ್ನು ಉಳಿಸಿ ಬೆಳೆಸಲು ಶ್ರಮಿಸಲಾಗಿದೆ.

ಹಸಿವು ಮುಕ್ತ ಕರ್ನಾಟಕದ ಕನಸು: ಬಡಜನರು ಯಾರ ಬಳಿಯೂ ಕೈಚಾಚದೆ ಸ್ವಾಭಿಮಾನದ ಬದುಕನ್ನು ಸಾಗಿಸಬೇಕೆನ್ನುವುದು ಸಿದ್ದರಾಮಯ್ಯ ಸರ್ಕಾರದ ನಿಜಕ ಕನಸುಗಳು. ಇದಕ್ಕಾಗಿ ಹಸಿವು ಮುಕ್ತ ಕರ್ನಾಟಕದ ಕನಸಿನೊಂದಿಗೆ ಅನ್ನಭಾಗ್ಯ ಯೋಜನೆಯು ರಾಜ್ಯದಲ್ಲಿ ಅನುಷ್ಠಾನಗೊಕಿಸಿದ ಸಿದ್ದು. ಈ ಯೋಜನೆಯಿಂದ 3.85 ಕೋ ಬಡ ಜನರ ಪೌಷ್ಠಿಕತೆ ಉತ್ತಮಗೊಂಡಿದೆ.

ಬಡವರಿಗೆ ಉದ್ಯೋಗಾಭಿವೃದ್ಧಿ ಕನಸು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆ ಬಹುಮುಖ್ಯ ಕಸುಬಾಗಿದ್ದು ಈ ಕ್ಷೇತ್ರದಲ್ಲಿ ಉದ್ಯೋಗಾಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಪ್ರಮುಖ ಯೋಜನೆಗಳಾದ ಕುರಿಗಾಹಿ ಸುರಕ್ಷಾ ಯೋಜನೆ, ಕ್ಷೀರಭಾಗ್ಯ, ಪಶುಭಾಗ್ಯ ಮುಂತಾದವುಗಳ ಮೂಲಕ ಗ್ರಾಮೀಣ ರೈತರಿಗೆ ಸಿದ್ದರಾಮಯ್ಯನವರ ಸರ್ಕಾರವು ಪ್ರೋತ್ಸಾಹ ನೀಡಿದೆ. ಇದರ ಫಲವಾಗಿ ಫಲಾನುಭವಿಗಳ ಸಂಖ್ಯೆಯಲ್ಲಿ ಒಂದು ಲಕ್ಷದಷ್ಟು ಹೆಚ್ಚಳವಾಗಿ 10 ಲಕ್ಷಕ್ಕೆ ಏರಿಕೆಗೊಂಡಿತ್ತು.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 am, Mon, 9 January 23

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್