ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಬಿಜೆಪಿ (BJP) ಟಾರ್ಗೆಟ್ ಮಾಡಿಕೊಂಡಿದೆ. ಇಂದು ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು ‘ಸಿದ್ದು ನಿಜ ಕನಸುಗಳು’ ಪುಸ್ತಕ (Siddu Nija Kanasu Book) ಬಿಡುಗಡೆ ಮಾಡಲು ಬಿಜೆಪಿ ಮುಂದಾಗಿದ್ದು, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಸಿದ್ದರಾಮಯ್ಯ (Siddaramaiah) ಎಚ್ಚರಿಕೆ ನೀಡಿದ್ದಾರೆ. ಬಿಜೆಪಿಯವರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ. ಖಡ್ಗ ಹಿಡಿದುಕೊಂಡು ಡ್ರೆಸ್ ಹಾಕಿದ್ದವರು ಯಾರು? ನನ್ನ ತೇಜೋವಧೆ ಮಾಡಲು ಹೀಗೆಲ್ಲಾ ಮಾಡುತ್ತಿದ್ದಾರೆ. ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಬಿಜೆಪಿಯವರಿಗೆ ಎಚ್ಚರಿಕೆ ನೀಡಿದ್ದಾರೆ.
ಇನ್ನೊಂದೆಡೆ, ಬಿಜೆಪಿಯ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ನಿಂತಿದೆ. ಪುಸ್ತಕ ಬಿಡುಗಡೆ ಸಂದರ್ಭದಲ್ಲೇ ಟೌನ್ ಹಾಲ್ ಮುಂದೆ ಬೃಹತ್ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ‘ಸಿದ್ದು ನಿಜ ಕನಸುಗಳು’ ಪುಸ್ತಕ ಸುಟ್ಟು ಪ್ರತಿಭಟಿಸಲು ಸಜ್ಜಾಗುತ್ತಿದ್ದಾರೆ. ಇದಕ್ಕಾಗಿ ಟೌನ್ಹಾಲ್ನತ್ತ ಸಿದ್ದರಾಮಯ್ಯ ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ.
ಬಿಜೆಪಿಯ ಸಿದ್ದು ನಿಜ ಕನಸುಗಳು ಪುಸ್ತಕದ ಪ್ರತಿಯಾಗಿ ಸಿದ್ದರಾಮಯ್ಯ ಆಪ್ತರಿಂದಲೂ ಪುಸ್ತಕ ಬಿಡುಗಡೆಗೆ ಪ್ಲ್ಯಾನ್ ಮಾಡಲಾಗುತ್ತಿದೆ. ‘ಸಿದ್ದು ನಿಜ ಕನಸು’ ಪುಸ್ತಕ ಬಿಡುಗಡೆಗೆ ಬೆಂಬಲಿಗರು ಮುಂದಾಗಿದ್ದಾರೆ. ಸದ್ಯ ಪೋಸ್ಟರ್ ಮೂಲಕ ಪುಸ್ತಕದ ಸಾರಾಂಶ ಪ್ರಕಟಿಸಿದ್ದು, ಸಿದ್ದರಾಮಯ್ಯ ಅವಧಿಯ ಕಾರ್ಯಕ್ರಮಗಳ ವಿವರವುಳ್ಳ ಪುಸ್ತಕ ಇದಾಗಿದೆ. ಈಗಾಗಲೇ ಸಿದ್ದರಾಮಯ್ಯ ಆಪ್ತರಿಂದ ಪುಸ್ತಕ ರಚನೆಯ ಕಾರ್ಯ ಆರಂಭವಾಗಿದೆ.
ಕನ್ನಡರಾಮಯ್ಯನಾಗಿ ಸಿದ್ದು ಕನಸ್ಸು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಛೇರಿ ಮತ್ತು ಜಿಲ್ಲಾ ಕಛೇರಿಗಳನ್ನು ಸಂಪೂರ್ಣ ಗ್ರಾಹಕ ಸ್ನೇಹಿ ಮತ್ತು ಪರಿಸರ ಸ್ನೇಹಿ, ಪಾರದರ್ಶಕ ಆಡಳಿತ ವ್ಯವಸ್ಥೆಯಾದ ಇ-ಆಡಳಿತಕ್ಕೆ ಒಳಪಡಿಸಿದೆ. ಐದು ವರ್ಷಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅನುದಾನವನ್ನು 170 ಕೋಟ ರೂ.ಗಳಿಂದ 367 ಕೋಟಿಗಳಿಗೆ ಹೆಚ್ಚಿಸಿ, ನಾಡು ನುಡಿಯನ್ನು ಉಳಿಸಿ ಬೆಳೆಸಲು ಶ್ರಮಿಸಲಾಗಿದೆ.
ಹಸಿವು ಮುಕ್ತ ಕರ್ನಾಟಕದ ಕನಸು: ಬಡಜನರು ಯಾರ ಬಳಿಯೂ ಕೈಚಾಚದೆ ಸ್ವಾಭಿಮಾನದ ಬದುಕನ್ನು ಸಾಗಿಸಬೇಕೆನ್ನುವುದು ಸಿದ್ದರಾಮಯ್ಯ ಸರ್ಕಾರದ ನಿಜಕ ಕನಸುಗಳು. ಇದಕ್ಕಾಗಿ ಹಸಿವು ಮುಕ್ತ ಕರ್ನಾಟಕದ ಕನಸಿನೊಂದಿಗೆ ಅನ್ನಭಾಗ್ಯ ಯೋಜನೆಯು ರಾಜ್ಯದಲ್ಲಿ ಅನುಷ್ಠಾನಗೊಕಿಸಿದ ಸಿದ್ದು. ಈ ಯೋಜನೆಯಿಂದ 3.85 ಕೋ ಬಡ ಜನರ ಪೌಷ್ಠಿಕತೆ ಉತ್ತಮಗೊಂಡಿದೆ.
ಬಡವರಿಗೆ ಉದ್ಯೋಗಾಭಿವೃದ್ಧಿ ಕನಸು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆ ಬಹುಮುಖ್ಯ ಕಸುಬಾಗಿದ್ದು ಈ ಕ್ಷೇತ್ರದಲ್ಲಿ ಉದ್ಯೋಗಾಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಪ್ರಮುಖ ಯೋಜನೆಗಳಾದ ಕುರಿಗಾಹಿ ಸುರಕ್ಷಾ ಯೋಜನೆ, ಕ್ಷೀರಭಾಗ್ಯ, ಪಶುಭಾಗ್ಯ ಮುಂತಾದವುಗಳ ಮೂಲಕ ಗ್ರಾಮೀಣ ರೈತರಿಗೆ ಸಿದ್ದರಾಮಯ್ಯನವರ ಸರ್ಕಾರವು ಪ್ರೋತ್ಸಾಹ ನೀಡಿದೆ. ಇದರ ಫಲವಾಗಿ ಫಲಾನುಭವಿಗಳ ಸಂಖ್ಯೆಯಲ್ಲಿ ಒಂದು ಲಕ್ಷದಷ್ಟು ಹೆಚ್ಚಳವಾಗಿ 10 ಲಕ್ಷಕ್ಕೆ ಏರಿಕೆಗೊಂಡಿತ್ತು.
ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:00 am, Mon, 9 January 23