AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟನಲ್ ರೋಡ್ ವಿಚಾರ: ಪ್ರತಿಯೊಬ್ಬರಿಗೂ ಸರ್ಕಾರವನ್ನು ಪ್ರಶ್ನಿಸುವ ಹಕ್ಕಿದೆ; ಡಿಕೆಶಿ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಂಸದ ತೇಜಸ್ವಿ ಸೂರ್ಯ ನಡುವೆ ಬೆಂಗಳೂರಿನ ಸುರಂಗ ರಸ್ತೆ ಯೋಜನೆ ವಾರ್​​ ಮುಂದುವರಿದಿದೆ. ಸದ್ಯ ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ತೇಜಸ್ವಿ ಸೂರ್ಯಗೆ ಸಾಥ್​ ನೀಡಿದ್ದು, ಪ್ರಜಾಪ್ರಭುತ್ವದಲ್ಲಿ ನಾಗರಿಕರಿಗೆ ಸರ್ಕಾರವನ್ನು ಪ್ರಶ್ನಿಸುವ ಹಕ್ಕಿದೆ ಎಂದು ಡಿಕೆ ಶಿವಕುಮಾರ್​​ ವಿರುದ್ಧ ಕಿಡಿಕಾರಿದ್ದಾರೆ.

ಟನಲ್ ರೋಡ್ ವಿಚಾರ: ಪ್ರತಿಯೊಬ್ಬರಿಗೂ ಸರ್ಕಾರವನ್ನು ಪ್ರಶ್ನಿಸುವ ಹಕ್ಕಿದೆ; ಡಿಕೆಶಿ ವಿರುದ್ಧ ವಿಜಯೇಂದ್ರ ವಾಗ್ದಾಳಿ
ಬಿವೈ ವಿಜಯೇಂದ್ರ, ಡಿಕೆ ಶಿವಕುಮಾರ್​​
ಗಂಗಾಧರ​ ಬ. ಸಾಬೋಜಿ
|

Updated on: Nov 01, 2025 | 9:54 PM

Share

ಬೆಂಗಳೂರು, ನವೆಂಬರ್​ 01: ಸುರಂಗ ರಸ್ತೆ ಯೋಜನೆಯನ್ನು ಪ್ರಶ್ನಿಸಲು ನಾನ್ಯಾರು? ಎಂಬ ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಪ್ರಶ್ನೆಗೆ ನಾನು ಒಬ್ಬ ಸಾಮಾನ್ಯ ಕನ್ನಡಿಗ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ತಿರುಗೇಟು ನೀಡಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಈ ದೇಶದ ಪ್ರಜೆಯಾಗಿ ಮತ್ತು ಹೆಮ್ಮೆಯ ಕನ್ನಡಿಗನಾಗಿ, ಪ್ರತಿಯೊಬ್ಬರಿಗೂ ಸರ್ಕಾರ ಮತ್ತು ಪ್ರತಿನಿಧಿಗಳನ್ನು ಪ್ರಶ್ನಿಸುವ ಹಕ್ಕಿದೆ. ನಾವು ಪ್ರಜಾಪ್ರಭುತ್ವದಲ್ಲಿ ವಾಸಿಸುತ್ತಿದ್ದೇವೆ ಎಂಬುದನ್ನು ನೆನಪಿಸಬೇಕೇ ಎಂದು ಡಿಕೆ ಶಿವಕುಮಾರ್​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ನಮ್ಮ ಸಂವಿಧಾನವು ಎಲ್ಲಾ ನಾಗರಿಕರಿಗೆ ಅಂದರೆ ಯುವಕರು ಅಥವಾ ವೃದ್ಧರು, ಅಧಿಕಾರದಲ್ಲಿರುವವರು ಅಥವಾ ಸಾಮಾನ್ಯರಿಗೆ ಸಮಾನ ಹಕ್ಕುಗಳನ್ನು ಖಾತರಿಪಡಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್​

ಸಾರ್ವಜನಿಕ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿಯೇ ಸಂಸದರೊಬ್ಬರನ್ನು ಇಷ್ಟೊಂದು ತಿರಸ್ಕಾರದಿಂದ ನಡೆಸಿಕೊಳ್ಳುತ್ತಿದ್ದರೆ, ಈ ರಾಜ್ಯ ಕಾಂಗ್ರೆಸ್​ ಸರ್ಕಾರದ ಮೇಲೆ ಸಾಮಾನ್ಯ ನಾಗರಿಕನಿಗೆ ಏನು ಭರವಸೆ ಇರುತ್ತದೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಟನಲ್ ರೋಡ್: ಜನರಿಂದ ಪೈಸಾ ವಸೂಲ್ ಬಗ್ಗೆ ಬಿಚ್ಚಿಟ್ಟ ತೇಜಸ್ವಿ ಸೂರ್ಯ

ಡಿಕೆ ಶಿವಕುಮಾರ್​​ ಅವರೇ, ನಿಮ್ಮ ಆಡಳಿತದ ಅಧ್ಯಕ್ಷತೆಯಲ್ಲಿ ಬೆಂಗಳೂರು ಈಗಾಗಲೇ ನರಳುತ್ತಿದೆ. ಈ ಸ್ಥಿತಿಗೆ ಕಾರಣವಾದ ಸರ್ಕಾರವನ್ನು ಪ್ರತಿದಿನ ನಾಗರಿಕರು ಶಪಿಸುತ್ತಿದ್ದಾರೆ. ಅಸ್ತಿತ್ವದಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವ ಬದಲು, ನೀವು ಹೊಸ ಸಮಸ್ಯೆಗಳನ್ನು ಹುಟ್ಟುಹಾಕುತ್ತಿರುವಂತೆ ತೋರುತ್ತಿದೆ. ನಿಮ್ಮ ತಪ್ಪು ನಿರ್ಧಾರಗಳಿಂದ ಹೊರಬಂದು ಜನರ ಸಮಸ್ಯೆಯನ್ನು ಆಲಿಸಿ ಮತ್ತು ಬೆಂಗಳೂರಿನ ಅಭಿವೃದ್ಧಿಯತ್ತ ಗಮನಹರಿಸಿ ಎಂದು ಬಿ.ವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು?

ಮಾನ್ಯರೇ, ನಾನು ಒಬ್ಬ ಸಾಮಾನ್ಯ ಕನ್ನಡಿಗ. ನಮ್ಮ ನಗರವನ್ನು ಪ್ರೀತಿಸುವ ಒಬ್ಬ ಬೆಂಗಳೂರಿನ ಹುಡುಗ. ಪ್ರತಿದಿನ ಸಂಚಾರ ದಟ್ಟಣೆಯಲ್ಲಿ ನರಳುವ ಒಬ್ಬ ಸಾಮಾನ್ಯ ಮನುಷ್ಯ. ಒಬ್ಬ ಬೆಂಗಳೂರಿಗನಾಗಿ ಮತ್ತು ನಗರದ ಭವಿಷ್ಯದ ಬಗ್ಗೆ ತೀವ್ರ ಕಾಳಜಿ ಹೊಂದಿರುವವನಾಗಿ, ಸುರಂಗ ರಸ್ತೆಯ ನಿರ್ಧಾರ ತೆಗೆದುಕೊಳ್ಳುವ ಮೊದಲು, ಅದು ನಗರದ ಅತ್ಯುತ್ತಮ ಹಿತಾಸಕ್ತಿಗಳನ್ನು ಪೂರೈಸುತ್ತದೆ ಎಂದು ಖಚಿತಪಡಿಸಿಕೊಳ್ಳಲು, ತಜ್ಞರು ಮತ್ತು ಸಾರಿಗೆ ಯೋಜಕರನ್ನು ಸಮಾಲೋಚಿಸುವಂತೆ ನಾನು ಉಪಮುಖ್ಯಮಂತ್ರಿಗಳನ್ನು ವಿನಂತಿಸುತ್ತೇನೆ ಎಂದಿದ್ದಾರೆ.

ಬೆಂಗಳೂರಿನ ಅನೇಕ ನಾಗರಿಕರು ಈ ಪ್ರಸ್ತಾವನೆಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ, ಅದನ್ನು ವಿರೋಧಿಸಲು ಅವರಿಗೆ ಯಾವ ಅಧಿಕಾರವಿದೆ ಎಂದು ಉಪಮುಖ್ಯಮಂತ್ರಿಗಳು ಕೇಳುತ್ತಾರೆ. ನೆನಪಿರಲಿ, ನಾವು ತೆರಿಗೆ ಪಾವತಿಸುವ ನಾಗರಿಕರು. ಬೆಂಗಳೂರು ನಮ್ಮೆಲ್ಲರಿಗೂ ಸೇರಿದ್ದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಟನಲ್ ರಸ್ತೆ ಏಕೆ ಬೇಡ? ಟ್ರಾಫಿಕ್ ನಿವಾರಣೆಗೆ ಏನ್‌ ಮಾಡ್ಬೇಕು? ಎಳೆಎಳೆಯಾಗಿ ಬಿಚ್ಚಿಟ್ಟ ತೇಜಸ್ವಿ ಸೂರ್ಯ

ಒಂದು ಕಾಲದಲ್ಲಿ ಮಹಾನ್ ದೂರದೃಷ್ಟಿ ಹೊಂದಿದ್ದ ನಾಯಕರಿಂದ ನಿರ್ಮಿಸಲ್ಪಟ್ಟ ಬೆಂಗಳೂರು, ಈಗ ಕಳಪೆ ಯೋಜನೆಯಿಂದಾಗಿ ಸಮಸ್ಯೆ ಎದುರಿಸುತ್ತಿದೆ, ಅದರ ಭವಿಷ್ಯವನ್ನು ರಕ್ಷಿಸುವುದು ನಮ್ಮ ಸಾಮೂಹಿಕ ಜವಾಬ್ದಾರಿ.

ಬೆಂಗಳೂರಿಗೆ ಒಂದು ಪರಂಪರೆಯನ್ನು ಬಿಟ್ಟು ಹೋಗಬೇಕೆಂದು ಉಪಮುಖ್ಯಮಂತ್ರಿಗಳು ಹೇಳುತ್ತಿದ್ದು, ಸಾಮಾನ್ಯ ಮನುಷ್ಯನಿಗೆ ಸಹ ಲಭ್ಯವಾಗುವ ಬೆಂಗಳೂರನ್ನು ಮತ್ತು ನಗರಕ್ಕೆ ಸಾಧ್ಯವಿರುವ ಹಾಗೂ ಅಗತ್ಯವಿರುವ ಯೋಜನೆಗಳನ್ನು ನಿರ್ಮಿಸುವಂತೆ ತೇಜಸ್ವಿ ಸೂರ್ಯ ವಿನಂತಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ