Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ದರ ಏರಿಕೆ ಬಗ್ಗೆ ಟೀಕೆ: ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಸ್ಪಷ್ಟನೆ

ಮೇ 12ರಂದು KERC ಪ್ರತಿ ಯೂನಿಟ್​​ಗೆ 70 ಪೈಸೆ ಏರಿಕೆ ಮಾಡಿದೆ. ಈ ಹಿನ್ನೆಲೆ ಬಿಲ್​​ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿದೆ.

ವಿದ್ಯುತ್ ದರ ಏರಿಕೆ ಬಗ್ಗೆ ಟೀಕೆ: ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಸ್ಪಷ್ಟನೆ
ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 11, 2023 | 7:44 PM

ಬೆಂಗಳೂರು: ರಾಜ್ಯದ ಜನರಿಗೆ ಉಚಿತ ಗ್ಯಾರಂಟಿಗಳಲ್ಲಿ ಒಂದಾಗಿರುವ ಉಚಿತ 200 ಯೂನಿಟ್​ ಕರೆಂಟ್​​ ನೀಡುವ ಭರವಸೆಯನ್ನು ಕಾಂಗ್ರೆಸ್​ ಈಗಾಗಲೇ ಜಾರಿ ಮಾಡಿದೆ. ಆದರೆ ಈ ಬಾರಿಯ ವಿದುತ್ಯ್ (Electricity tariff hike) ​ಗಳು ಕಳೆದ ಬಾರಿಗಿಂತ ಹೆಚ್ಚಾಗಿ ಬಂದದ್ದನ್ನು ಕಂಡು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಜನರ ಗೊಂದಲಗಳನ್ನು ಬಗೆ ಹರಿಸಲು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ (Mahantesh Bilagi) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಮೇ 12ರಂದು KERC ಪ್ರತಿ ಯೂನಿಟ್​​ಗೆ 70 ಪೈಸೆ ಏರಿಕೆ ಮಾಡಿದೆ. ಈ ಹಿನ್ನೆಲೆ ಬಿಲ್​​ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿದೆ. ಜೂನ್ ತಿಂಗಳಲ್ಲಿ ನೀಡುವ ಮೇ ತಿಂಗಳ ವಿದ್ಯುತ್ ಬಳಕೆಯ ವಿದ್ಯುತ್​​ ಬಿಲ್​​ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆ KERC ಆದೇಶದ ಪ್ರಕಾರ 2 ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕ ಸಂಗ್ರಹ ಮಾಡಲಾಗುತ್ತಿದೆ.

ಇದನ್ನೂ ಓದಿ: 100 ಯೂನಿಟ್ ಬಳಸುವವರಿಗೆ 200 ಯೂನಿಟ್ ವಿದ್ಯುತ್ ಉಚಿತ ಯಾಕೆ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೊದಲ 100 ಯೂನಿಟ್‌​​ಗೆ ಪ್ರತಿ ಯೂನಿಟ್‌ ದರ 4.75 ರೂ. ವಿಧಿಸಲಾಗಿದೆ. 100 ಯೂನಿಟ್ ಮೀರಿದರೆ 2ನೇ ಶ್ರೇಣಿ ದರ ಪ್ರತಿ ಯೂನಿಟ್​​ಗೆ 7 ರೂ. ಅನ್ವಯವಾಗಲಿದೆ. ಈ ಮೊದಲು ಮೂರು ಶ್ರೇಣಿ ದರಗಳಲ್ಲಿ ಶುಲ್ಕ ಸಂಗ್ರಹಿಸಲಾಗುತ್ತಿತ್ತು. ಮೊದಲ 50 ಯೂನಿಟ್​​​ಗೆ 4.15 ರೂ., ನಂತರದ 50 ಯೂನಿಟ್​​​ಗೆ 5.6 ರೂ. 100 ಯೂನಿಟ್ ಮೀರಿದರೆ 7.15 ರೂ. ಸಂಗ್ರಹಿಸಲಾಗುತ್ತಿತ್ತು.

ಇದನ್ನೂ ಓದಿ: ಒನ್ ಟು ತ್ರಿಬಲ್ ವಿದ್ಯುತ್ ಬಿಲ್ ಹೆಚ್ಚಳ: ವಿವಿಧ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜನಾಕ್ರೋಶ

ಪರಿಷ್ಕರಣೆ ಆದೇಶದಲ್ಲಿ 1ರಿಂದ 50 ಕಿ.ವ್ಯಾ ಮಂಜೂರಾತಿ ಲೋಡ್​​ಗೆ 110 ರೂ. 50 ಕಿ.ವ್ಯಾ. ಮೇಲ್ಪಟ್ಟ ವಿದ್ಯುತ್‌ ಮುಂಜೂರಾತಿ ಲೋಡ್​​ಗೆ 210 ರೂ. ಬಿಲ್ ಬರಲಿದೆ ಎಂದು ತಿಳಿಸಲಾಗಿದೆ.

ಏಪ್ರಿಲ್ ತಿಂಗಳಿನಿಂದಲೇ ಕೆಇಆರ್​ಸಿ ವಿದ್ಯುತ್ ದರ ಏರಿಕೆ

ಏಪ್ರಿಲ್ ತಿಂಗಳಿನಿಂದಲೇ ಕೆಇಆರ್​ಸಿ ವಿದ್ಯುತ್ ದರ ಏರಿಕೆ ಮಾಡಿತ್ತು. ಆದರೆ ಚುನಾವಣೆ ಹಿನ್ನಲೆ ಬಿಜೆಪಿ ಇದಕ್ಕೆ ತಡೆ ನೀಡಿತ್ತು. ಈಗ ಹೊಸ ಸರ್ಕಾರ ಬರುತ್ತಿದ್ದಂತೆ ಏಪ್ರಿಲ್ ಮೇ ತಿಂಗಳ ಏರಿಕೆ ಮೊತ್ತವನ್ನ ಒಮ್ಮಿಂದೊಮ್ಮೆಲೇ ಸೇರಿಸಿ ಗ್ರಾಹಕರಿಗೆ ಬಿಲ್ ನೀಡಲಾಗುತ್ತಿದೆ. ಕಳೆದ ಬಾರಿ ಮೇ ತಿಂಗಳ ಬಿಲ್ ಮೊತ್ತ 881 ರೂ. ಇದ್ದವರಿಗೆ ಜೂನ್ ತಿಂಗಳ ವಿದ್ಯುತ್ ಬಿಲ್ 2067 ರೂ.ಗೆ ಏರಿಕೆಯಾಗಿದೆ. ಕಳೆದ ಬಾರಿ ಮೇ ತಿಂಗಳ ಬಿಲ್ 3976 ರೂ. ಇದ್ದರೆ ಜೂನ್ ತಿಂಗಳ ಬಿಲ್ 6052 ರೂ.ಗೆ ಏರಿಕೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..