ಬೆಂಗಳೂರು: ರಾಜ್ಯದ ಜನರಿಗೆ ಉಚಿತ ಗ್ಯಾರಂಟಿಗಳಲ್ಲಿ ಒಂದಾಗಿರುವ ಉಚಿತ 200 ಯೂನಿಟ್ ಕರೆಂಟ್ ನೀಡುವ ಭರವಸೆಯನ್ನು ಕಾಂಗ್ರೆಸ್ ಈಗಾಗಲೇ ಜಾರಿ ಮಾಡಿದೆ. ಆದರೆ ಈ ಬಾರಿಯ ವಿದುತ್ಯ್ (Electricity tariff hike) ಗಳು ಕಳೆದ ಬಾರಿಗಿಂತ ಹೆಚ್ಚಾಗಿ ಬಂದದ್ದನ್ನು ಕಂಡು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಜನರ ಗೊಂದಲಗಳನ್ನು ಬಗೆ ಹರಿಸಲು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ (Mahantesh Bilagi) ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಮೇ 12ರಂದು KERC ಪ್ರತಿ ಯೂನಿಟ್ಗೆ 70 ಪೈಸೆ ಏರಿಕೆ ಮಾಡಿದೆ. ಈ ಹಿನ್ನೆಲೆ ಬಿಲ್ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿದೆ. ಜೂನ್ ತಿಂಗಳಲ್ಲಿ ನೀಡುವ ಮೇ ತಿಂಗಳ ವಿದ್ಯುತ್ ಬಳಕೆಯ ವಿದ್ಯುತ್ ಬಿಲ್ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆ KERC ಆದೇಶದ ಪ್ರಕಾರ 2 ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕ ಸಂಗ್ರಹ ಮಾಡಲಾಗುತ್ತಿದೆ.
ಇದನ್ನೂ ಓದಿ: 100 ಯೂನಿಟ್ ಬಳಸುವವರಿಗೆ 200 ಯೂನಿಟ್ ವಿದ್ಯುತ್ ಉಚಿತ ಯಾಕೆ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಮೊದಲ 100 ಯೂನಿಟ್ಗೆ ಪ್ರತಿ ಯೂನಿಟ್ ದರ 4.75 ರೂ. ವಿಧಿಸಲಾಗಿದೆ. 100 ಯೂನಿಟ್ ಮೀರಿದರೆ 2ನೇ ಶ್ರೇಣಿ ದರ ಪ್ರತಿ ಯೂನಿಟ್ಗೆ 7 ರೂ. ಅನ್ವಯವಾಗಲಿದೆ. ಈ ಮೊದಲು ಮೂರು ಶ್ರೇಣಿ ದರಗಳಲ್ಲಿ ಶುಲ್ಕ ಸಂಗ್ರಹಿಸಲಾಗುತ್ತಿತ್ತು. ಮೊದಲ 50 ಯೂನಿಟ್ಗೆ 4.15 ರೂ., ನಂತರದ 50 ಯೂನಿಟ್ಗೆ 5.6 ರೂ.
100 ಯೂನಿಟ್ ಮೀರಿದರೆ 7.15 ರೂ. ಸಂಗ್ರಹಿಸಲಾಗುತ್ತಿತ್ತು.
ಇದನ್ನೂ ಓದಿ: ಒನ್ ಟು ತ್ರಿಬಲ್ ವಿದ್ಯುತ್ ಬಿಲ್ ಹೆಚ್ಚಳ: ವಿವಿಧ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜನಾಕ್ರೋಶ
ಪರಿಷ್ಕರಣೆ ಆದೇಶದಲ್ಲಿ 1ರಿಂದ 50 ಕಿ.ವ್ಯಾ ಮಂಜೂರಾತಿ ಲೋಡ್ಗೆ 110 ರೂ. 50 ಕಿ.ವ್ಯಾ. ಮೇಲ್ಪಟ್ಟ ವಿದ್ಯುತ್ ಮುಂಜೂರಾತಿ ಲೋಡ್ಗೆ 210 ರೂ. ಬಿಲ್ ಬರಲಿದೆ ಎಂದು ತಿಳಿಸಲಾಗಿದೆ.
ಏಪ್ರಿಲ್ ತಿಂಗಳಿನಿಂದಲೇ ಕೆಇಆರ್ಸಿ ವಿದ್ಯುತ್ ದರ ಏರಿಕೆ ಮಾಡಿತ್ತು. ಆದರೆ ಚುನಾವಣೆ ಹಿನ್ನಲೆ ಬಿಜೆಪಿ ಇದಕ್ಕೆ ತಡೆ ನೀಡಿತ್ತು. ಈಗ ಹೊಸ ಸರ್ಕಾರ ಬರುತ್ತಿದ್ದಂತೆ ಏಪ್ರಿಲ್ ಮೇ ತಿಂಗಳ ಏರಿಕೆ ಮೊತ್ತವನ್ನ ಒಮ್ಮಿಂದೊಮ್ಮೆಲೇ ಸೇರಿಸಿ ಗ್ರಾಹಕರಿಗೆ ಬಿಲ್ ನೀಡಲಾಗುತ್ತಿದೆ. ಕಳೆದ ಬಾರಿ ಮೇ ತಿಂಗಳ ಬಿಲ್ ಮೊತ್ತ 881 ರೂ. ಇದ್ದವರಿಗೆ ಜೂನ್ ತಿಂಗಳ ವಿದ್ಯುತ್ ಬಿಲ್ 2067 ರೂ.ಗೆ ಏರಿಕೆಯಾಗಿದೆ. ಕಳೆದ ಬಾರಿ ಮೇ ತಿಂಗಳ ಬಿಲ್ 3976 ರೂ. ಇದ್ದರೆ ಜೂನ್ ತಿಂಗಳ ಬಿಲ್ 6052 ರೂ.ಗೆ ಏರಿಕೆಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.