ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ: ಎಂಎಲ್ಸಿಗಳಿಗೂ ಮಹತ್ವದ ಜವಾಬ್ದಾರಿ ನೀಡಿದ ಡಿಕೆಶಿ
ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ವಿಧಾನಪರಿಷತ್ ಸದಸ್ಯರಿಗೂ ಕೆಲ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ..
ಬೆಂಗಳೂರು: ಬಿಜೆಪಿ ನೀತಿಗಳು, ಆಡಳಿತ ವೈಖರಿ, ಸಂಘರ್ಷದ ವಿರುದ್ಧ ಕಾಂಗ್ರೆಸ್ ಆರಂಭಿಸಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಸೆ.30 ರಂದು ಗುಂಡ್ಲುಪೇಟೆ ಮೂಲಕ ಆರಂಭಗೊಳ್ಳಲಿದೆ.
ಕೇರಳದ ವೈನಾಡು ಮೂಲಕ ಕರ್ನಾಟಕದ ಗಡಿ ಭಾಗ ಗುಂಡ್ಲುಪೇಟೆ ತಲುಪುವ ಭಾರತ್ ಜೋಡೋ ಯಾತ್ರೆ ರಾಜ್ಯದ 8 ಜಿಲ್ಲೆಗಳಲ್ಲಿ 21 ದಿನಗಳ ಕಾಲ, 510 ಕಿಮೀ ಕೈಪಡೆ ಪಾದಯಾತ್ರೆ ನಡೆಸಲಿದೆ. ಇದಕ್ಕಾಗಿ ಕರ್ನಾಟಕ ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದು, ಕೆಲ ಸಮಿತಿಗಳನ್ನು ರಚಿಸಲಾಗಿದೆ. ವಿವಿಧ ಸಮಿತಿಗಳಿಗೆ ಶಾಸಕರು, ಮಾಜಿ ಶಾಸಕರುಗಳನ್ನು ನೇಮಿಸಲಾಗಿದೆ.
ಇದೀಗ ವಿಧಾನಪರಿಷತ್ ಸದಸ್ಯರಿಗೂ ಕೆಲ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸೂಚನೆ ಮೇರೆಗೆ ಡಿಕೆ ಶಿವಕುಮಾರ್ ಅವರು 21 ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಿಗೆ ಯಾತ್ರೆಯ ಒಂದೊಂದು ದಿನದ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.
21 ವಿಧಾನ ಪರಿಷತ್ ಸದಸ್ಯರಿಗೆ 21 ದಿನಗಳ ಯಾತ್ರೆಯ ಒಂದೊಂದು ದಿನದ ಜವಾಬ್ದಾರಿ ನೀಡಲಾಗಿದ್ದು, ಜನರ ಸೇರಿಸುವಿಕೆ, ವಾಹನ ವ್ಯವಸ್ಥೆ, ಜಾಹೀರಾತು ಮತ್ತು ರಿಫ್ರೆಶ್ ಮೆಂಟ್ ವ್ಯವಸ್ಥೆ ಸೇರಿದಂತೆ ಉಸ್ತುವಾರಿ ನೋಡಕೊಳ್ಳುವ ಜವಾಬ್ದಾರಿ ನೋಡಿಕೊಳ್ಳಬೇಕಿದೆ.
ಭಾರತ್ ಜೋಡೋ ಯಾತ್ರೆ ಸಂಬಂಧ ಮಾಹಿತಿ ನೀಡಿದರು. ರಾಜ್ಯದಲ್ಲಿ ಒಟ್ಟು 511 ಕಿಲೋಮೀಟರ್ 21 ದಿನ ಪಾದಯಾತ್ರೆ ನಡೆಯಲಿದೆ. ರಾಜ್ಯದಲ್ಲಿ ಮೂರು ಹಂತಗಳಲ್ಲಿ ಭಾರತ್ ಜೋಡೋ ಯಾತ್ರೆ ಸಂಚರಿಸಲಿದೆ. ಮೂರು ಹಂತಗಳಲ್ಲಿ ಅಂದ್ರೆ ಒಟ್ಟು 7 ಲೋಕಸಭಾ ಕ್ಷೇತ್ರಗಳು, 20 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ್ ಜೋಡೋ ಯಾತ್ರೆ ಸಂಚಾರ ನಡೆಸಲಿದೆ.
ಮೊದಲ ಹಂತದ ರೂಟ್ ಮ್ಯಾಪ್ ತಮಿಳುನಾಡು ರಾಜ್ಯದಿಂದ ಗುಂಡ್ಲುಪೇಟೆ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರವೇಶ ಮಾಡಲಿದೆ. ಗುಂಡ್ಲುಪೇಟೆ, ನಂಜನಗೂಡು, ಮೈಸೂರು, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಗೆ ಸಂಚಾರ ಮಾಡಲಿದೆ. ನಂತರ ಮೇಲುಕೋಟೆಯಿಂದ ರಂಗನಾಥಪುರದ ಮೂಲಕ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಲಾಗುತ್ತದೆ.
ರಂಗನಾಥಪುರದಿಂದ ತುಮಕೂರಿನ ತುರುವೇಕೆರೆ ನಂತರ ಇಲ್ಲಿಂದ ಚಿಕ್ಕನಾಯಕನಹಳ್ಳಿ ಹುಳಿಯಾರ್ ಮೂಲಕ ಚಿತ್ರದುರ್ಗ ಹಿರಿಯೂರುಗೆ ಪಾದಯಾತ್ರೆ ತೆರಳಲಿದೆ. ಹಿರಿಯೂರಿನಿಂದ ಚಳ್ಳಕೇರೆಗೆ, ಚಳ್ಳಕೆರೆಯಿಂದ ರಾಯಪುರಕ್ಕೆ ಯಾತ್ರೆ ತೆರಳಲಿದ್ದು, ಅಲ್ಲಿಂದ ಆಂಧ್ರ ಪ್ರವೇಶವನ್ನು ಪಾದಯಾತ್ರೆ ಪ್ರವೇಶಿಸಲಿದೆ.
ಎರಡನೇ ಹಂತದ ರೂಟ್ ಮ್ಯಾಪ್ ಹೀರೆಹಾಳ್ ನಿಂದ ಓಬಾಳಪುರ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡಲಾಗುತ್ತದೆ. ಹಲಕುಂಡಿ, ಬಳ್ಳಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಸಂಚಾರ ಆರಂಭಗೊಂಡು ಅಲ್ಲಿಂದ ಅಲುರ್ ಮೂಲಕ ಆಂಧ್ರ ಪ್ರವೇಶ ಮಾಡಲಿದೆ.
ಮೂರನೇ ಹಂತದ ರೂಟ್ ಮ್ಯಾಪ್ ಮಾಧವರಂ ಮೂಲಕ ರಾಯಚೂರಿನ ಗಿಲ್ಲೆಸೂಗೂರು ಮೂಲಕ ಪಾದಯಾತ್ರೆ ತಂಡ ಪ್ರವೇಶ ಮಾಡಲಿದೆ. ಗಿಲ್ಲೆಸೂಗೂರು ನಿಂದ ಯರೇಗಾರಕ್ಕೆ ಪಾದಯಾತ್ರೆ ಸಂಚರಿಸಲಿದೆ. ಯರೇಗಾರ ಮೂಲಕ ರಾಯಚೂರು, ರಾಯಚೂರಿನಿಂದ ದೇವಸೂಗೂರುಗೆ ಭಾರತ್ ಜೋಡೋ ಯಾತ್ರೆ ತೆರಳಲಿದೆ. ದೇವಸೂಗೂರಿನಿಂದ ವಿಕಾರಬಾದ್ ಮೂಲಕ ತೆಲಂಗಾಣಕ್ಕೆ ಪ್ರವೇಶ ಮಾಡಲಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:26 pm, Mon, 26 September 22